18.12.25 - "ದಾವೀದ ವಂಶದ ಜೋಸೆಫನೇ, ಮರಿಯಳನ್ನು ನಿನ್ನ ಪತ್ನಿಯನ್ನಾಗಿ ಸ್ವೀಕರಿಸಲು ಅಂಜಬೇಡ. ಆಕೆ ಗರ್ಭಧರಿಸಿರುವುದು ಪವಿತ್ರಾತ್ಮ ಪ್ರಭಾವದಿಂದಲೇ. ಆಕೆ ಒಬ್ಬ ಮಗನನ್ನು ಹೆರುವಳು
17.12.2025 - ದಾವೀದನಿಂದ ಬಾಬಿಲೋನಿನ ದಾಸ್ಯ ದಿನಗಳವರೆಗೆ ಹದಿನಾಲ್ಕು, ಬಾಬಿಲೋನಿನ ದಾಸ್ಯ ದಿನಗಳಿಂದ ಕ್ರಿಸ್ತರವರೆಗೆ ಹದಿನಾಲ್ಕು ತಲೆಮಾರುಗಳು.
ಮೊದಲನೆಯ ವಾಚನ :ಆದಿಕಾಂಡದಿಂದ ಇಂದಿನ ವಾಚನ 49:2,8-10
ಯಕೋಬನ ಮಕ್ಕಳೇ, ಕೂಡಿ ಬಂದು ಕೇಳಿ ನೀವೆಲ್ಲರು, ಆಲಿಸಿ ನಿಮ್ಮ ತಂದೆ ಇಸ್ರಯೇಲನ ಮಾತನ್ನು: ಯೆಹೂದನೇ, ವಂದಿಸುವರು ಸಹೋದರರು, ನಿನ್ನ ಕೈಯಲ್ಲಿರುವುದು ಶತ್ರುಗಳ ಕುತ್ತಿಗೆಯು; ಎರಗುವರು ನಿನಗೆ ನಿನ್ನ ಅಣ್ಣತಮ್ಮಂದಿರು. ನನ್ನ ಪುತ್ರ ಯೆಹೂದ, ನೀ ಪ್ರಾಯದ ಸಿಂಹದಂತೆ, ಬೇಟೆ ಹಿಡಿದು ಬೆಟ್ಟ ಏರಿದ ಕಂಠೀರವನಂತೆ; ಕಾಲು ಮಡಿಚಿ ಹೊಂಚುಕೂತ ಕೇಸರಿಯಂತೆ. ಈ ಸಿಂಹಣಿಯನ್ನು ಕೆಣಕುವ ಕೆಚ್ಚು ಯಾರಿಗಿದೆ? ರಾಜ್ಯಾಧಿಕಾರ ಪಡೆದವನು ಬರುವ ತನಕ; ರಾಷ್ಟ್ರಗಳು ಆತನಿಗೆ ತಲೆಬಾಗುವ ತನಕ; ತಪ್ಪದು ರಾಜದಂಡ ಯೆಹೂದನ ಕೈಯಿಂದ, ಕದಲದು ಮುದ್ರೆ ಕೋಲು ಅವನ ವಂಶದಿಂದ.
