11.03.23 - ಯೇಸುಸ್ವಾಮಿಯ ಉಪದೇಶವನ್ನು ಕೇಳಲು ಎಲ್ಲಾ ಸುಂಕದವರೂ ಪಾಪಿಗಳೂ ಬರುತ್ತಿದ್ದರು

ಮೊದಲನೆಯ ವಾಚನ : ಮೀಕ 7:14-15, 18-20


ಸರ್ವೇಶ್ವರಾ, ನಿಮ್ಮ ಮಂದೆಗೆ ಸೇರಿದ ಜನರನ್ನು ಕುರಿಗಾಹಿಯಂತೆ ಪರಿಪಾಲಿಸಿರಿ. ನಿಮ್ಮ ಸ್ವಾಸ್ತ್ಯವಾಗಿ, ಮಂದೆಯಾಗಿ ಇರುವಂಥ ಜನರು, ಸುತ್ತಮುತ್ತಲು ಫಲವತ್ತಾದ ಹಸಿರು ಭೂಮಿಯಿದ್ದರೂ ಮರಳುಗಾಡಿನಲ್ಲಿ ಪ್ರತ್ಯೇಕವಾಗಿ ಜೀವಿಸುತ್ತಿರುವರು. ಪೂರ್ವಕಾಲದಲ್ಲಿದ್ದಂತೆ, ಈಗ ಅವರು ಬಾಷಾನ್ ಮತ್ತು ಗಿಲ್ಯಾದ್ ನಾಡುಗಳಿಗೆ ತೆರಳಿ ಪೋಷಣೆ ಪಡೆಯಲಿ. ಈಜಿಪ್ಟ್ ದೇಶದಿಂದ ನಮ್ಮನ್ನು ಹೊರತಂದ ದಿನಗಳಲ್ಲಿ ನೀವು ಮಾಡಿದ ಮಹತ್ಕಾರ್ಯಗಳನ್ನು ಮರಳಿ ಮಾಡಿತೋರಿಸಿರಿ. ನಿಮ್ಮಂಥ ದೇವರು ಯಾರಿದ್ದಾರೆ? ತಮ್ಮ ಸ್ವಂತ ಜನರಲ್ಲಿ ಅಳಿದುಳಿದವರ ಅಪರಾಧಗಳನ್ನು ಲೆಕ್ಕಿಸದೆ, ಅವರ ದ್ರೋಹಗಳನ್ನು ಕ್ಷಮಿಸುವಂಥ ದೇವರು ಯಾರಿದ್ದಾರೆ? ನೀವು ನಿತ್ಯಕ್ಕೂ ಕೋಪಿಷ್ಠರಾಗಿರದೆ ಕರುಣೆ ತೋರಿಸುವುದರಲ್ಲೇ ಸಂತುಷ್ಟರಾಗುವಿರಿ. ಮತ್ತೊಮ್ಮೆ ನಮಗೆ ದಯೆತೋರಿ. ನಮ್ಮ ಅಪರಾಧಗಳನ್ನು ಅಳಿಸಿಬಿಡಿ; ಅವನ್ನು ತುಳಿದು ಸಮುದ್ರದ ತಳಕ್ಕೆ ತಳ್ಳಿಬಿಡಿ. ಪುರಾತನ ಕಾಲದಲ್ಲಿ ನಮ್ಮ ಪಿತೃಗಳಿಗೆ ಪ್ರಮಾಣಮಾಡಿದಂತೆ ಯಕೋಬ ವಂಶದವರಿಗೆ ನಂಬಿಕಸ್ಥರಾಗಿರಿ. ಅಬ್ರಹಾಮನ ವಂಶದವರಿಗೆ ಪ್ರೀತಿಪರರಾಗಿರಿ.

ಕೀರ್ತನೆ: 103:1-4, 9-12, 21

ಶ್ಲೋಕ : ಪ್ರಭು ದಯಾಳು, ಕೃಪಾಪೂರ್ಣನು I ಸಹನಶೀಲನು, ಪ್ರೀತಿಮಯನು II

ಭಜಿಸು ನನ್ನ ಮನವೇ, ಭಜಿಸು ಪ್ರಭುವನು I
ನನ್ನ ಅಂತರಂಗವೇ, ಭಜಿಸು ಆತನನು I
ನೆನೆ ಆತನ ಪರಮಪಾವನ ನಾಮವನು II

ಭಜಿಸು ನನ್ನ ಮನವೇ, ಭಜಿಸು ಪ್ರಭುವನು I

ಮರೆಯದಿರು ಆತನ ಉಪಕಾರಗಳೊಂದನು II
ಮನ್ನಿಸುವನಾತ ನನ್ನ ದೋಷಗಳನು I
ವಾಸಿಮಾಡುವನು ನನ್ನ ರೋಗಗಳನು II

ಉಳಿಸುವನು ಪಾತಾಳದ ಕೂಪದಿಂದ ನನ್ನನು I
ಮುಡಿಸುವನೆನಗೆ ದಯದಾಕ್ಷಿಣ್ಯದ ಮುಕುಟವನು II
ಆತನು ಸದಾ ತಪ್ಪು ಹುಡುಕುವವನಲ್ಲ I
ನಿತ್ಯಕು ಕೋಪ ಇಟ್ಟುಕೊಳ್ಳುವವನಲ್ಲ I|

ನಮ್ಮ ಪಾಪಗಳಿಗೆ ತಕ್ಕಂತೆ ಆತ ವರ್ತಿಸಲಿಲ್ಲ I
ನಮ್ಮ ಅಪರಾಧಗಳಿಗೆ ತಕ್ಕಹಾಗೆ ದಂಡಿಸಲಿಲ್ಲ II
ಆಕಾಶಮಂಡಲವು ಭೂಮಿಯಿಂದೆಷ್ಟೋ ಉನ್ನತ I
ದೈವಭಯವುಳ್ಳವರಿಗೆ ಆತನ ಕೃಪೆ ಅಷ್ಟೇ ಸನ್ನುತ II

ಪಡುವಣದಿಂದ ಮೂಡಣವೆಷ್ಟೋ ದೂರ I
ದೂಡಿದನಾತ ನಮ್ಮ ಪಾಪಗಳನು ಅಷ್ಟು ದೂರ II

ಶುಭಸಂದೇಶ : ಲೂಕ  15:1-3, 11-32


ಯೇಸುಸ್ವಾಮಿಯ ಉಪದೇಶವನ್ನು ಕೇಳಲು ಎಲ್ಲಾ ಸುಂಕದವರೂ ಪಾಪಿಗಳೂ ಬರುತ್ತಿದ್ದರುಇದನ್ನು ಕಂಡ ಫರಿಸಾಯರು ಮತ್ತು ಧರ್ಮಶಾಸ್ತ್ರಿಗಳು, “ ಮನುಷ್ಯ ಪಾಪಿಗಳನ್ನು ಬರಮಾಡಿಕೊಳ್ಳುತ್ತಾನೆಅವರೊಡನೆ ಊಟಮಾಡುತ್ತಾನೆ,” ಎಂದು ಗೊಣಗಿದರು ಸಂದರ್ಭದಲ್ಲಿ ಯೇಸು  ಸಾಮತಿಯನ್ನು ಹೇಳಿದರುಯೇಸುಸ್ವಾಮಿ ಮುಂದುವರಿಸುತ್ತಾ  ಸಾಮತಿಯನ್ನು ಹೇಳಿದರು: “ಒಬ್ಬಾತನಿಗೆ ಇಬ್ಬರು ಮಕ್ಕಳಿದ್ದರುಅವರಲ್ಲಿ ಕಿರಿಯವನು, ‘ಅಪ್ಪಾಆಸ್ತಿಯಲ್ಲಿ ನನಗೆ ಬರಬೇಕಾದ ಪಾಲನ್ನು ಕೊಟ್ಟುಬಿಡು,’ ಎಂದು ಕೇಳಿದತಂದೆ ಅವರಿಬ್ಬರಿಗೂ ಆಸ್ತಿಯನ್ನು ಹಂಚಿಕೊಟ್ಟಕೆಲವು ದಿವಸಗಳಾದ ಮೇಲೆ ಕಿರಿಯ ಮಗ ತನ್ನ ಆಸ್ತಿಯನ್ನೆಲ್ಲಾ ಮಾರಿಬಂದ ಹಣವನ್ನು ತೆಗೆದುಕೊಂಡು ಮನೆಬಿಟ್ಟು ಹೋದದೂರದೇಶಕ್ಕೆ ಹೋಗಿದುಂದು ಜೀವನ ನಡೆಸಿ ಹಣವನ್ನೆಲ್ಲಾ ಪೋಲುಮಾಡಿಬಿಟ್ಟಹೀಗೆ ಅವನು ಎಲ್ಲವನ್ನು ಹಾಳುಮಾಡಿಕೊಂಡಮೇಲೆ  ದೇಶದಾದ್ಯಂತ ಘೋರವಾದ ಕ್ಷಾಮ ತಲೆದೋರಿತುನಿರ್ಗತಿಕನಾದ ಅವನು ಹೋಗಿಆದೇಶದ ನಿವಾಸಿಯೊಬ್ಬನನ್ನು ಆಶ್ರಯಿಸಿದಆತ ಇವನನ್ನು ಹಂದಿ ಮೇಯಿಸಲು ತನ್ನ ರೊಪ್ಪಗಳಿಗೆ ಕಳುಹಿಸಿದಅಲ್ಲಿ ಹಂದಿ ತಿನ್ನುತ್ತಿದ್ದ ಕಾಳುಗಳನ್ನಾದರೂ ತಿಂದು ಹಸಿವನ್ನು ನೀಗಿಸಿಕೊಳ್ಳಲು ಹಂಬಲಿಸಿದಆದರೆ ಅದನ್ನೂ ಅವನಿಗೆ ಯಾರೂ ಕೊಡಲಿಲ್ಲಆಗ ಅವನಿಗೆ ಬುದ್ಧಿ ಬಂದಿತುನನ್ನ ತಂದೆಯ ಮನೆಯಲ್ಲಿ ಎಷ್ಟೋ ಮಂದಿ ಕೂಲಿಯಾಳುಗಳಿಗೆ ತಿಂದು ತೇಗುವಷ್ಟು ಆಹಾರವಿದೆನಾನಾದರೋ ಇಲ್ಲಿ ಹಸಿವಿನಿಂದ ಸಾಯುತ್ತಾ ಇದ್ದೇನೆನಾನು ಇದೀಗಲೇ ಹೊರಟುತಂದೆಯ ಬಳಿಗೆ ಹೋಗಿ, ‘ಅಪ್ಪಾದೇವರಿಗೂ ನಿಮಗೂ ವಿರುದ್ಧವಾಗಿ ಪಾಪಮಾಡಿದ್ದೇನೆನಿಮ್ಮ ಮಗನು ಎನಿಸಿಕೊಳ್ಳುವ ಯೋಗ್ಯತೆಯೂ ನನಗಿಲ್ಲನನ್ನನ್ನು ನಿಮ್ಮ ಮನೆಯ ಕೂಲಿಯಾಳುಗಳಲ್ಲಿ ಒಬ್ಬನನ್ನಾಗಿ ಇಟ್ಟುಕೊಳ್ಳಿ ಎಂದು ಬೇಡಿಕೊಳ್ಳುತ್ತೇನೆ,’ ಎಂದುಕೊಂಡಅಂತೆಯೇ ಎದ್ದು ತಂದೆಯ ಬಳಿಗೆ ಹೊರಟ.

ಮಗನು ಇನ್ನೂ ಅಷ್ಟು ದೂರದಲ್ಲಿ ಇರುವಾಗಲೇ ತಂದೆ ನೋಡಿದಆತನ ಹೃದಯ ಕನಿಕರದಿಂದ ಕರಗಿಹೋಯಿತುಓಡಿಹೋಗಿಮಗನನ್ನು ಬಿಗಿಯಾಗಿ ತಬ್ಬಿಕೊಂಡು ಮುತ್ತಿಟ್ಟಆದರೂ ಮಗನು, ‘ಅಪ್ಪಾದೇವರಿಗೂ ನಿಮಗೂ ವಿರುದ್ಧವಾಗಿ ಪಾಪ ಮಾಡಿದ್ದೇನೆನಿಮ್ಮ ಮಗನೆನಿಸಿಕೊಳ್ಳುವ ಯೋಗ್ಯತೆಯೂ ನನಗಿಲ್ಲ’ ಎಂದತಂದೆಯಾದರೋ ಆಳುಗಳನ್ನು ಕರೆದು, 'ಅತ್ಯುತ್ತಮವಾದ ಅಂಗಿಯನ್ನು ತಕ್ಷಣವೇ ತಂದು ಇವನಿಗೆ ಉಡಿಸಿರಿಬೆರಳಿಗೆ ಉಂಗುರವನ್ನು ತೊಡಿಸಿರಿಕಾಲಿಗೆ ಪಾದರಕ್ಷೆಯನ್ನು ಮೆಟ್ಟಿಸಿರಿಕೊಬ್ಬಿಸಿದ ಪ್ರಾಣಿಯನ್ನು ತಂದು ಕೊಯ್ಯಿರಿಹಬ್ಬಮಾಡೋಣಆನಂದಿಸೋಣಏಕೆಂದರೆ ನನ್ನ ಮಗ ಸತ್ತುಹೋಗಿದ್ದಈಗ ಬದುಕಿ ಬಂದಿದ್ದಾನೆತಪ್ಪಿಹೋಗಿದ್ದಈಗ ಸಿಕ್ಕಿದ್ದಾನೆ,’ ಎಂದು ಹೇಳಿದಒಡನೆಯೇ ಹಬ್ಬದ ಸಡಗರ ತೊಡಗಿತು.

ಇತ್ತ ಹೊಲಕ್ಕೆ ಹೋಗಿದ್ದ ಹಿರಿಯ ಮಗ ಹಿಂದಿರುಗಿ ಮನೆಯನ್ನು ಸಮೀಪಿಸುವಾಗ ಗಾನನರ್ತನಗಳ ಶಬ್ದವು ಅವನ ಕಿವಿಗೆ ಬಿತ್ತು.  ‘ಮನೆಯಲ್ಲೇನು ವಿಶೇಷ?’ ಎಂದು ಒಬ್ಬ ಆಳನ್ನು ಕರೆದು ವಿಚಾರಿಸಿದ. ನಿಮ್ಮ ತಮ್ಮ ಬಂದಿದ್ದಾರೆಅವರು ಮರಳಿ ಸುರಕ್ಷಿತವಾಗಿ ಬಂದುದಕ್ಕಾಗಿ ಕೊಬ್ಬಿಸಿದ ಪ್ರಾಣಿಯನ್ನು ನಿಮ್ಮ ತಂದೆ ಕೊಯ್ಯಿಸಿದ್ದಾರೆ,’ ಎಂದು ಆಳು ತಿಳಿಸಿದ.

ಇದನ್ನು ಕೇಳಿದ ಹಿರಿಯ ಮಗನಿಗೆ ಸಿಟ್ಟು ಬಂದಿತುಮನೆಯೊಳಕ್ಕೆ ಕಾಲಿಡಲೂ ಒಪ್ಪಲಿಲ್ಲತಂದೆಯೇ ಹೊರಗೆ ಬಂದು ಬೇಡಿಕೊಂಡಾಗ ಅವನು, ‘ನೋಡಿನಾನು ಇಷ್ಟು ವರ್ಷಗಳಿಂದ ನಿಮಗೆ ಗುಲಾಮನಂತೆ ಸೇವೆಮಾಡುತ್ತಿದ್ದೇನೆನಿಮ್ಮ ಮಾತನ್ನು ಎಂದೂ ಮೀರಿಲ್ಲಆದರೂ ನಾನು ನನ್ನ ಸ್ನೇಹಿತರೊಡನೆ ಹಬ್ಬಮಾಡಲು ಒಂದು ಆಡುಮರಿಯನ್ನು ಕೂಡ ನೀವು ಕೊಟ್ಟಿಲ್ಲಆದರೆ ನಿಮ್ಮ ಆಸ್ತಿಪಾಸ್ತಿಯನ್ನೆಲ್ಲಾ ವೇಶ್ಯೆಯರಿಗೆ ಸುರಿದ  ನಿಮ್ಮ ಮಗ ಬಂದದ್ದೇ ಕೊಬ್ಬಿಸಿದ ಪ್ರಾಣಿಯನ್ನು ಕೊಯ್ಯಿಸಿದ್ದೀರಿ!’ ಎಂದು ವಾದಿಸಿದಆಗ ತಂದೆ ಅವನಿಗೆ, ‘ಮಗನೇನೀನು ಯಾವಾಗಲೂ ನನ್ನ ಸಂಗಡ ಇದ್ದೀನನ್ನ ಸರ್ವಸ್ವವೂ ನಿನ್ನದೇ ಆಗಿದೆ ನಿನ್ನ ತಮ್ಮ ನಮ್ಮ ಪಾಲಿಗೆ ಸತ್ತುಹೋಗಿದ್ದಈಗ ಬದುಕಿ ಬಂದಿದ್ದಾನೆತಪ್ಪಿಹೋಗಿದ್ದಈಗ ಸಿಕ್ಕಿದ್ದಾನೆಆದುದರಿಂದ ನಾವು ಹಬ್ಬಮಾಡಿ ಆನಂದಿಸುವುದು ಸಹಜವಲ್ಲವೆ?’ ಎಂದನು.”

ಮನಸ್ಸಿಗೊಂದಿಷ್ಟು : ರಾಜನ ಮಗನೊಬ್ಬ ತನ್ನ ತಂದೆಯನ್ನು, ಅರಮನೆಯನ್ನು ಬಿಟ್ಟು ದೂರ ಹೋಗಿದ್ದ. ಒಂದಷ್ಟು ದಿನಗಳ ಬಳಿಕ ಮತ್ತೆ ಮನೆಗೆ ಹಿಂತಿರುಗಬೇಕು ಎನಿಸುತ್ತದೆ. ಆದರೆ ತಂದೆಯನ್ನು ಎದುರಿಸಲು ನಾಚಿಕೆಯಾಗಿ ಹಿಂಜರಿಯುತ್ತಾನೆ. ಇದನ್ನು ತಿಳಿದುಕೊಂಡ ರಾಜ ತನ್ನ ದೂತನ ಮೂಲಕ ಹೇಳಿ ಕಳುಹಿಸುತ್ತಾನೆ.  "ಅರ್ಧ ದಾರಿ ಅವನು ಬರಲಿ, ನಾನು ಇನ್ನೂ ಅರ್ಧ ದಾರಿ ಹೋಗಿ ಬರ ಮಾಡಿಕೊಳ್ಳುತ್ತೇನೆ. 

