ಮೊದಲನೇ ವಾಚನ: ರೋಮನರಿಗೆ 1:16-25
17.10.23
16.10.23 - "ಯೋನನಿಗಿಂತಲೂ ಮೇಲಾದವನು ಇಗೋ, ಇಲ್ಲಿದ್ದಾನೆ"
ಮೊದಲನೇ ವಾಚನ: ರೋಮನರಿಗೆ 1:1-7
ಹಾಡಿರಿ ಪ್ರಭುವಿಗೆ ಹೊಸಗೀತೆಯೊಂದನು|
ಎಸಗಿಹನಾತನು ಪವಾಡ ಕಾರ್ಯಗಳನು|
ಗಳಿಸಿತಾತನ ಕೈ ಪೂತಭುಜ ಗೆಲುವನು||
ಪ್ರಕಟಿಸಿಹನು ಪ್ರಭು ತನ್ನ ಮುಕ್ತಿ ವಿಧಾನವನು|
ರಾಷ್ಟ್ರಗಳಿಗೆ ತೋರಿಸಿಹನು ಜೀವೋದ್ಧಾರಕ ಶಕ್ತಿಯನು||
ಸ್ಮರಿಸಿಕೊಂಡನು ಪ್ರಭು ತನ್ನ ಪ್ರೀತಿಯನು|
ಇಸ್ರಯೇಲ್ ಕುಲದ ಬಗ್ಗೆ ತನ್ನ ಸತ್ಯತೆಯನು||
ನಮ್ಮ ದೇವ ಸಾಧಿಸಿದ ಜಯಗಳಿಕೆ||
ಭೂನಿವಾಸಿಗಳೇ, ಮಾಡಿರಿ ಸುಮಧುರ ಭಜನೆ|
ಜನರ ಗುಂಪು ಹೆಚ್ಚುತ್ತಿದ್ದಾಗ, ಯೇಸುಸ್ವಾಮಿ ಹೀಗೆಂದು ಮುಂದುವರಿಸಿದರು: "ಈ ಪೀಳಿಗೆ ಕೆಟ್ಟ ಪೀಳಿಗೆ, ಇದು ಅದ್ಬುತಕಾರ್ಯವನ್ನು ಸಂಕೇತವಾಗಿ ಕೋರುತ್ತದೆ ಪ್ರವಾದಿ ಯೋನನ ಸಂಕೇತವೇ ಹೊರತು ಬೇರೆ ಯಾವ ಸಂಕೇತವೂ ಇದಕ್ಕೆ ದೊರಕದು. ಹೇಗೆಂದರೆ, ನಿನೆವೆ ನಗರದ ಜನರಿಗೆ ಪ್ರವಾದಿ ಯೋನನು ಸಂಕೇತವಾದಂತೆ ನರಪುತ್ರನು ಈ ಸಂತತಿಗೆ ಸಂಕೇತವಾಗಿರುವನು ದೈವತೀರ್ಪಿನ ದಿನ ದಕ್ಷಿಣದೇಶದ ರಾಣಿ ಈ ಪೀಳಿಗೆಗೆ ಎದುರಾಗಿ ನಿಂತುಕೊಂಡು, ಇವರನ್ನು ಅಪರಾಧಿಗಳೆಂದು ತೋರಿಸುವಳು. ಆಕೆ ಸೊಲೊಮೋನನ ಜ್ಞಾನೋಕ್ತಿಗಳನ್ನು ಕೇಳುವುದಕ್ಕಾಗಿ ದೇಶದ ಕಟ್ಟಕಡೆಯಿಂದ ಬಂದಳು. ಆದರೆ, ಸೊಲೊಮೋನನಿಗಿಂತಲೂ ಮೇಲಾದವನು ಇಗೋ, ಇಲ್ಲಿದ್ದಾನೆ. ತೀರ್ಪಿನ ದಿನ ನಿನೆವೆ ನಗರದವರು ಈ ಪೀಳಿಗೆಗೆ ಎದುರಾಗಿ ನಿಂತು ಇದನ್ನು ಅಪರಾಧಿ ಎಂದು ತೋರಿಸುವರು. ಏಕೆಂದರೆ, ಪ್ರವಾದಿ ಯೋನನ ಬೋಧನೆಯನ್ನು ಕೇಳಿ ಪಶ್ಚಾತ್ತಾಪಪಟ್ಟು ಅವರು ದೇವರಿಗೆ ಅಭಿಮುಖರಾದರು. ಆದರೆ ಪ್ರವಾದಿ ಯೋನನಿಗಿಂತಲೂ ಮೇಲಾದವನು ಇಗೋ, ಇಲ್ಲಿದ್ದಾನೆ.