ಕೀರ್ತನೆ - 72:1-2,3-4,7-8,17, v. 7
ಶ್ಲೋಕ: ಬೆಳೆಯಲಿ ಆತನ ಪಾಲನೆಯಲಿ ನ್ಯಾಯನೀತಿ | ಬೆಳಗಲಿ ಚಂದ್ರನಂತೆ ಸದಾ ಸಂಪೂರ್ಣ ಶಾಂತಿ ||
1. ತಿಳಿಸು ನಿನ್ನ ನ್ಯಾಯವನು ದೇವಾ, ರಾಜನಿಗೆ|
ಕಲಿಸು ನಿನ್ನ ನೀತಿಯನು ರಾಜಕುವರನಿಗೆ||
ಆತನಾಳಲಿ ನಿನ್ನ ಪ್ರಜೆಯನು ನೀತಿಯಿಂದ|
ಪರಿಪಾಲಿಸಲಿ ದೀನದಲಿತರನು ನ್ಯಾಯದಿಂದ||
ಶ್ಲೋಕ
2. ಬೆಟ್ಟಗುಡ್ಡಗಳಿಂದ ಬರಲಿ ಸಮೃದ್ದಿ|
ನಿನ್ನ ಪ್ರಜೆಗೆ ಫಲಿಸಲಿ ನ್ಯಾಯನೀತಿ||
ದೀನದಲಿತರನಾತ ಉದ್ಧರಿಸಲಿ|
ಬಡಬಗ್ಗರಿಗೆ ನ್ಯಾಯ ದೊರಕಿಸಲಿ||
ಶ್ಲೋಕ
3. ಬೆಳೆಯಲಿ ಆತನ ಪಾಲನೆಯಲಿ ನ್ಯಾಯನೀತಿ|
ಬೆಳಗಲಿ ಚಂದ್ರನಂತೆ ಸದಾ ಸಂಪೂರ್ಣ ಶಾಂತಿ||
ಸಾಗರದಿಂದ ಸಾಗರದವರೆಗಿರಲಿ ಆತನ ಆಧಿಪತ್ಯ|
ಮಹಾ ನದಿಯಿಂದ ಬುವಿ ಎಲ್ಲೆಯವರೆಗಿರಲಿ ಆತನ ಪ್ರಭುತ್ವ||
ಶ್ಲೋಕ
4. ಶಾಶ್ವತವಾಗಲಿ ಶ್ರೀನಾಮ ಆತನಿಗೆ|
ಬೆಳಗಲಿ ಆತನ ಕೀರ್ತಿ ಸೂರ್ಯನಿರುವವರೆಗೆ||
ಆತನಾಶೀರ್ವಾದ ಕೋರಲಿ ಸರ್ವರು ತಮಗೆ|
ಶುಭವೆನ್ನಲಿ ಸಕಲ ರಾಷ್ಟ್ರಗಳು ಆತನಿಗೆ||
ಶ್ಲೋಕ
ಘೋಷಣೆ : ಅಲ್ಲೆಲೂಯ, ಅಲ್ಲೆಲೂಯ!
ಸಕಲವನ್ನು ಶಕ್ತಿಯಿಂಲೂ, ದಯೆಯಿಂದಲೂ, ಆಳುವ ಮಹೋನ್ನತರ ಜ್ಞಾನವೇ| ಬಂದು ನಮಗೆ ಸತ್ಯದ ಮಾರ್ಗವನ್ನು ತಿಳಿಸಿರಿ ||
ಅಲ್ಲೆಲೂಯ!
ಶುಭಸಂದೇಶ : ಮತ್ತಾಯನು ಬರೆದ ಪವಿತ್ರ ಶುಭಸಂದೇಶದಿಂದ ವಾಚನ 1:1-17
ಅಬ್ರಹಾಮನ ಮನೆತನಕ್ಕೆ ಸೇರಿದ ದಾವೀದ ಕುಲದ ಯೇಸು ಕ್ರಿಸ್ತರ ವಂಶಾವಳಿ: ಅಬ್ರಹಾಮನಿಗೆ ಇಸಾಕನು, ಇಸಾಕನಿಗೆ ಯಕೋಬನು, ಯಕೋಬನಿಗೆ ಯೂದ ಹಾಗೂ ಆತನ ಸಹೋದರರು ಹುಟ್ಟಿದರು. ಯೂದನಿಗೆ ತಾಮರ ಎಂಬವಳಿಂದ, ಪೆರಸ್ ಹಾಗೂ ಜೆರಹನ್ ಹುಟ್ಟಿದರು. ಪೆರಸನಿಗೆ ಹೆಸ್ರೋನ್, ಹೆಸ್ರೋನನಿಗೆ ರಾಮ್, ರಾಮನಿಗೆ ಅಮ್ಮಿನದಾಬ್, ಅಮ್ಮಿನದಾಬನಿಗೆ ನಹಸ್ಸೋನ್, ಸಹಸ್ಸೋನನಿಗೆ ಸಲ್ಮೋನ್, ಸಲ್ಮೋನನಿಗೆ ರಹಾಬ್ ಎಂಬವಳಿಂದ ಬೋವಜ್, ಬೋವಜನಿಗೆ ರೂತ್ ಎಂಬವಳಿಂದ ಓಬೇದ್, ಓಬೇದನಿಗೆ ಜೆಸ್ಸೆಯ, ಜೆಸ್ಸೆಯನಿಗೆ ದಾವೀದರಸನು ಹುಟ್ಟಿದರು. ದಾವೀದನಿಗೆ ಊರಿಯನ ಹೆಂಡತಿಯಿಂದ ಸೊಲೋಮೋನ್, ಸೊಲೊಮೋನನಿಗೆ ರೆಹಬ್ಬಾಮ, ರೆಹಬ್ಬಾಮನಿಗೆ ಅಬೀಯ, ಅಬೀಯನಿಗೆ ಆಸನ್ ಹುಟ್ಟಿದರು. ಆಸನನಿಗೆ ಯೋಸೆಫಾತ್, ಯೋಸೆಫಾತನಿಗೆ ಯೆಹೋರಾಮ್, ಯೆಹೋರಾಮನಿಗೆ ಉಜ್ಜೀಯ ಹುಟ್ಟಿದರು. ಉಜ್ಜೀಯನಿಗೆ ಯೋತಾಮ್, ಯೋತಾಮನಿಗೆ ಅಹಾಜ್, ಅಹಾಜನಿಗೆ ಹಿಜ್ಕೀಯನು ಹುಟ್ಟಿದರು. ಹಿಜ್ಕೀಯನಿಗೆ ಮನಸ್ಸೆ, ಮನಸ್ಸೆಗೆ ಆಮೋನ್, ಆಮೋನನಿಗೆ ಯೋಷೀಯ ಹುಟ್ಟಿದರು. ಯೋಷೀಯನಿಗೆ ಯೆಕೊನ್ಯ ಮತ್ತು ಅವನ ಸಹೋದರರು ಹುಟ್ಟಿದರು. ಈ ಸಮಯದಲ್ಲೇ ಇಸ್ರಯೇಲರನ್ನು ಬಾಬಿಲೋನಿಗೆ ಸೆರೆ ಒಯ್ದದ್ದು. ಬಾಬಿಲೋನಿಗೆ ಸೆರೆಹೋದ ದಾಸ್ಯ ದಿನಗಳು ಮುಗಿದ ಮೇಲೆ ಯೆಕೊನ್ಯನಿಗೆ ಸಲಥಿಯೇಲ್, ಸಲಥಿಯೇಲನಿಗೆ ಜೆರುಬಾಬೆಲ್, ಜೆರುಬಾಬೆಲನಿಗೆ ಅಬೀಹೂದ್, ಅಬೀಹೂದನಿಗೆ ಎಲ್ಯಕೀಮ್, ಎಲ್ಯಕೀಮನಿಗೆ ಅಜೋರ್ ಹುಟ್ಟಿದರು. ಅಜೋರನಿಗೆ ಸದೋಕ್, ಸದೋಕನಿಗೆ ಅಖೀಮ್, ಅಖೀಮನಿಗೆ ಎಲಿಹೂದ್ ಎಲಿಹೂದನಿಗೆ ಎಲಿಯಾಜರ್, ಎಲಿಯಾಜರನಿಗೆ ಮತ್ತಾನ್, ಮತ್ತಾನನಿಗೆ ಯಕೋಬ್ ಹುಟ್ಟಿದರು. ಯಕೋಬನಿಗೆ ಮರಿಯಳ ಪತಿಯಾದ ಜೋಸೆಫನು ಹುಟ್ಟಿದನು. ಈ ಮರಿಯಳಿಂದಲೇ "ಕ್ರಿಸ್ತ" ಎಂದು ಕರೆಯಲಾಗುವ ಯೇಸು ಹುಟ್ಟಿದ್ದು; ಹೀಗೆ ಒಟ್ಟು, ಅಬ್ರಹಾಮನಿಂದ ದಾವೀದನವರೆಗೆ ಹದಿನಾಲ್ಕು, ದಾವೀದನಿಂದ ಬಾಬಿಲೋನಿನ ದಾಸ್ಯ ದಿನಗಳವರೆಗೆ ಹದಿನಾಲ್ಕು, ಬಾಬಿಲೋನಿನ ದಾಸ್ಯ ದಿನಗಳಿಂದ ಕ್ರಿಸ್ತರವರೆಗೆ ಹದಿನಾಲ್ಕು ತಲೆಮಾರುಗಳು.
ಪ್ರಭುವಿನ ಶುಭಸಂದೇಶ,
ಕ್ರಿಸ್ತರೇ ನಿಮಗೆ ಸ್ತುತಿ ಸಲ್ಲಲಿ
16.12.2025 - "ಸುಂಕದವರೂ ವೇಶ್ಯೆಯರೂ ನಿಮಗಿಂತ ಮೊದಲೇ ದೇವರ ಸಾಮ್ರಾಜ್ಯವನ್ನು ಪ್ರವೇಶಿಸುವರು ಎಂದು ನಿಮಗೆ ಸ್ಪಷ್ಟವಾಗಿ ಹೇಳುತ್ತೇನೆ.
ಮೊದಲನೆಯ ವಾಚನ : ಪ್ರವಾದಿ ಜೆಫನ್ಯನ ಗ್ರಂಥದಿಂದ ಇಂದಿನ ವಾಚನ: 3:1-2,9-13
- ಪ್ರಭುವಿನ ವಾಕ್ಯ
ದೇವರಿಗೆ ಕೃತಜ್ಞತೆ ಸಲ್ಲಲಿ
ಕೀರ್ತನೆ : 34 : 1-2,5-6, 16-17, 18,22, v. 6
ಶ್ಲೋಕ: ನಿರ್ಗತಿಕನು ಮೊರೆಯಿಡಲು ಪ್ರಭು ಕಿವಿಗೊಟ್ಟನು.
1. ಪ್ರಭುವನು ನಾ ಕೊಂಡಾಡುವೆ ಎಲ್ಲ ಕಾಲದೊಳು|
ಆತನ ಸ್ತುತಿ ಸದಾ ಇಹುದು ನನ್ನ ಬಾಯೊಳು||
ಪ್ರಭುವಿನಲ್ಲಿದೆ ನನ್ನ ಮನದಭಿಮಾನ|
ದೀನರಿದನು ಕೇಳಿ ಪಡೆಯಲಿ ಸುಮ್ಮಾನ||
ಶ್ಲೋಕ
2. ಆತನತ್ತ ತಿರುಗಿದ ಮುಖ ಅರಳುವುದು|
ಲಜ್ಜೆಯಿಂದೆಂದಿಗು ಕುಂದಿಹೋಗದು||
ನಿರ್ಗತಿಕನು ಮೊರೆಯಿಡಲು ಪ್ರಭು ಕಿವಿಗೊಟ್ಟನು|
ಸರ್ವಾಪತ್ತಿನಿಂದವನು ಮುಕ್ತಗೊಂಡನು||
ಶ್ಲೋಕ
3. ದುರ್ಜನರಿಗಾದರೋ ಪ್ರಭು ವಿಮುಖನು|
ಅವರ ಹೆಸರನು ಧರೆಯಿಂದ ಅಳಿಸುವನು||
ಕಿವಿಗೊಡುವನು ಪ್ರಭು ಸಜ್ಜನರ ಮೊರೆಗೆ|
ನೆರವೀವನವರ ಕಷ್ಟನಿವಾರಣೆಗೆ||
ಶ್ಲೋಕ
4. ಸನಿಹದಲ್ಲಿಹನು ಪ್ರಭು ಭಗ್ನ ಹೃದಯಿಗಳಿಗೆ|
ಉದ್ಧಾರಕನಾತನು ಮನಸ್ಸು ಕುಗ್ಗಿದವರಿಗೆ||
ತನ್ನ ದಾಸರನು ಉದ್ಧಾರ ಮಾಡದಿರನು ಪ್ರಭು|
ತನ್ನ ಶರಣರೊಳೊಬ್ಬರನು ದಂಡಿಸನಾ ವಿಭು||
ಶ್ಲೋಕ
ಘೋಷಣೆ
ಅಲ್ಲೆಲೂಯ, ಅಲ್ಲೆಲೂಯ!
ಇಗೋ, ಸರ್ವೇಶ್ವರಸ್ವಾಮಿ ತಮ್ಮ ಜನರನ್ನು ರಕ್ಷಿಸಲು ಬರುತ್ತಿದ್ದಾರೆ | ಅವರನ್ನು ಸ್ವೀಕರಿಸಲು ಸಿದ್ಧರಿರುವವರು ಧನ್ಯರು ||
ಅಲ್ಲೆಲೂಯ!
ಶುಭಸಂದೇಶ
ಮತ್ತಾಯನು ಬರೆದ ಪವಿತ್ರ ಶುಭಸಂದೇಶದಿಂದ ವಾಚನ: 21:28-32
ಆ ಕಾಲದಲ್ಲಿ ಯೇಸು ಮುಖ್ಯ ಯಾಜಕರನ್ನೂ ಪ್ರಜಾಪ್ರಮುಖರನ್ನೂ ಉದ್ದೇಶಿಸಿ ಹೀಗೆಂದರು:"ಈ ಬಗ್ಗೆ ನಿಮಗೇನು ಅನಿಸುತ್ತದೆ? ಒಬ್ಬಾತನಿಗೆ ಇಬ್ಬರು ಮಕ್ಕಳಿದ್ದರು. ಒಮ್ಮೆ ಆತ ಮೊದಲನೆಯ ಮಗನ ಹತ್ತಿರ ಬಂದು, 'ಮಗನೇ, ಈ ಹೊತ್ತು ದ್ರಾಕ್ಷಿ ತೋಟಕ್ಕೆ ಹೋಗಿ ಕೆಲಸಮಾಡು' ಎಂದ. ಅದಕ್ಕೆ ಅವನು, 'ನಾನು ಹೋಗುವುದಿಲ್ಲ' ಎಂದು ಉತ್ತರವಿತ್ತ. ಆದರೂ ಅನಂತರ ಪಶ್ಚಾತ್ತಾಪಪಟ್ಟು ಅವನು ತೋಟಕ್ಕೆ ಹೋದ. ತಂದೆ ಎರಡನೆಯ ಮಗನ ಹತ್ತಿರ ಹೋಗಿ ಅಂತೆಯೇ ತೋಟಕ್ಕೆ ಹೋಗಲು ಹೇಳಿದ. ಅವನು, 'ಇಗೋ, ಹೋಗುತ್ತೇನಪ್ಪಾ' ಎಂದು ಹೇಳಿದ, ಆದರೆ ಹೋಗಲೇ ಇಲ್ಲ. ಇವರಿಬ್ಬರಲ್ಲಿ ತಂದೆಯ ಇಷ್ಟದಂತೆ ನಡೆದವನು ಯಾರು? "ಎಂದು ಯೇಸು ಕೇಳಿದರು. "ಮೊದಲನೆಯ ಮಗನೇ," ಎಂದು ಉತ್ತರಿಸಿದರು ಅವರು. ಆಗ ಯೇಸು, "ಸುಂಕದವರೂ ವೇಶ್ಯೆಯರೂ ನಿಮಗಿಂತ ಮೊದಲೇ ದೇವರ ಸಾಮ್ರಾಜ್ಯವನ್ನು ಪ್ರವೇಶಿಸುವರು ಎಂದು ನಿಮಗೆ ಸ್ಪಷ್ಟವಾಗಿ ಹೇಳುತ್ತೇನೆ. ಸ್ನಾನಿಕ ಯೊವಾನ್ನನು ಧರ್ಮಮಾರ್ಗವನ್ನು ತೋರಿಸಲು ಬಂದನು. ನೀವು ಆತನನ್ನು ನಂಬಲಿಲ್ಲ. ಆದರೆ ಸುಂಕದವರೂ ವೇಶ್ಯೆಯರೂ ಆತನನ್ನು ನಂಬಿದರು. ಇದನ್ನು ಕಂಡ ಮೇಲೂ ನೀವು ಪಶ್ಚಾತ್ತಾಪ ಪಡಲಿಲ್ಲ, ಯೊವಾನ್ನನನ್ನು ನಂಬಲೂ ಇಲ್ಲ."