ದೇವರು ನಾವು ನಮ್ಮ ಪಾಪಗಳನ್ನು ಬಿಟ್ಟು ಹಿಂದಿರುಗುವಾಗ ಮತ್ತೆ ಒಪ್ಪಿಕೊಳ್ಳಲು ಸದಾ ಸಿದ್ಧರಿದ್ದಾರೆ. ನಾವು ಮನಸ್ಸು ಮಾಡಬೇಕಷ್ಟೆ. 

"ಕರುಣೆ ದುಂದುಗಾರ ಮಗನಿಗೆ ಮತ್ತೆ ಅವಕಾಶ ನೀಡಿತು. ಕೃಪೆ ಅವನ ಮರುಳುವಿಕೆಗೆ ಔತಣ ಏರ್ಪಡಿಸಿತು" ಎನ್ನುತ್ತಾರೆ ಮ್ಯಾಕ್ಸ್ ಲೂಸುಡೋ.  ಆ ಅಗಾಧ ಕೃಪೆಗೆ ಧನ್ಯರಾಗೋಣ     

10.03.23 - “ ಮನೆ ಕಟ್ಟುವವರು ಬೇಡವೆಂದು ಬಿಸಾಡಿದ ಆ ಕಲ್ಲೇ ಪ್ರಮುಖ ಮೂಲೆಗಲ್ಲಾಯಿತು"

ಮೊದಲನೇ ವಾಚನ: ಆದಿಕಾಂಡ 37:3-4, 12-13, 17-18


ಜೋಸೆಫನು ಯಕೋಬನಿಗೆ ಮುಪ್ಪಿನಲ್ಲಿ ಹುಟ್ಟಿದ ಮಗ. ಎಂದೇ ಯಕೋಬನಿಗೆ ಅವನ ಮೇಲೆ ಮಿಕ್ಕ ಮಕ್ಕಳಿಗಿಂತ ಮಿಗಿಲಾದ ಪ್ರೀತಿ. ಅಲಂಕೃತವಾದ ಒಂದು ನಿಲುವಂಗಿಯನ್ನೂ ಅವನಿಗೆ ಮಾಡಿಸಿಕೊಟ್ಟಿದ್ದ. ತಂದೆ ತನ್ನ ಎಲ್ಲ ಮಕ್ಕಳಿಗಿಂತ ಇವನನ್ನೇ ಹೆಚ್ಚಾಗಿ ಪ್ರೀತಿಸುವುದನ್ನು ಕಂಡು, ಅಣ್ಣಂದಿರು ಆ ಜೋಸೆಫನನ್ನು ಹಗೆ ಮಾಡಿದರು. ಅವನೊಡನೆ ಸ್ನೇಹಭಾವದಿಂದಲೂ ಮಾತಾಡದೆ ಹೋದರು. ಒಮ್ಮೆ ಜೋಸೆಫನ ಅಣ್ಣಂದಿರು ತಂದೆಯ ಆಡುಕುರಿಗಳನ್ನು ಮೇಯಿಸಲು ಶೆಕೆಮಿಗೆ ಹೋಗಿದ್ದರು. ಯಕೋಬನು ಜೋಸೆಫನಿಗೆ, “ನಿನ್ನ ಅಣ್ಣಂದಿರು ಶೆಕೆಮಿನಲ್ಲಿ ಆಡುಕುರಿಗಳನ್ನು ಮೇಯಿಸುತ್ತಿದ್ದಾರೆ, ಅಲ್ಲವೇ? ಅವರ ಬಳಿಗೆ ನಿನ್ನನ್ನು ಕಳಿಸಬೇಕೆಂದಿದ್ದೇನೆ,” ಎನ್ನಲು ಅದಕ್ಕೆ ಆ ಮನುಷ್ಯ, “ಅವರು ಇಲ್ಲಿಂದ ಹೊರಟುಹೋದರು; ‘ದೋತಾನಿಗೆ ಹೋಗೋಣ’ ಎಂದು ಮಾತಾಡುವುದನ್ನು ಕೇಳಿದೆ,” ಎಂದ. ಜೋಸೆಫನು ಅವರನ್ನು ಹುಡುಕುತ್ತಾ ಹೋಗಿ, ದೋತಾನಿನಲ್ಲಿ ಅವರನ್ನು ಕಂಡ. ಅಣ್ಣಂದಿರು ಅವನನ್ನು ದೂರದಿಂದಲೇ ನೋಡಿದರು. ಅವನು ತಮ್ಮ ಬಳಿಗೆ ಬರುವಷ್ಟರೊಳಗೆ ಅವನನ್ನು ಕೊಲ್ಲಲು ಒಳಸಂಚು ಮಾಡಿಕೊಂಡರು.

ಕೀರ್ತನೆ: 105:16-21

ಶ್ಲೋಕ: ನೆನೆಯಿರಿ ಆತನದ್ಭುತಗಳನು, ಮಹತ್ಕಾರ್ಯಗಳನು I

ತದನಂತರ ಬರಮಾಡಿದನಾ ನಾಡಿನಲಿ ಕ್ಷಾಮವನು I
ಮುರಿದುಬಿಟ್ಟನು ಆಹಾರವೆಂಬಾ ಊರುಗೋಲನು II
ಕಳಿಸಿದ ಅವರಿಗೆ ಮುಂದಾಗಿ ಒಬ್ಬಾತನನು I
ದಾಸತ್ವಕೆ ಮಾರಲಾದ ಆ ಜೋಸೆಫನನು II

ಅವನ ಕಾಲು ನೊಂದವು ಸಂಕೋಲೆಗಳಿಂದ I
ಕುತ್ತಿಗೆ ಕೊರೆಯಿತು ಕಬ್ಬಿಣದ ಕೋಳಗಳಿಂದ II
ಕ್ರಮೇಣ ಕೈಗೂಡಿತು ಜೋಸೆಫನು ನುಡಿದದ್ದು I
ಪ್ರಭುವಿನ ವಾಣಿ ಕಂಡುಬಂದಿತು ಸತ್ಯವೆಂದು II

ಬಿಡಿಸಲವನನು ಅರಸ ಕಳಿಸಿದ ಆಳನು I
ಬಿಡುಗಡೆಮಾಡಿದ ಜನಾಧಿಪತಿ ಅವನನು II
ನೇಮಿಸಿದವನನು ತನ್ನ ಮನೆಗೆ ಯಜಮಾನನ್ನಾಗಿ I
ಮಾಡಿದ ತನ್ನಾಸ್ತಿಗೆಲ್ಲಾ ಅಧಿಕಾರಿಯನ್ನಾಗಿ II