15.10.23 - ಹೀಗೆ, ಆಹ್ವಾನಿತರು ಅನೇಕರಾದರೂ ಆರಿಸಲಾದವರು ಕೆಲವರು ಮಾತ್ರ,”
ಮೊದಲನೇ ವಾಚನ: ಪ್ರವಾದಿ ಯೆಶಾಯನ ಗ್ರಂಥ 25:6-10
ಸೇನಾಧೀಶ್ವರ ಸರ್ವೇಶ್ವರ ಈ ಪರ್ವತದಲ್ಲಿ ಸಕಲ ರಾಷ್ಟ್ರಗಳಿಗೆ ಸಾರವತ್ತಾದ ಮೃಷ್ಟಾನ್ನವನ್ನೂ ಶ್ರೇಷ್ಟವಾದ ದ್ರಾಕ್ಷಾರಸವನ್ನೂ ಭೋಜನಕ್ಕಾಗಿ ಅಣಿಗೊಳಿಸುವರು. ಸಮಸ್ತ ರಾಷ್ಟ್ರಗಳನ್ನು ಆವರಿಸಿರುವ ಮುಸುಕನ್ನೂ ಸಕಲ ದೇಶಗಳನ್ನು ಮುಚ್ಚಿರುವ ತೆರೆಯನ್ನೂ ಇದೇ ಪರ್ವತದಲ್ಲಿ ನಾಶಮಾಡುವರು. ಮರಣವನ್ನು ಶಾಶ್ವತವಾಗಿ ನಿರ್ನಾಮಮಾಡುವರು. ಸರ್ವೇಶ್ವರ ಸ್ವಾಮಿ ಎಲ್ಲರ ಕಣ್ಣೀರನ್ನು ಒರೆಸಿಬಿಡುವರು. ತಮ್ಮ ಪ್ರಜೆಗಾದ ಅವಮಾನವನ್ನು ಜಗದಿಂದಲೇ ತೊಲಗಿಸಿಬಿಡುವರು. ಸರ್ವೇಶ್ವರ ಸ್ವಾಮಿಯೇ ಇಂತೆಂದು ನುಡಿದಿದ್ದಾರೆ. ಇದು ನೆರವೇರಿದಾಗ ಜನರು: “ಇವರೇ ನಮ್ಮ ದೇವರು; ನಮ್ಮನ್ನು ರಕ್ಷಿಸುವರೆಂದು ಇವರನ್ನೇ ನೆಚ್ಚಿಕೊಂಡಿದ್ದೆವು ಇವರೇ ಸರ್ವೇಶ್ವರ; ಇವರನ್ನೇ ನೆಚ್ಚಿಕೊಂಡಿದ್ದೆವು. ಇವರು ನೀಡುವ ರಕ್ಷಣೆಯಲ್ಲಿ ಆನಂದಿಸೋಣ !” ಎಂದು ಹೇಳಿಕೊಳ್ಳುವರು. ಸರ್ವೇಶ್ವರ ಸ್ವಾಮಿಯ ಅಭಯ ಹಸ್ತವು ಈ ಪರ್ವತದ ಮೇಲೆ ಶಾಶ್ವತವಾಗಿ ನೆಲಸುವುದು."