ಪ್ರಭುವಿನ ಶುಭಸಂದೇಶ
ಕ್ರಿಸ್ತರೇ ನಿಮಗೆ ಸ್ತುತಿ ಸಲ್ಲಲಿ
14.12.25 - "ದೇವರೇ, ನೀವೇ ಬಂದು ನಮ್ಮನ್ನು ಕಾಪಾಡಿ!"
ಶ್ಲೋಕ: ದೇವರೇ, ನೀವೇ ಬಂದು ನಮ್ಮನ್ನು ಕಾಪಾಡಿ!
1. ಕೊಟ್ಟ ವಾಗ್ದಾನಗಳನು ತಪ್ಪದೆ ನೆರವೇರಿಸುವವ ಆತನೇ |
ದೊರಕಿಸುವನು ನ್ಯಾಯ ದಲಿತರಿಗೆ ||
ಒದಗಿಸುವನು ಆಹಾರ ಹಸಿದವರಿಗೆ |
ನೀಡುವನು ಬಿಡುಗಡೆ ಬಂಧಿತರಿಗೆ ||
2. ಕಣ್ಣನ್ನೀಯುವನು ಪ್ರಭು ಕುರುಡರಿಗೆ |
ಉದ್ದಾರಕನಾ ಪ್ರಭು ಕುಗ್ಗಿದವರಿಗೆ ||
ರಕ್ಷಿಸುವನು ಪ್ರಭು ಪರದೇಶಿಗಳನು |
ಆದರಿಸುವನು ಅನಾಥರನು, ವಿಧವೆಯರನು ||
3. ಆತನ ಬಲವಿರುವುದು ಸಾಧು ಸಜ್ಜನರಿಗೆ |
ನಿರ್ಮೂಲ ಮಾಡುವನು ದುರ್ಜನರ ಮಾರ್ಗವನು ||
ಪ್ರಭುವೇ ಅರಸನು ಸದಾ ಕಾಲಕು |
ಸಿಯೋನ್, ನಿನ್ನ ದೇವನಾಳ್ವನು ತಲತಲಾಂತರಕು ||
ಸಹೋದರರೇ, ಪ್ರಭು ಪುನರಾಗಮಿಸುವವರೆಗೆ ತಾಳ್ಮೆಯಿಂದ ಇರಿ. ರೈತನನ್ನು ಗಮನಿಸಿರಿ ತನ್ನ ಹೊಲದಲ್ಲಿ ಉತ್ತಮ ಬೆಳೆಯನ್ನು ನಿರೀಕ್ಷಿಸುವ ಅವನು ಮುಂಗಾರು ಹಿಂಗಾರು ಮಳೆಗಾಗಿ ತಾಳ್ಮೆಯಿಂದ ಕಾದಿರುತ್ತಾನೆ. ಹಾಗೆಯೇ, ನೀವೂ ಸಹ ತಾಳ್ಮೆಯಿಂದಿರಿ, ದೃಢಚಿತ್ತರಾಗಿರಿ. ಪ್ರಭುವಿನ ಪುನರಾಗಮನ ಸನ್ನಿಹಿತವಾಗಿದೆ. ಸಹೋದರರೇ, ದಂಡನಾತೀರ್ಪಿಗೆ ಗುರಿಯಾಗದಂತೆ ಒಬ್ಬರ ಮೇಲೊಬ್ಬರು ಗೊಣಗುಟ್ಟಬೇಡಿ. ಇಗೋ, ನ್ಯಾಯಾಧೀಶನು ಬಾಗಿಲ ಬಳಿಯಲ್ಲೇ ನಿಂತಿದ್ದಾನೆ. ಸಹೋದರರೇ, ಸಂಕಷ್ಟಗಳನ್ನು ತಾಳ್ಮೆಯಿಂದ ಸಹಿಸಿದ್ದಕ್ಕೆ ನಿದರ್ಶನ ಬೇಕೇ? ಪ್ರಭುವಿನ ಹೆಸರಿನಲ್ಲಿ ಬೋಧಿಸಿದ ಪ್ರವಾದಿಗಳನ್ನು ಸ್ಮರಿಸಿಕೊಳ್ಳಿ.