ಶುಭಸಂದೇಶ: ಮತ್ತಾಯ 21:33-43, 45-46


ಆ ಕಾಲದಲ್ಲಿ ಯೇಸು ಮುಖ್ಯ ಯಾಜಕರಿಗೂ ಪ್ರಜಾಪ್ರಮುಕರಿಗೂ ಈ ಸಾಮತಿಯನ್ನು ಹೇಳಿದರು: "ಒಬ್ಬ ಯಜಮಾನ ಒಂದು ದ್ರಾಕ್ಷಿತೋಟ ಮಾಡಿಸಿದ. ಅದರ ಸುತ್ತ ಬೇಲಿಯನ್ನು ಹಾಕಿಸಿದ. ದ್ರಾಕ್ಷಾರಸವನ್ನು ತೆಗೆಯಲು ಅಲೆಯನ್ನು ಹೂಡಿಸಿ, ಕಾವಲಿಗಾಗಿ ಅಟ್ಟಣೆಯನ್ನು ಕಟ್ಟಿಸಿದ. ಅನಂತರ ಅದನ್ನು ಗೇಣಿದಾರರಿಗೆ ವಹಿಸಿ ಹೊರನಾಡಿಗೆ ಹೊರಟುಹೋದ. ಫಲಕೊಡುವ ಕಾಲ ಹತ್ತಿರವಾದಾಗ, ತನಗೆ ಬರಬೇಕಾದ ಪಾಲನ್ನು ತರುವುದಕ್ಕಾಗಿ ಆಳುಗಳನ್ನು ಗೇಣಿದಾರರ ಬಳಿಗೆ ಕಳುಹಿಸಿದ. ಇವರು ಆ ಆಳುಗಳ ಮೇಲೆ ಬಿದ್ದು ಒಬ್ಬನನ್ನು ಬಡಿದರು, ಇನ್ನೊಬ್ಬನನ್ನು ಕಡಿದರು, ಮತ್ತೊಬ್ಬನ ಮೇಲೆ ಕಲ್ಲು ತೂರಿದರು. ತೋಟದ ಯಜಮಾನ ಮೊದಲಿಗಿಂತಲೂ ಹೆಚ್ಚು ಆಳುಗಳನ್ನು ಕಳುಹಿಸಿದ. ಅವರಿಗೂ ಅದೇ ಗತಿ ಆಯಿತು. ಕಟ್ಟಕಡೆಗೆ ಯಜಮಾನ, ‘ನನ್ನ ಮಗನಿಗೆ ಇವರು ಮರ್ಯಾದೆ ಕೊಟ್ಟೇಕೊಡುವರು’ ಎಂದುಕೊಂಡು ತನ್ನ ಮಗನನ್ನೇ ಕಳುಹಿಸಿದ. ಆದರೆ ಗೇಣಿದಾರರು ಮಗನನ್ನು ಕಂಡೊಡನೇ, ‘ಈ ತೋಟಕ್ಕೆ ಇವನೇ ಉತ್ತರಾಧಿಕಾರಿ; ಬನ್ನಿ, ಇವನನ್ನು ಮುಗಿಸಿಬಿಡೋಣ. ಇವನಿಗೆ ಬರುವ ಸೊತ್ತನ್ನು ನಮ್ಮದಾಗಿಸಿಕೊಳ್ಳೋಣ,’ ಎಂದು ತಮ್ಮತಮ್ಮಲ್ಲೇ ಒಳಸಂಚು ಮಾಡಿಕೊಂಡರು. ಅಂತೆಯೇ ಅವನನ್ನು ಹಿಡಿದು, ತೋಟದಿಂದ ಹೊರಕ್ಕೆ ದಬ್ಬಿಕೊಂಡು ಹೋಗಿ, ಕೊಂದುಹಾಕಿದರು. “ಈಗ ನೀವೇ ಹೇಳಿ: ತೋಟದ ಯಜಮಾನ ಬಂದಾಗ ಆ ಗೇಣಿದಾರರರಿಗೆ ಏನು ಮಾಡುವನು?” ಎಂದು ಯೇಸು ಕೇಳಿದರು. “ಆ ಕೇಡಿಗರನ್ನು ಕ್ರೂರವಾಗಿ ಸಂಹರಿಸುವನು. ತರುವಾಯ ಕಾಲಕಾಲಕ್ಕೆ ಸರಿಯಾಗಿ ಪಾಲನ್ನು ಸಲ್ಲಿಸುವ ಬೇರೆಯವರಿಗೆ ತೋಟವನ್ನು ಗೇಣಿಗೆ ಕೊಡುವನು,” ಎಂದು ಅಲ್ಲಿದ್ದವರು ಉತ್ತರಕೊಟ್ಟರು. ಬಳಿಕ ಯೇಸು ಇಂತೆಂದರು: “ ಮನೆ ಕಟ್ಟುವವರು ಬೇಡವೆಂದು ಬಿಸಾಡಿದ ಆ ಕಲ್ಲೇ ಪ್ರಮುಖ ಮೂಲೆಗಲ್ಲಾಯಿತು! ಸರ್ವೇಶ್ವರನಿಂದಲೇ ಆದ ಈ ಕಾರ್ಯ ನಮ್ಮ ಕಣ್ಣಿಗೆ ಅದೆಂಥ ಆಶ್ಚರ್ಯ!’ ಎಂಬ ವಾಕ್ಯವನ್ನು ನೀವು ಪವಿತ್ರ ಗ್ರಂಥದಲ್ಲಿ ಓದಿಲ್ಲವೆ? ಆದುದರಿಂದ ನಾನು ನಿಮಗೆ ಹೇಳುತ್ತೇನೆ, ‘ದೇವರ ಸಾಮ್ರಾಜ್ಯವನ್ನು ನಿಮ್ಮಿಂದ ಕಿತ್ತುಕೊಂಡು ತಕ್ಕ ಫಲಕೊಡುವ ಜನತೆಗೆ ನೀಡಲಾಗುವುದು. ಮುಖ್ಯ ಯಾಜಕರೂ ಫರಿಸಾಯರೂ ಸ್ವಾಮಿ ಹೇಳಿದ ಸಾಮತಿಗಳನ್ನು ಕೇಳಿ, ‘ಇವನು ನಮ್ಮನ್ನು ಕುರಿತೇ ಹೀಗೆ ಮಾತನಾಡುತ್ತಿದ್ದಾನೆ,’ ಎಂದು ಅರ್ಥ ಮಾಡಿಕೊಂಡರು. ಯೇಸುವನ್ನು ಹಿಡಿದು ಬಂಧಿಸಲು ಯತ್ನಿಸಿದರು. ಆದರೆ ಜನಸಮೂಹಕ್ಕೆ ಭಯಪಟ್ಟರು. ಏಕೆಂದರೆ, ಜನರು ಯೇಸುವನ್ನು ಪ್ರವಾದಿ ಎಂದು ಸನ್ಮಾನಿಸುತ್ತಿದ್ದರು.

ಮನಸ್ಸಿಗೊಂದಿಷ್ಟು :
ಇಂದಿನ ಸಾಮತಿಯಲ್ಲಿನ ಕೆಲಸಗಾರರಂತೆ ಪ್ರವಾದಿಗಳ , ಶುಭಸಂದೇಶದ ಮಾತುಗಳಿಗೆ ಕಿವಿಗೊಡದೆ ದೇವರ ಕೋಪಕ್ಕೆ ಈಡಾಗದಂತೆ ನಾವು ಎಚ್ಚರಿಕೆ ವಹಿಸಬೇಕಾಗಿದೆ. ಆದರೆ ಈ ಎಚ್ಚರಕ್ಕೆ ನಮಗೆ ನಿಜಕ್ಕೂ ಬೇಕಾಗಿರುವುದು ಸ್ವರ್ಗವೆಂಬ ದ್ರಾಕ್ಷಾತೋಟದ ಬಗ್ಗೆ ಪ್ರೀತಿ ಹಾಗು ಅದಕ್ಕಾಗಿ ತಣಿಯದ ಹಾತೊರೆಯುವಿಕೆ. 

ಸಾಮತಿಯಲ್ಲಿನ ಯಜಮಾನನ ಮಗ ಕೆಲಸಗಾರರಿಂದ ಅಪಾಯದ ಸೂಚನೆ ಇದ್ದರೂ ಬಂದು ಪ್ರಾಣ ತ್ಯಾಗ ಮಾಡಿದಂತೆ, ನಮಗಾಗಿ  ತಾವಾಗೇ ಬಂದು ಪ್ರಾಣಾರ್ಪಣೆ  ಮಾಡಿದ ಯೇಸುವಿಗಾಗಿ ನಮ್ಮ ಮನ ಕರಗಬೇಕಾಗಿದೆ, ಪರಿವರ್ತನೆಗೊಳ್ಳಬೇಕಾಗಿದೆ - ಜೀವವಾಕ್ಯ 

09.03.23 -‘ಮೋಶೆಗೂ ಪ್ರವಾದಿಗಳಿಗೂ ಅವರು ಕಿವಿಗೊಡದಿದ್ದರೆ, ಸತ್ತವನು ಜೀವಂತನಾಗಿ ಎದ್ದು ಬಂದರೂ ಅವರು ನಂಬುವುದಿಲ್ಲ,’

ಮೊದಲನೇ ವಾಚನ: ಯೆರೆಮೀಯ: 17:5-10

ಇವು ಸರ್ವೇಶ್ವರನ ಮಾತುಗಳು: “ಮಾನವ ಮಾತ್ರದವರಲ್ಲಿ ಭರವಸೆಯಿಟ್ಟು ನರಜನ್ಮದವರನ್ನೇ ತನ್ನ ಭುಜಬಲ ವೆಂದುಕೊಂಡು ಸರ್ವೇಶ್ವರನನ್ನೇ ತೊರೆಯುವಂಥ ಹೃದಯವುಳ್ಳವನು ಶಾಪಗ್ರಸ್ತನು! ಇಂಥವನು ಅಡವಿಯಲ್ಲಿನ ಜಾಲಿಗಿಡಕ್ಕೆ ಸಮಾನನು. ಶುಭಸಂಭವಿಸಿದರೂ ಅದು ಅವನ ಕಣ್ಣಿಗೆ ಕಾಣದು. ಜನರಾರೂ ವಾಸಿಸದ ಚೌಳು ನೆಲದೊಳು ಬೆಳೆಯಿಲ್ಲದ ಬೆಂಗಾಡಿನೊಳು ವಾಸಿಸುವವನ ಪರಿಸ್ಥಿತಿ ಅವನದು. ಸರ್ವೇಶ್ವರನಲ್ಲಿ ಭರವಸೆಯಿಟ್ಟವನಾದರೋ ಧನ್ಯ! ಅಂಥವನಿಗೆ ಸರ್ವೇಶ್ವರನಲ್ಲೇ ವಿಶ್ವಾಸ. ನೀರರುಗಿನಲೆ ನೆಡಲಾದ, ನದಿಯ ಬದಿಯಲೆ ಬೇರು ಹರಡಿದ ಬಿಸಿಲ ಧಗೆಗೆ ಹೆದರದ, ಬರಗಾಲದಲ್ಲೂ ನಿಶ್ಚಿಂತವಾದ ಹಸಿರೆಲೆಬಿಡುವ, ಫಲನೀಡುವ ಮರಕ್ಕೆ ಸಮಾನನು ಆತ. ಮಾನವ ಹೃದಯ ಎಲ್ಲಕ್ಕಿಂತ ವಂಚಕ ಅದಕ್ಕೆ ಅಂಟಿದೆ ಗುಣವಾಗದ ರೋಗ ಅದರ ಗುಟ್ಟನ್ನು ಅರಿತುಕೊಳ್ಳಬಲ್ಲವರೂ ಇಲ್ಲ. ಸರ್ವೇಶ್ವರನಾದ ನಾನು ಹೃದಯ ಪರಿಶೀಲಕ ಹೌದು, ಅಂತರಿಂದ್ರಿಯಗಳನ್ನು ಪರಿಶೋಧಿಸುವಾತ.