ಕೀರ್ತನೆ: 23:1-3, 3-4, 5, 6
ಶ್ಲೋಕ: ದೇವರ ಮಂದಿರದಲಿ ನಾವಾಸಿಸುವೆ ಚಿರಕಾಲವೆಲ್ಲ
ಎರಡನೇ ವಾಚನ: ಫಿಲಿಪ್ಪಿಯರಿಗೆ 4:12-14, 19-20
ಸಹೋದರರೇ, ಬಡತನ ಇರಲಿ, ಸಿರಿತನವಿರಲಿ, ಕೊರತೆಯಿರಲಿ, ಸಮೃದ್ಧಿ ಇರಲಿ, ಹಸಿದಿರಲಿ, ಹೊಟ್ಟೆ ತುಂಬಿರಲಿ - ಯಾವ ಸ್ಥಿತಿಯಲ್ಲಿದ್ದರೂ, ಎಲ್ಲಾ ವೇಳೆಯಲ್ಲಿಯೂ ತೃಪ್ತನಾಗಿರುವ ರಹಸ್ಯವನ್ನು ತಿಳಿದಿದ್ದೇನೆ. ಸರ್ವೇಶನ ಶಕ್ತಿಯಿಂದ ಸರ್ವವನ್ನೂ ಸಾಧಿಸುವ ಸಾಮರ್ಥ್ಯ ನನಗಿದೆ. ಆದರೂ ನನ್ನ ಸಂಕಷ್ಟಗಳಲ್ಲಿ ಸಹಾಯ ಮಾಡಿದುದು ನಿಮ್ಮ ಸೌಜನ್ಯವೇ ಸರಿ. ನನ್ನ ದೇವರು ತಮ್ಮ ಮಹದೈಶ್ವರ್ಯದಿಂದ ನಿಮ್ಮ ಅಗತ್ಯಗಳನ್ನೆಲ್ಲಾ ಕ್ರಿಸ್ತಯೇಸುವಿನ ಮುಖಾಂತರ ಪೂರೈಸುವರು. ನಮ್ಮ ತಂದೆಯಾದ ದೇವರಿಗೆ ನಿರಂತವೂ ಮಹಿಮೆ ಸಲ್ಲಲಿ!
ಶುಭಸಂದೇಶ: ಮತ್ತಾಯ 22:1-14
14.10.23 - "ದೇವರ ವಾಕ್ಯವನ್ನು ಕೇಳಿ, ಅದನ್ನು ಅನುಸರಿಸುವವನು ಹೆಚ್ಚು ಭಾಗ್ಯವಂತನು!"
ಮೊದಲನೇ ವಾಚನ: ಯೊವೇಲ 3:12-21
13.10.23 - "ಸ್ವರ್ಗದಿಂದ ಒಂದು ಅದ್ಬುತ ಕಾರ್ಯವನ್ನು ಮಾಡಿತೋರಿಸುವಂತೆ ಕೇಳಿದರು"
ಮೊದಲನೇ ವಾಚನ: ಯೊವೇಲ 1:13-15; 2:1-2

ಯಾಜಕರೇ, ಗೋಣಿತಟ್ಟನ್ನುಟ್ಟು ರೋದಿಸಿರಿ; ಬಲಿಪೀಠದ ಪರಿಚಾರಕರೇ, ಪ್ರಲಾಪಿಸಿರಿ; ದೇವರ ದಾಸರೇ, ಬನ್ನಿ; ಗೋಣಿತಟ್ಟನ್ನುಟ್ಟು ಜಾಗರಣೆ ಮಾಡಿರಿ. ದೇವರ ಆಲಯದಲ್ಲಿ ಧ್ಯಾನಪಾನ ನ್ಯೆವೇದ್ಯಗಳು ನಿಂತುಹೋಗಿವೆ. ಉಪವಾಸ ವ್ರತವನ್ನು ಕೈಗೊಂಡು ಮಹಾಸಭೆಯನ್ನು ಕರೆಯಿರಿ; ಹಿರಿಯರನ್ನೂ ನಾಡಿನ ಜನಸಾಮಾನ್ಯರನ್ನೂ ಸೇರಿಸಿರಿ; ದೇವರಾದ ಸರ್ವೇಶ್ವರಸ್ವಾಮಿಯ ಆಲಯಕ್ಕೆ ಬರಮಾಡಿರಿ; ಆ ಸ್ವಾಮಿಗೆ ಪ್ರಾರ್ಥನೆಮಾಡಿರಿ. ಸರ್ವೇಶ್ವರಸ್ವಾಮಿಯ ದಿನ ಸಮಿಾಪಿಸಿದೆ. ಆ ದಿನ ಸರ್ವಶಕ್ತನಿಂದ ವಿನಾಶವನ್ನು ತರಲಿದೆ; ಎಂಥಾ ಭಯಂಕರ ದಿನವದು! ಸಿಯೋನಿನಲ್ಲಿ ಕೊಂಬೂದಿರಿ; ನನ್ನ ಪರಿಶುದ್ಧ ಪರ್ವತದಲ್ಲಿ ಎಚ್ಚರಿಕೆಯ ವಾಣಿ ಮೊಳಗಲಿ; ಸಮಸ್ತ ದೇಶನಿವಾಸಿಗಳು ಹೆದರಿ ನಡುಗಲಿ, ಸರ್ವೇಶ್ವರಸ್ವಾಮಿಯ ದಿನ ಬರಲಿದೆ, ಸನ್ನಿತವಾಗಿದೆ. ಅದು ಕಾರಿರುಳಿನ ಕರಾಳ ದಿನ, ಕಾರ್ಮುಗಿಲ ಕಾರ್ಗತ್ತಲ ದಿನ. ಮುಂಬೆಳಕು ಗುಡ್ಡದಿಂದ ಗುಡ್ಡಕ್ಕೆ ಹರಡುವಂತೆ ಪ್ರಬಲವಾದ ದೊಡ್ಡ ಸೈನ್ಯವೊಂದು ಬರುತ್ತಿದೆ; ಇಂಥ ಸೈನ್ಯ ಹಿಂದೆಂದೂ ಬಂದಿಲ್ಲ, ತಲತಲಾಂತರಕ್ಕೂ ಬಬರುವಂತಿಲ್ಲ.
12.10.23 - "ನಿಮ್ಮ ತಂದೆ ತಮ್ಮನ್ನು ಕೇಳಿಕೊಳ್ಳುವವರಿಗೆ ಪವಿತ್ರಾತ್ಮ ಅವರನ್ನೇ ಅನುಗ್ರಹಿಸಬಲ್ಲರು"
ಮೊದಲನೇ ವಾಚನ: ಮಲಾಕಿಯನ 3:13-4:2
11.10.23 - "ನಿಮ್ಮ ಸಾಮ್ರಾಜ್ಯ ಬರಲಿ"
ಮೊದಲನೇ ವಾಚನ: ಯೋನ 4:1-11
ಸರ್ವೇಶ್ವರಸ್ವಾಮಿಯ ವರ್ತನೆಯು ಯೋನನಿಗೆ ಹಿಡಿಸಲಿಲ್ಲ. ಅವನ ಕೋಪ ನೆತ್ತಿಗೇರಿತು. ಆಗ ಅವನು ಹೀಗೆಂದು ಮೊರೆಯಿಟ್ಟನು: "ಸ್ವಾಮಿಾ, ಈ ರೀತಿ ಸಂಭವಿಸುವುದೆಂದು ನಾನು ಸ್ವದೇಶವನ್ನು ಬಿಡುವ ಮುನ್ನವೇ ನಿಮಗೆ ಹೇಳಿದ್ದೇನಲ್ಲವೆ? ಈ ಕಾರಣದಿಂದಲೇ ಅಲ್ಲವೆ ನಾನು ತಾರ್ಷಿಷಿಗೆ ಓಡಿಹೋಗಲು ಪ್ರಯತ್ನಿಸಿದ್ದು? ನೀವು ಪ್ರೀತಿಸ್ವರೂಪಿ, ಕರುಣಾಮಯಿ, ಸಹನಾಶೀಲರಾದ ದೇವರು, ವಿಧಿಸಬೇಕೆಂದಿದ್ದ ಶಿಕ್ಷೆಯನ್ನು ಹಿಂತೆಗೆದುಕೊಳ್ಳುವ ದೇವರು - ಎಂದು ಆಗಲೇ ನನಗೆ ತಿಳಿದಿತ್ತು. ಆದುದರಿಂದ ಸರ್ವೇಶ್ವರಾ, ನನ್ನ ಪ್ರಾಣವನ್ನು ಹಿಂತೆಗೆದುಕೊಳ್ಳಿ. ನಾನು ಬದುಕುವುದಕ್ಕಿಂತ ಸಾಯುವುದೇ ಲೇಸು." ಎಂದು ಮೊರೆಯಿಟ್ಟನು. ಅದಕ್ಕೆ ಸರ್ವೇಶ್ವರ, "ನೀನು ಹೀಗೆ ಸಿಟ್ಟುಗೊಳ್ಳುವುದು ಸರಿಯೇ?" ಎಂದರು. ಅನಂತರ ಯೋನನು ಆ ನಗರವನ್ನು ಬಿಟ್ಟು ಪೂರ್ವದಿಕ್ಕಿಗೆ ಹೋದನು. ಅಲ್ಲಿ ತನಗಾಗಿ ಒಂದು ಗುಡಿಸಲನ್ನು ಕಟ್ಟಿಕೊಂಡನು. ನಗರಕ್ಕೆ ಏನು ಸಂಭವಿಸುತ್ತದೋ ಎಂಬುದನ್ನು ನೋಡಲು ಅದರ ನೆರಳಿನಲ್ಲಿ ಕುಳಿತನು. ದೇವರಾದ ಸರ್ವೇಶ್ವರ ಆ ಸ್ಥಳದಲ್ಲಿ ಒಂದು ಸೋರೆಬಳ್ಳಿ ಮೊಳೆಯುವಂತೆ ಮಾಡಿದರು. ಅದು ಬೆಳೆದು ತಲೆಗೆ ನೆರಳನ್ನೂ ಮನಸ್ಸಿಗೆ ತಣಿವನ್ನೂ ನೀಡಿತು. ಯೋನನಿಗೆ ಬಹಳ ಸಂತೋಷವಾಯಿತು. ಆದರೆ ಮಾರನೆಯ ದಿನ ಮುಂಜಾನೆ ದೇವರ ಆಜ್ಞಾನುಸಾರ ಆ ಗಿಡಕ್ಕೆ ಹುಳುವೊಂದು ಹೊಡೆಯಿತು. ಆಗ ಗಿಡವು ಒಣಗಿಹೋಯಿತು. ಸೂರ್ಯನು ಏರುತ್ತಿರಲು, ಸರ್ವೇಶ್ವರನ ಚಿತ್ತಾನುಸಾರ ಬಿಸಿಯಾದ ಮೂಡಣ ಗಾಳಿ ಬೀಸಿತು. ಬಿಸಿಲಿನ ತಾಪದಿಂದ ಯೋನನು ಮೂರ್ಛೆಹೋಗುವಂತಾದನು; ಸಾವನ್ನು ಅಪೇಕ್ಷಿಸುತ್ತಾ: "ಬದುಕಿರುವುದಕ್ಕಿಂತ ಸಾಯುವುದೇ ಲೇಸು," ಎಂದು ಬೇಡಿಕೊಂಡನು. ಅದಕ್ಕೆ ದೇವರು: "ನೀನು ಸೋರೆಗಿಡದ ವಿಷಯದಲ್ಲಿ ಸಿಟ್ಟುಗೊಳ್ಳುವುದು ಸರಿಯೇ?" ಎಂದು ಕೇಳಲು, ಯೋನನು, "ಹೌದು, ಸಾವನ್ನು ಬಯಸುವಷ್ಟು ಸಿಟ್ಟುಗೊಳ್ಳುವುದು ಸರಿಯಲ್ಲವೇ?" ಎಂದು ಉತ್ತರವಿತ್ತನು. ಆಗ ಸರ್ವೇಶ್ವರ: "ನೀನು ಆ ಗಿಡಕ್ಕಾಗಿ ಶ್ರಮಿಸಲೂ ಇಲ್ಲ, ಅದನ್ನು ಬೆಳೆಸಲೂ ಇಲ್ಲ ಅದು ತಾನಾಗಿಯೇ ಒಂದು