13.12.25
03.12.2025 - ನೀವು ವಿಶ್ವದ ಎಲ್ಲೆಡೆಗಳಿಗೂ ಹೋಗಿ, ಜಗತ್ತಿಗೆಲ್ಲಾ ಶುಭಸಂದೇಶವನ್ನು ಪ್ರಬೋಧಿಸಿರಿ
ಮೊದಲನೆಯ ವಾಚನ : ಪ್ರವಾದಿ ಯೆರೆಮೀಯನ ಗ್ರಂಥದಿಂದ ಇಂದಿನ ಮೊದಲನೆಯ ವಾಚನ: 1:4-8
- ಪ್ರಭುವಿನ ವಾಕ್ಯ
ಕೀರ್ತನೆ 117:1-2 v. ಮಾರ್ಕ 16:15.
ಶ್ಲೋಕ: ನೀವು ವಿಶ್ವದ ಎಲ್ಲೆಡೆಗಳಿಗೂ ಹೋಗಿ, ಜಗತ್ತಿಗೆಲ್ಲಾ ಶುಭಸಂದೇಶವನ್ನು ಪ್ರಬೋಧಿಸಿರಿ.
1. ಸ್ತುತಿಮಾಡಿ ಪ್ರಭುವನು ಸಮಸ್ತ ರಾಷ್ಟ್ರಗಳೇ|
ಆತನನ್ನು
ಹೊಗಳಿ ಹಾಡಿ ಸರ್ವ ಜನಾಂಗಗಳೇ||
ಶ್ಲೋಕ
2. ನಮ್ಮ
ಮೇಲೆ ಆತನಿಗಿರುವ ಪ್ರೀತಿ ಅಚಲ|
ಆತನ
ಸತ್ಯಪರತೆ ಇರುವುದು ಅನಂತ ಕಾಲ||
ಶ್ಲೋಕ
ಎರಡನೆಯ ವಾಚನ :ಪೌಲನು ಕೊರಿಂಥಿಯರಿಗೆ ಬರೆದ ಮೊದಲನೆಯ ಪತ್ರದಿಂದ ಇಂದಿನ ಎರಡನೆಯ ವಾಚನ 9:16-19,22-23
ಸಹೋದರರೇ, ಶುಭಸಂದೇಶವನ್ನು ನಾನು ಸಾರುತ್ತಿದ್ದೇನೆಂದು ಕೊಚ್ಚಿಕೊಳ್ಳುವುದಕ್ಕೂ ನನಗೆ ಆಸ್ಪದವಿಲ್ಲ. ಏಕೆಂದರೆ, ಸಾರಲೇಬೇಕೆಂಬ ಕರ್ತವ್ಯಕ್ಕೆ ನಾನು ಬದ್ಧನಾಗಿದ್ದೇನೆ. ಸಾರದಿದ್ದರೆ ನನಗೆ ಧಿಕ್ಕಾರವಿರಲಿ! ನಾನು ಸ್ವಂತ ಇಷ್ಟದಿಂದ ಈ ಕಾರ್ಯವನ್ನು ಕೈಗೊಂಡಿದ್ದರೆ ತಕ್ಕ ಸಂಭಾವನೆ ಇರುತ್ತಿತ್ತು. ಆದರೆ ಈ ಕರ್ತವ್ಯವನ್ನು ನನಗೆ ವಹಿಸಲಾಗಿದೆ. ಆದುದರಿಂದ ಕರ್ತವ್ಯಬದ್ದನಾಗಿ ಮಾಡುತ್ತಿದ್ದೇನೆ. ಹಾಗಾದರೆ ನನಗೆ ಸಿಗುವ ಸಂಭಾವನೆಯಾದರೂ ಏನು? ಶುಭಸಂದೇಶವನ್ನು ಸಾರುವಾಗ ಜೀವನೋಪಾಯಕ್ಕಾಗಿ ನನಗಿರುವ ಹಕ್ಕನ್ನು ಬಲಸಿಕೊಳ್ಳದೆ ಉಚಿತವಾಗಿ ಸಾರುವ ಸೌಭಾಗ್ಯವೇ ನನ್ನ ಸಂಭಾವನೆ. ನಾನು