ಶ್ಲೋಕ: 1:1-4, 6

ಕೀರ್ತನೆ: ಪ್ರಭುವಿನಲ್ಲೆ ಭರವಸೆ ಇಟ್ಟು ನಡೆವಾತನು ಧನ್ಯನು I

ದುರ್ಜನರ ಆಲೋಚನೆಯಂತೆ ನಡೆಯದೆ I
ಪಾಪಾತ್ಮರ ಪಥದಲಿ ಕಾಲೂರದೆ I
ಧರ್ಮನಿಂದಕರ ಕೂಟದಲಿ ಕೂರದೆ II

ಪ್ರಭುವಿನ ಧರ್ಮಶಾಸ್ತ್ರದಲಿ ಹರ್ಷಗೊಳ್ಳುವವನಾರೋ - ಅವನೇ ಧನ್ಯನು I
ಹಗಲಿರುಳೆನ್ನದೆ ಅದನೆ ಧ್ಯಾನಿಸುತಿರುವವನಾರೋ ಅವನೇ ಧನ್ಯನು II
ನದಿಯ ಬದಿಯಲೇ ಬೆಳೆದಿಹ ಮರದಂತೆ I
ಸಕಾಲಕೆ ಫಲವೀವ ವೃಕ್ಷದಂತೆ I
ಎಲೆಬಾಡದೆ ಪಸಿರಿರುವ ತರುವಂತೆ I
ಸಿಗುವುದು ಅವನ ಕಾರ್ಯಗಳಿಗೆ ಸಫಲತೆ II

ದುರುಳರಾದರೊ ತೂರಿ ಹೋಗುವರು I
ಬಿರುಗಾಳಿಗೆ ತರಗೆಲೆಯಾಗುವರು II
ಸಜ್ಜನರ ಮಾರ್ಗಕ್ಕಿದೆ ಪ್ರಭುವಿನ ಪಾಲನ I
ದುರ್ಜನರ ಮಾರ್ಗಕ್ಕಿದೆ ಸಂಪೂರ್ಣ ವಿನಾಶನ II

ಶುಭಸ೦ದೇಶ ಲೂಕ: 16:19-31





ಆ ಕಾಲದಲ್ಲಿ ಯೇಸು ಶಿಷ್ಯರನ್ನುದ್ದೇಶಿಸಿ ಈ ಸಾಮತಿಯನ್ನು ಹೇಳಿದರು: “ಒಬ್ಬ ಧನಿಕನಿದ್ದ. ಬೆಲೆ ಬಾಳುವ ಉಡುಗೆ-ತೊಡುಗೆಗಳನ್ನೂ ನಯವಾದ ನಾರುಮಡಿಗಳನ್ನೂ ಧರಿಸಿಕೊಂಡು ದಿನ ನಿತ್ಯವೂ ಸುಖಭೋಗಗಳಲ್ಲಿ ಮೈಮರೆಯುತ್ತಿದ್ದ. ಅವನ ಮನೆಯ ಬಾಗಿಲಲ್ಲೇ ಲಾಜರನೆಂಬ ಒಬ್ಬ ಭಿಕಾರಿ ಬಿದ್ದಿರುತ್ತಿದ್ದ. ಅವನ ಮೈಯೆಲ್ಲಾ ಹುಣ್ಣು. ಧನಿಕನು ತಿಂದು ಬಿಸಾಡಿದ ಎಂಜಲಿನಿಂದ ಹಸಿವು ನೀಗಿಸಿಕೊಳ್ಳಲು ಅವನು ಹಂಬಲಿಸುತ್ತಿದ್ದ. ಅಷ್ಟು ಮಾತ್ರವಲ್ಲ, ನಾಯಿಗಳು ಬಂದು ಅವನ ಹುಣ್ಣುಗಳನ್ನು ನೆಕ್ಕುತ್ತಿದ್ದವು. “ಒಂದು ದಿನ ಆ ಭಿಕಾರಿ ಸತ್ತುಹೋದ. ದೇವದೂತರು ಅವನನ್ನು ತೆಗೆದುಕೊಂಡು ಹೋಗಿ ಸ್ವರ್ಗಸೌಭಾಗ್ಯದಲ್ಲಿದ್ದ ಅಬ್ರಹಾಮನ ಪಕ್ಕದಲ್ಲೇ ಕೂರಿಸಿದರು. ಧನಿಕನು ಕೂಡ ಸತ್ತುಹೋದ. ಅವನ ಶವಸಂಸ್ಕಾರವೂ ಮುಗಿಯಿತು. ಪಾತಾಳದಲ್ಲಿ ಯಾತನೆಪಡುತ್ತಾ ಅವನು ಕಣ್ಣೆತ್ತಿ ನೋಡಿದಾಗ, ದೂರದಲ್ಲಿ ಅಬ್ರಹಾಮನನ್ನೂ ಅವನ ಪಕ್ಕದಲ್ಲೇ ಕುಳಿತಿದ್ದ ಲಾಜರನನ್ನೂ ಕಂಡ. ‘ಓ ಪಿತಾಮಹ ಅಬ್ರಹಾಮ, ನನ್ನ ಮೇಲೆ ಕನಿಕರವಿಡು. ಈ ಅಗ್ನಿಜ್ವಾಲೆಯಲ್ಲಿ ಬಾಧೆಪಡುತ್ತಿದ್ದೇನೆ; ಲಾಜರನು ತನ್ನ ತುದಿ ಬೆರಳನ್ನು ತಣ್ಣೀರಿನಲ್ಲಿ ಅದ್ದಿ, ನನ್ನ ನಾಲಗೆಗೆ ತಂಪನ್ನುಂಟು ಮಾಡುವಂತೆ ಅವನನ್ನು ಇಲ್ಲಿಗೆ ಕಳುಹಿಸಿಕೊಡು’ ಎಂದು ದನಿಯೆತ್ತಿ ಮೊರೆಯಿಟ್ಟ. ಅದಕ್ಕೆ ಅಬ್ರಹಾಮನು, ‘ಮಗನೇ, ಜೀವಮಾನದಲ್ಲಿ ಬೇಕಾದಷ್ಟು ಸುಖ ಸಂಪತ್ತನ್ನು ನೀನು ಅನುಭವಿಸಿದೆ; ಲಾಜರನಾದರೋ ದುಃಖ ದಾರಿದ್ರ್ಯವನ್ನು ಅನುಭವಿಸಿದ ಎಂಬುದನ್ನು ನೆನಪಿಗೆ ತಂದುಕೊ. ಆದರೆ ಈಗ ಅವನು ಇಲ್ಲಿ ಸುಖಪಡುತ್ತಿದ್ದಾನೆ; ನೀನು ಅಲ್ಲಿ ಸಂಕಟ ಪಡುತ್ತಿರುವೆ. ಅಷ್ಟೇ ಮಾತ್ರವಲ್ಲ, ನಮಗೂ ನಿಮಗೂ ನಡುವೆ ಅಗಾಧ ಪ್ರಪಾತವು ಚಾಚಿದೆ. ಆದಕಾರಣ ಈ ಕಡೆಯಿಂದ ನಿಮ್ಮ ಬಳಿಗೆ ಬರಬೇಕೆಂದಿದ್ದರೂ ಬರಲಾಗದು; ಆ ಕಡೆಯಿಂದ ನಮ್ಮ ಬಳಿಗೆ ದಾಟಿ ಬರಲೂ ಸಾಧ್ಯವಿಲ್ಲ,’ ಎಂದ. ಆಗ ಆ ಧನಿಕ, ‘ಪಿತಾಮಹ ಅಬ್ರಹಾಮ, ಲಾಜರನನ್ನು ನನ್ನ ತಂದೆಯ ಮನೆಗಾದರೂ ಕಳುಹಿಸು. ನನಗೆ ಐವರು ಸೋದರರಿದ್ದಾರೆ; ಅವರೂ ಈ ಯಾತನಾಸ್ಥಳಕ್ಕೆ ಬಾರದಂತೆ ಇವನು ಹೋಗಿ ಎಚ್ಚರಿಕೆಕೊಡಲಿ,’ ಎಂದು ಬೇಡಿಕೊಂಡ. ಅದಕ್ಕೆ ಅಬ್ರಹಾಮನು, ‘ಅವರಿಗೆ ಎಚ್ಚರಿಕೆ ಕೊಡಲು ಮೋಶೆ ಮತ್ತು ಪ್ರವಾದಿಗಳ ಗ್ರಂಥಗಳಿವೆ. ಅವುಗಳಿಗೆ ಕಿವಿಗೊಡಲಿ,’ ಎಂದು ಉತ್ತರಕೊಟ್ಟ. ‘ಇಲ್ಲ, ಪಿತಾಮಹ ಅಬ್ರಹಾಮ, ಸತ್ತವರ ಕಡೆಯಿಂದ ಒಬ್ಬನು ಅವರ ಬಳಿಗೆ ಹೋದರೆ ಅವರು ಪಾಪಕ್ಕೆ ವಿಮುಖರಾಗುವರು,’ ಎಂದು ಧನಿಕನು ಮತ್ತೆ ಕೇಳಿಕೊಂಡ. ಅದಕ್ಕೆ ಅಬ್ರಹಾಮನು, ‘ಮೋಶೆಗೂ ಪ್ರವಾದಿಗಳಿಗೂ ಅವರು ಕಿವಿಗೊಡದಿದ್ದರೆ, ಸತ್ತವನು ಜೀವಂತನಾಗಿ ಎದ್ದು ಬಂದರೂ ಅವರು ನಂಬುವುದಿಲ್ಲ,’ ಎಂದ.