ರಾತ್ರಿಯಲ್ಲಿ ಬೆಳೆಯಿತು. ಒಂದೇ ರಾತ್ರಿಯಲ್ಲಿ ಬಾಡಿಹೋಯಿತು. ಅದಕ್ಕಾಗಿ ಇಷ್ಟೊಂದು ಚಿಂತೆಯೇ? ಹೀಗಿರುವಲ್ಲಿ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಹೆಚ್ಚು ಮಂದಿ ನಿರಪರಾಧಿಗಳೂ ಅಪಾರ ಪಶುಪ್ರಾಣಿಗಳೂ ಇರುವ ನಿನೆವೆ ಮಹಾನಗರದ ಬಗ್ಗೆ ನಾನು ಇನ್ನೆಷ್ಟು ಚಿಂತೆಮಾಡಬೇಕು?" ಎಂದರು.
ಶ್ಲೋಕ: ಪ್ರಭೂ, ನೀ ದಯಾಳು; ದೇವಾ, ನೀ ಕರುಣಾಮೂರ್ತಿ
28.08.2026 - ಜಾಗೃತರಾಗಿರಿ! ಏಕೆಂದರೆ ಆ ದಿನವಾಗಲಿ, ಆ ಗಳಿಗೆ ಆಗಲಿ ಯಾವಾಗ ಬರುತ್ತದೆಂದು ನಿಮಗೆ ತಿಳಿಯದು
ಮೊದಲನೇ ವಾಚನ: 1 ಕೊರಿಂಥಿಯರಿಗೆ 1:17-25 ಯೇಸುಕ್ರಿಸ್ತರು ನನ್ನನ್ನು ಕಳುಹಿಸಿರುವುದು ದೀಕ್ಷಾಸ್ನಾನವನ್ನು ಕೊಡುವುದಕ್ಕಲ್ಲ. ಶುಭಸಂದೇಶವನ್ನು ಸಾರುವುದಕ್ಕೆ ಅದೂ ವಾಕ...
-
ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 15:22-31 ಅನಂತರ ಪ್ರೇಷಿತರೂ ಸಭಾಪ್ರಮುಖರೂ ಇಡೀ ಧರ್ಮಸಭೆಯ ಸಮ್ಮತಿಪಡೆದು, ತಮ್ಮಲ್ಲಿ ಕೆಲವರನ್ನು ಆರಿಸಿ, ಪೌಲ ಮತ್ತು ಬಾರ್ಸಬ...
-
ಮೊದಲನೇ ವಾಚನ: 2 ತಿಮೊಥೇಯನಿಗೆ 4:1-8 ದೇವರ ಸಮಕ್ಷಮದಲ್ಲಿ, ಮತ್ತು ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರ್ಪನ್ನು ಕೊಡಲು ಬರುವ ಕ್ರಿಸ್ತಯೇಸುವಿನ ಸಮಕ್ಷಮದಲ್ಲಿ, ನಾನ...
-
ಮೊದಲನೇ ವಾಚನ: ಯೆಶಾಯ 52:13-53:12 ನನ್ನ ದಾಸನಿದೋ, ಕೃತಾರ್ಥ ಆಗುವವನಾತ ಮಹಿಮಾನ್ವಿತ ಏರುವನು ಉನ್ನತ ಪದವಿಗಾತ. ಆತನ ಮುಖ ನರಮಾನವರ ಮುಖಕ್ಕಿಂತ ಆತನ ರೂಪ ನರಪುತ್ರರ ...