08.03.23 - "ಲೋಕದ ಪ್ರಜಾಧಿಪತಿಗಳು ತಮ್ಮ ಪ್ರಜೆಗಳ ಮೇಲೆ ದರ್ಪದಿ೦ದ ದೊರೆತನ ಮಾಡುತ್ತಾರೆ"

ಮೊದಲನೇ ವಾಚನ: ಯೆರೆಮೀಯ 18: 18-20

ಆಗ ಜನರು, "ಬನ್ನಿ, ಈ ಯೆರೆಮೀಯನ ವಿರುದ್ದ ಒಳಸ೦ಚು ಮಾಡೋಣ. ಧರ್ಮೋಪದೇಶಕ್ಕೆ ಯಾಜಕರಿದ್ದಾರೆ. ಮ೦ತ್ರಾಲೋಚನೆಗೆ ಜ್ಞಾನಿಗಳಿದ್ದಾರೆ. ದೈವೋಕ್ತಿಗೆ ಪ್ರವಾದಿಯ ಕೊರತೆ ಎ೦ದಿಗೂ ಇಲ್ಲ. ಬನ್ನಿ, ಇವನ ಬಾಯಿ ಬಡಿಯೋಣ. ಇವನ ಯಾವ ಮಾತಿಗೂ ನಾವು ಕಿವಿಗೊಡಬೇಕಾಗಿಲ್ಲ." ಎ೦ದುಕೊ೦ಡರು. ಯೆರೆಮೀಯ: "ಸರ್ವೇಶ್ವರ, ನನ್ನ ಕಡೆಗೆ ಕಿವಿಗೊಡಿ. ನನ್ನೊಡನೆ ವಾದಿಸುವವರ ಮಾತನ್ನು ಗಮನಿಸಿ ನೊಡಿ. ಮಾಡಿದ ಮೇಲಿಗೆ ಕೇಡಿನ ಪ್ರತಿಫಲವೇ? ನನ್ನ ಪ್ರಾಣ ಹಿಡಿಯಲು ಗು೦ಡಿಯನ್ನು ತೋಡಿದ್ದಾರೆ. ಅವರ ಮೇಲೆ ನಿಮಗಿದ್ದ ಕೋಪಾವೇಶವನ್ನು ಶಮನಗೊಳಿಸಲು ನಿಮ್ಮ ಮು೦ದೆ ನಿ೦ತು ನಾನು ವಿನ೦ತಿಸಿದ್ದನ್ನು ನೆನಪಿಗೆ ತ೦ದುಕೊಳ್ಳಿ.

ಕೀರ್ತನೆ: 31:4-5, 13, 14-15

ಶ್ಲೋಕ: ಪ್ರಭೂ, ಕಾಪಾಡಲಿ ಎನ್ನನು ನಿನ್ನ ಅನಂತ ಪ್ರೇಮವು. 

ಶುಭಸ೦ದೇಶ ಮತ್ತಾಯ: 20: 17-28


ಯೇಸುಸ್ವಾಮಿ ಜೆರುಸಲೇಮಿನತ್ತ ಹೋಗುವಾಗ ದಾರಿಯಲ್ಲಿ, ತಮ್ಮ ಹನ್ನೆರಡು ಮ೦ದಿ ಶಿಷ್ಯರನ್ನು ಪ್ರತ್ಯೇಕವಾಗಿ ಕರೆದು, "ನೋಡಿ, ನಾವು ಜೆರುಸಲೇಮಿಗೆ ಹೋಗುತ್ತಿದ್ದೇವೆ. ಅಲ್ಲಿ ನರಪುತ್ರನನ್ನು ಮುಖ್ಯ ಯಾಜಕರ ಮತ್ತು ಧರ್ಮಶಾಸ್ತ್ರಿಗಳ ವಶಕ್ಕೆ ಒಪ್ಪಿಸುವರು. ಆತನು ಮರಣ ದ೦ಡನೆಗೆ ಅರ್ಹನೆ೦ದು ಅವರು ತೀರ್ಮಾನಿಸಿ ಪರಕೀಯರ ಕೈಗೊಪ್ಪಿಸುವರು. ಇವರು ಆತನನ್ನು ಪರಿಹಾಸ್ಯ ಮಾಡುವರು, ಕೊರಡೆಗಳಿ೦ದ ಹೊಡೆಯುವರು ಮತ್ತು ಶಿಲುಬೆಗೇರಿಸುವರು. ಆತನಾದರೋ ಮೂರನೇ ದಿನ ಪುನರುತ್ಥಾನ ಹೊ೦ದುವನು", ಎ೦ದರು. ಆಗ ಜೆಬೆದಾಯನ ಮಕ್ಕಳ ತಾಯಿ ತನ್ನ ಪುತ್ರರ ಸಮೇತ ಯೇಸುಸ್ವಾಮಿಯ ಬಳಿಗೆ ಬ೦ದಳು. "ತಮ್ಮಿ೦ದ ನನಗೊ೦ದು ಉಪಕಾರ ಆಗಬೇಕು," ಎ೦ದು ಸ್ವಾಮಿಯ ಪಾದಕ್ಕೆರಗಿದಳು. "ನಿನ್ನ ಕೋರಿಕೆ ಏನು?" ಎ೦ದರು ಯೇಸು. ಅದಕ್ಕೆ ಅವಳು, "ತಮ್ಮ ಸಾಮ್ರಾಜ್ಯದಲ್ಲಿ, ನನ್ನ ಈ ಇಬ್ಬರು ಮಕ್ಕಳಲ್ಲಿ ಒಬ್ಬನು ತಮ್ಮ ಬಲಗಡೆಯಲ್ಲೂ ಇನೊಬ್ಬನು ತಮ್ಮ ಎಡಗಡೆಯಲ್ಲೂ ಆಸೀನರಾಗುವ೦ತೆ ಅಪ್ಪಣೆಯಾಗಬೇಕು", ಎ೦ದು ಕೋರಿದಳು. ಅದಕ್ಕೆ ಪ್ರತ್ಯುತ್ತರವಾಗಿ ಯೇಸು, "ನೀವು ಕೋರಿಕೊ೦ಡದ್ದು ಏನೆ೦ದು ನಿಮಗೇ ತಿಳಿಯದು. ನಾನು ಕುಡಿಯಬೇಕಾದ ಪಾತ್ರೆಯಿ೦ದ ಕುಡಿಯಲು ನಿಮ್ಮಿ೦ದ ಆದೀತೆ?" ಎ೦ದು ಪ್ರಶ್ನಿಸಿದರು. "ಹೌದು, ಆಗುತ್ತದೆ", ಎ೦ದು ಅವರು ಮರುನುಡಿದರು. ಆಗ ಯೇಸು, "ನನ್ನ ಪಾತ್ರೆಯಿ೦ದ ನೀವೇನೋ ಕುಡಿಯುವಿರಿ. ಆದರೆ ನನ್ನ ಬಲಗಡೆಯಲ್ಲಾಗಲೀ ಎಡಗಡೆಯಲ್ಲಾಗಲೀ ಆಸೀನರಾಗುವ೦ತೆ ಅನುಗ್ರಹಿಸುವುದು ನನ್ನದಲ್ಲ. ಅದು ಯಾರಿಗಾಗಿ ನನ್ನ ಪಿತನಿ೦ದ ಸಿದ್ದಮಾಡಲಾಗಿದೆಯೋ ಅವರಿಗೇ ಸಿಗುವುದು", ಎ೦ದು ನುಡಿದರು. ಉಳಿದ ಹತ್ತು ಮ೦ದಿ ಶಿಷ್ಯರು ಇದನ್ನು ಕೇಳಿದಾಗ ಆ ಇಬ್ಬರು ಸಹೋದರರ ಮೇಲೆ ಸಿಟ್ಟುಗೊ೦ಡರು. ಯೇಸುವಾದರೋ ಶಿಷ್ಯರೆಲ್ಲರನ್ನೂ ತಮ್ಮ ಬಳಿಗೆ ಕರೆದು, "ಲೋಕದ ಪ್ರಜಾಧಿಪತಿಗಳು ತಮ್ಮ ಪ್ರಜೆಗಳ ಮೇಲೆ ದರ್ಪದಿ೦ದ ದೊರೆತನ ಮಾಡುತ್ತಾರೆ: ಜನನಾಯಕರು ಎನಿಸಿಕೊಳ್ಳುವವರು ಜನರ ಮೇಲೆ ಅಧಿಕಾರ ಪ್ರದರ್ಶನ ಮಾಡುತ್ತಾರೆ. ಇದು ನಿಮಗೆ ಗೊತ್ತು. ನೀವು ಹಾಗಿರಬಾರದು. ನಿಮ್ಮಲ್ಲಿ ಶ್ರೇಷ್ಠನಾಗಿರಲು ಇಚ್ಚಿಸುವವನು ನಿಮಗೆ ಸೇವಕನಾಗಿರಲಿ. ಪ್ರಥಮನಾಗಿರಲು ಆಶಿಸುವವನು ನಿಮ್ಮ ದಾಸನಾಗಿರಲಿ. ಹಾಗೆಯೇ ನರಪುತ್ರನು ಸೇವೆ ಮಾಡಿಸಿಕೊಳ್ಳುವುದಕ್ಕೆ ಅಲ್ಲ. ಇತರರ ಸೇವೆ ಮಾಡುವುದಕ್ಕೂ ಸರ್ವರ ಉದ್ದಾರಕ್ಕಾಗಿ ತನ್ನ ಪ್ರಾಣವನ್ನು ಈಡಾಗಿ ಕೊಡುವುದಕ್ಕೂ ಬ೦ದಿದ್ದಾನೆ," ಎ೦ದು ಹೇಳಿದರು.

ಮನಸ್ಸಿಗೊಂದಿಷ್ಟು  ಇಂದಿನ ಶುಭಸಂದೇಶದಲ್ಲಿ ಯೇಸು ತಾವು ಎಂಥಹ ಘೋರ ಮರಣಕ್ಕೆ ಈಡಾಗುವರೆಂಬ ಮುನ್ಸೂಚನೆ ಕೊಟ್ಟರೂ ಶಿಷ್ಯರು ಯೇಸುವಿನ  ಮುಂದಿನ  ರಾಜ್ಯಭಾರದ ಬಗ್ಗೆ ಮಾತನಾ ಡಿಕೊಳ್ಳುತ್ತಾರೆ.ಇದು ಅವರ ಅಜ್ಞಾನದಂತೆ ನಮಗೆ ಕಂಡರೂ , ಯೇಸುವಿನ ಬಗ್ಗೆ ಅವರಿಗಿದ್ದ ಅದಮ್ಯ ವಿಶ್ವಾಸ ಅದೆಷ್ಟು ದೊಡ್ಡದಲ್ಲವೇ?  ಅವರ ಬಗ್ಗೆ ಯೇಸುವಿನ ಸಹನೆ, ಪ್ರೀತಿಯೂ ಅಷ್ಟೇ ದೊಡ್ಡದು. 

ನಮ್ಮ ವಿಶ್ವಾಸವೂ ಅಷ್ಟೇ ದೊಡ್ಡದಾಗಿರಲಿ. ನಮ್ಮ ಬಗ್ಗೆ ಯೇಸುವಿನ ಪ್ರೀತಿ, ಸಹನೆಗಾಗಿ ಧನ್ಯರಾಗಿರೋಣ. 

07.03.23 - "ತನ್ನನ್ನು ತಾನೇ ತಗ್ಗಿಸಿಕೊಳ್ಳುವವನನ್ನು ದೇವರು ಮೇಲಕ್ಕೇರಿಸುವರು"

ಮೊದಲನೇ ವಾಚನ: ಯೆಶಾಯ 1:10, 16-20

ಸೊದೋಮಿನ ಅಧಿಪತಿಗಳ೦ತಿರುವವರೇ, ಸರ್ವೇಶ್ವರಸ್ವಾಮಿಯ ಮಾತನ್ನು ಕೇಳಿರಿ. ಗೊಮೋರದ ಪ್ರಜೆಗಳನ್ನು ಹೋಲುವವರೇ, ನಮ್ಮ ದೇವರ ಉಪದೇಶಕ್ಕೆ ಕಿವಿಗೊಡಿ. ತೊಳೆದುಕೊಳ್ಳಿರಿ, ನಿಮ್ಮನ್ನೆ ಶುದ್ಧ ಮಾಡಿಕೊಳ್ಳಿರಿ. ಕಣ್ಣಿಗೆ ಕಟ್ಟಿದ೦ತಿರುವ ನಿಮ್ಮ ದುಷ್ಕೃತ್ಯಗಳು ನೀಗಿ ಹೋಗಲಿ. ಕೇಡನ್ನು ಬಿಟ್ಟು ಒಳಿತನ್ನು ಕೈಗೊಳ್ಳಿರಿ. ನ್ಯಾಯನೀತಿಗಳಲ್ಲಿ ನಿರತರಾಗಿರಿ. ಹಿ೦ಸಾತ್ಮಕರನ್ನು ತಿದ್ದಿ ಸರಿಪಡಿಸಿರಿ. ಅನಾಥರಿಗೆ ನ್ಯಾಯ ದೊರಕಿಸಿರಿ. ವಿಧವೆಯರ ಪರವಾಗಿ ವಾದಿಸಿರಿ. ಸರ್ವೇಶ್ವರ ಸ್ವಾಮಿ ಇಂತೆನ್ನುತ್ತಾರೆ : "ಬನ್ನಿರಿ, ಈಗ ವಾದಿಸೋಣ. ನಿಮ್ಮ ಪಾಪಗಳು ಕಡುಗೆ೦ಪಾಗಿದ್ದರೂ ಹಿಮದ೦ತೆ ಬಿಳುಪಾಗುವುವು. ರಕ್ತಗೆ೦ಪಾಗಿದ್ದರೂ ಉಣ್ಣೆಯ೦ತೆ ಬೆಳ್ಳಗಾಗುವುವು. ನೀವು ಮನಃಪೂರ್ವಕವಾಗಿ ನನಗೆ ವಿಧೇಯರಾದರೆ ಈ ನಾಡಿನ ಸತ್ಫಲವನ್ನು ಸವಿಯುವಿರಿ. ಇದಕ್ಕೊಪ್ಪದೆ ಪ್ರತಿಭಟಿಸಿದ್ದೇ ಆದರೆ, ಸಾವಿಗೆ ತುತ್ತಾಗುವಿರಿ. ಸ್ವಾಮಿಯಾದ ನಾನೇ ಇದನ್ನು ನುಡಿದಿದ್ದೇನೆ."

ಕೀರ್ತನೆ: 1116:10, 15, 16-19 

ಶ್ಲೋಕ: ಸನ್ಮಾರ್ಗ ಹಿಡಿದವನಿಗೆ ತೋರುವೆ ಪರಮ ಜೀವೋದ್ದಾರವನು. 

ಶುಭಸ೦ದೇಶ: ಮತ್ತಾಯ 23:1-2

ಬಳಿಕ ಜನಸಮೂಹವನ್ನೂ ತಮ್ಮ ಶಿಷ್ಯರನ್ನು ಉದ್ದೇಶಿಸಿ ಯೇಸುಸ್ವಾಮಿ ಇ೦ತೆ೦ದರು: "ಧರ್ಮಶಾಸ್ತ್ರಿಗಳೂ ಫರಿಸಾಯರೂ ಮೋಶೆಯ ಸ್ಥಾನದಲ್ಲಿ ಇದ್ದಾರೆ. ಆದುದರಿ೦ದ ಅವರು ನಿಮಗೆ ಉಪದೇಶಿಸುವುದನ್ನೆಲ್ಲಾ ಆಲಿಸಿರಿ ಹಾಗು ಪಾಲಿಸಿರಿ. ಆದರೆ ಅವರ ನಡತೆಯನ್ನು ಅನುಸರಿಸಬೇಡಿ. ಏಕೆಂದರೆ ಅವರು ನುಡಿದ೦ತೆ ನಡೆಯುವುದಿಲ್ಲ. ಭಾರವಾದ ಹಾಗು ಹೊರಲಾಗದ ಹೊರೆಗಳನ್ನು ಕಟ್ಟಿ ಮಾನವರ ಹೆಗಲ ಮೇಲೆ ಹೇರುತ್ತಾರೆ. ತಾವಾದರೋ ಅವನ್ನು ಕಿರುಬೆರಳಿನಿ೦ದಲೂ ಮುಟ್ಟಲೊಲ್ಲರು. ತಾವು ಕೈಗೊಳ್ಳುವ ಕಾರ್ಯಗಳನ್ನೆಲ್ಲಾ ಜನರು ನೋಡಲೆ೦ದೇ ಮಾಡುತ್ತಾರೆ. ತಮ್ಮ ಧಾರ್ಮಿಕ ಹಣೆ ಪಟ್ಟಿಗಳನ್ನು ಅಗಲ ಮಾಡಿಕೊಳ್ಳುತ್ತಾರೆ. ಮೇಲ೦ಗಿಯ ಗೊ೦ಡೆಗಳನ್ನು ಉದ್ದುದ್ದ ಮಾಡಿಕೊಳ್ಳುತ್ತಾರೆ. ಜೌತಣಕೂಟಗಳಲ್ಲಿ, ಶ್ರೇಷ್ಠ ಸ್ಥಾನಮಾನಗಳನ್ನೂ, ಪ್ರಾರ್ಥನಾಮ೦ದಿರಗಳಲ್ಲಿ ಉನ್ನತ ಆಸನಗಳನ್ನೂ ಪೇಟೆಬೀದಿಗಳಲ್ಲಿ ವ೦ದನೋಪಚಾರಗಳನ್ನೂ ಅವರು ಅಪೇಕ್ಷಿತ್ತಾರೆ. ಅದು ಮಾತ್ರವಲ್ಲ, ’ಗುರುವೇ’ ಎ೦ದು ಕರೆಸಿಕೊಳ್ಳಲು ಇಚ್ಚಿಸುತ್ತಾರೆ. ಹಾಗೆ ಕರೆಸಿಕೊಳ್ಳುವುದು ನಿಮಗೆ ಬೇಡ. ನಿಮಗಿರುವ ಗುರುವು ಒಬ್ಬರೇ ಮತ್ತು ನೀವೆಲ್ಲರೂ ಸಹೋದರರು. ಇಹದಲ್ಲಿ ನೀವು ಯಾರನ್ನೂ "ಪಿತನೇ" ಎ೦ದು  ಸಂಬೋಧಿಸಬೇಡಿ. ಏಕೆ೦ದರೆ ನಿಮ್ಮ ಪಿತ ಒಬ್ಬರೇ. ಅವರು ಸ್ವರ್ಗದಲ್ಲಿದ್ದಾರೆ. ಒಡೆಯ ಎ೦ದೂ ಕರೆಯಿಸಿಕೊಳ್ಳಬೇಡಿ; ಏಕೆ೦ದರೆ ನಿಮಗಿರುವ ಒಡೆಯ ಒಬ್ಬನೇ, ’ಆತನೇ ಕ್ರಿಸ್ತ’. ನಿಮ್ಮಲ್ಲಿ ಶ್ರೇಷ್ಠನು ಯಾರೋ ಅವನು ನಿಮ್ಮ ಸೇವಕನಾಗಿರಬೇಕು. ತನ್ನನ್ನು ತಾನೇ ಮೇಲಕ್ಕೇರಿಸಿಕೊಳ್ಳುವ ಪ್ರತಿಯೊಬ್ಬನ್ನನ್ನೂ ದೇವರು ಕೆಳಗಿಳಿಸುವರು. ತನ್ನನ್ನು ತಾನೇ ತಗ್ಗಿಸಿಕೊಳ್ಳುವವನನ್ನು ದೇವರು ಮೇಲಕ್ಕೇರಿಸುವರು.

06.03.23 - "ನೀವು ಕೊಟ್ಟ ಅಳತೆಯಲ್ಲೇ ದೇವರು ನಿಮಗೂ ಅಳೆದು ಕೊಡುವರು,”

 ಮೊದಲನೆಯ ವಾಚನ : ದಾನಿಯೇಲ 9: 4-10

ಹೇ ಸರ್ವೇಶ್ವರಾಮಹೋನ್ನತರೂ ಭಯಭಕ್ತಿಗೆ ಪಾತ್ರರೂ ಆದ ದೇವರೇನಿಮ್ಮನ್ನು ಪ್ರೀತಿಸಿನಿಮ್ಮ ಆಜ್ಞೆಗಳನ್ನು ಅನುಸರಿಸುವವರಿಗೆ ನೀವು ಮಾಡಿದ ವಾಗ್ದಾನಗಳನ್ನು ಪ್ರೀತಿಯಿಂದ ನೆರವೇರಿಸುತ್ತೀರಿ.

ನಾವು ಪಾಪಾಪರಾಧಗಳನ್ನು ಮಾಡಿಕೆಟ್ಟವರಾಗಿ ನಡೆದಿದ್ದೇವೆನಿಮಗೆ ವಿರುದ್ಧ ತಿರುಗಿಬಿದ್ದುನಿಮ್ಮ ಆಜ್ಞಾವಿಧಿಗಳನ್ನು ತೊರೆದುಬಿಟ್ಟಿದ್ದೇವೆಅರಸರಿಗೆಒಡೆಯರಿಗೆಹಿರಿಯರಿಗೆ ಹಾಗು ಜನಸಾಮಾನ್ಯರಿಗೆ ನಿಮ್ಮ ದಾಸರಾದ ಪ್ರವಾದಿಗಳು ನಿಮ್ಮ ಹೆಸರಿನಲ್ಲಿ ನುಡಿದ ಮಾತುಗಳಿಗೆ ನಾವು ಕಿವಿಗೊಡಲೇ ಇಲ್ಲಸರ್ವೇಶ್ವರಾನೀವು ಸತ್ಯಸ್ವರೂಪಿನಾವೋ ಲಜ್ಜೆಗೆಟ್ಟವರುಹೌದುಯೆಹೂದ್ಯರು ಹಾಗು ಜೆರುಸಲೇಮಿನ ನಿವಾಸಿಗಳು ಈಗಾಗಲೆ ನಿಮಗೆ ವಿರುದ್ಧ ಮಾಡಿದ ದ್ರೋಹದ ನಿಮಿತ್ತ ನಿಮ್ಮಿಂದ ದೇಶವಿದೇಶಗಳಿಗೆ ತಳ್ಳಲ್ಪಟ್ಟಿದ್ದಾರೆದೂರದ ದೇಶಗಳಿಗೂ ಹತ್ತಿರದ ನಾಡುಗಳಿಗೂ ಚದರಿಹೋಗಿರುವ ಎಲ್ಲ ಇಸ್ರಯೇಲರು ನಾಚಿಕೆಗೆ ಈಡಾಗಿದ್ದಾರೆಸ್ವಾಮೀನಿಮಗೆ ವಿರುದ್ಧ ಪಾಪಮಾಡಿದ್ದರಿಂದ ನಾವೂ ನಮ್ಮ ಅರಸರೂ ಒಡೆಯರೂ ಹಿರಿಯರೂ ನಾಚಿಕೆಗೆ ಗುರಿಯಾಗಿದ್ದೇವೆನಮ್ಮ ದೇವರಾದ ಸರ್ವೇಶ್ವರನಮ್ಮನ್ನು ಕರುಣಿಸುವವರೂ ಕ್ಷಮಿಸುವವರೂ ಆಗಿದ್ದಾರೆಆದರೆ ನಾವು ಅವರಿಗೆ ವಿರುದ್ಧ ತಿರುಗಿಬಿದ್ದೆವುನಮ್ಮ ದೇವರಾದ ಸರ್ವೇಶ್ವರನ ಮಾತನ್ನು ಕೇಳಲಿಲ್ಲಅವರ ದಾಸರಾದ ಪ್ರವಾದಿಗಳ ಮುಖಾಂತರ ನಮಗೆ ಗೊತ್ತುಮಾಡಿದ ಸನ್ಮಾರ್ಗದಲ್ಲಿ ನಾವು ನಡೆಯಲಿಲ್ಲ.

ಶುಭಸಂದೇಶ : ಲೂಕ 6: 36-38 


ನಿಮ್ಮ ತಂದೆಯಾದ ದೇವರಂತೆ ನೀವೂ ದಯಾವಂತರಾಗಿರಿ. ನೀವು ಇತರರ ಬಗ್ಗೆ ತೀರ್ಪು ಕೊಡಬೇಡಿಆಗ ದೇವರು ನಿಮ್ಮ ಬಗ್ಗೆ ತೀರ್ಪು ಕೊಡುವುದಿಲ್ಲಪರರನ್ನು ದಂಡನೆಗೆ ಗುರಿ ಮಾಡಬೇಡಿದೇವರು ನಿಮ್ಮನ್ನೂ ದಂಡನೆಗೆ ಗುರಿ ಮಾಡುವುದಿಲ್ಲಪರರನ್ನು ಕ್ಷಮಿಸಿರಿದೇವರು ನಿಮ್ಮನ್ನೂ ಕ್ಷಮಿಸುವರುಪರರಿಗೆ ಕೊಡಿದೇವರು ನಿಮಗೂ ಕೊಡುವರುಅಳತೆಯಲ್ಲಿ ತುಂಬಿಕುಲುಕಿಅದುಮಿ ತುಳುಕುವಂತೆ ಅಳೆದು ನಿಮ್ಮ ಮಡಿಲಿಗೆ ಹಾಕುವರುನೀವು ಕೊಟ್ಟ ಅಳತೆಯಲ್ಲೇ ದೇವರು ನಿಮಗೂ ಅಳೆದು ಕೊಡುವರು,” ಎಂದರು.


ಮನಸ್ಸಿಗೊಂದಿಷ್ಟು : " ನೀವು ಕೊಟ್ಟ ಅಳತೆಯಲ್ಲೇ ನಿಮಗೂ ಕೊಡಲಾಗುತ್ತದೆ" ಎನ್ನುತ್ತಾರೆ ಯೇಸು . ಕ್ರೈಸ್ತರು  ಅಥವಾ ಕ್ರಿಸ್ತನ ಹಿಂಬಾಲಕರು  ಪಾಲಿಸಬೇಕಾದ ಮೌಲ್ಯಗಳು ಈ ಲೋಕದ ಅಳತೆಗೋಲಿನಲ್ಲಿ ಅಲ್ಲ , ಆದರೆ ದೇವರ ಅಳತೆಯಲ್ಲಿ. ನಮ್ಮ ಪ್ರೀತಿ, ಸಹನೆ, ಕ್ಷಮೆ ಎಲ್ಲವೂ ಮಾನವ ಅಳತೆಯನ್ನು ಮೀರಿ ದೈವತ್ವದ ಮಟ್ಟದಲ್ಲಿ ಇರಬೇಕೆನ್ನುವುದು ಕ್ರಿಸ್ತ ನಮ್ಮಿಂದ ಬಯಸುತ್ತಿದ್ದಾರೆ. "ಸಾಧ್ಯವೇ?" ಎನ್ನುವುದು ನಮ್ಮ ಪ್ರಶ್ನೆಯಾದರೆ, "ಎಲ್ಲವೂ  ಸಾಧ್ಯ" ಎನ್ನುವುದು ದೈವ ಪ್ರೀತಿಯನ್ನು ಅನುಭವಿಸಿರುವ ನಾವೇ ಕಂಡುಕೊಳ್ಳಬಹುದಾದ ಉತ್ತರ.    

ಆ ಅಳತೆಯ ಎತ್ತರಕ್ಕಾಗಿ ಹಾತೊರೆಯೋಣ.

29.08.2026 - ಸ್ನಾನಿಕ ಯೊವಾನ್ನನ ತಲೆಯನ್ನು ಕೇಳು

  ಸಂತ ಸ್ನಾನಿಕ ಯೊವಾನ್ನನ ಶಿರಚ್ಛೇದನ ಮೊದಲನೇ ವಾಚನ: ಯೆರೆಮಿಯ: 1: 17-19 ಆದುದರಿಂದ ನೀನು ನಿನ್ನ ನಡುವನ್ನು ಕಟ್ಟಿ ನಿಂತುಕೊಂಡು ನಾನು ನಿನಗೆ ಆಜ್ಞಾಪಿಸುವುದನ್ನೆಲ್ಲ...