ಸ್ವತಂತ್ರನು, ಯಾರಿಗೂ ದಾಸನಲ್ಲ. ಆದರೂ ಆದಷ್ಟು ಜನರನ್ನು ಗಳಿಸಿಕೊಳ್ಳಲೆಂದು ಎಲ್ಲರಿಗೂ ದಾಸನಾದೆ. ವಿಶ್ವಾಸದಲ್ಲಿ ದುರ್ಬಲರನ್ನು ಗಳಿಸಿಕೊಳ್ಳಲು ನಾನೂ ದುರ್ಬಲನಂತಾದೆ. ಹೇಗಾದರೂ ಸರಿ, ಕೆಲವರನ್ನಾದರೂ ಉದ್ಧರಿಸಲು ಎಲ್ಲರಿಗೂ ಎಲ್ಲವೂ ಆದೆ. ಶುಭಸಂದೇಶದ ಸೌಭಾಗ್ಯದಲ್ಲಿ ಪಾಲುಗೊಳ್ಳಲೆಂದು ಇದೆಲ್ಲವನ್ನು ಇದೆಲ್ಲವನ್ನು ಶುಭಸಂದೇಶಕ್ಕಾಗಿಯೇ ಮಾಡುತ್ತೇನೆ.
ಪ್ರಭುವಿನ ವಾಕ್ಯ
ದೇವರಿಗೆ ಕೃತಜ್ಞತೆ ಸಲ್ಲಲಿ
ಘೋಷಣೆ :ಮತ್ತಾಯ 28:19,20
ಅಲ್ಲೆಲೂಯ, ಅಲ್ಲೆಲೂಯ!
ಹೋಗಿ, ಸಕಲ ದೇಶಗಳ ಜನರನ್ನು ನನ್ನ ಶಿಷ್ಯರನ್ನಾಗಿ ಮಾಡಿರಿ | ಲೋಕಾಂತ್ಯದವರೆಗೂ ಸದಾ ನಾನು ನಿಮ್ಮೊಡನೆ ಇರುತ್ತೇನೆ ||
ಅಲ್ಲೆಲೂಯ!
ಶುಭಸಂದೇಶ : ಮಾರ್ಕನು ಬರೆದ ಪವಿತ್ರ ಶುಭಸಂದೇಶದಿಂದ ವಾಚನ 16:15-20
-ಪ್ರಭುವಿನ ಶುಭಸಂದೇಶ
30.10.25 - 'ಸರ್ವೇಶ್ವರನ ನಾಮದಲ್ಲಿ ಬರುವವರು ಧನ್ಯರು, ' ಎಂದು ನೀವಾಗಿ ಹೇಳುವ ದಿನದವರೆಗೂ ನೀವು ನನ್ನನ್ನು ಕಾಣಲಾರಿರಿ, ಎಂಬುದು ನಿಶ್ಚಯ,"
ಮೊದಲನೆಯ ವಾಚನ : ಪೌಲನು ರೋಮನರಿಗೆ ಬರೆದ ಪತ್ರದಿಂದ ಇಂದಿನ ವಾಚನ 8:31-39
ಪ್ರಭುವಿನ ವಾಕ್ಯ
ದೇವರಿಗೆ ಕೃತಜ್ಞತೆ ಸಲ್ಲಲಿ
🌹✝️🌹
ಕೀರ್ತನೆ
109:21-22,26-27,30-31, v. 26
ಶ್ಲೋಕ: ಹೇ ಪ್ರಭೂ, ಅಚಲ ಪ್ರೀತಿಯಿಂದ ನನ್ನ ರಕ್ಷಿಸಯ್ಯಾ.
1. ಹೇ ಪ್ರಭು ದೇವಾ, ನನ್ನನ್ನಾದರಿಸು ಅಕ್ಕರೆಯಿಂದ|
ನನ್ನ ಪಕ್ಷವಹಿಸಿ ರಕ್ಷಿಸು ನಿನ್ನ ನಾಮದ ಪ್ರಯುಕ್ತ||
ಬಡವ ನಾನು, ನನಗಿದೆ ಕುಂದುಕೊರತೆ|
ನನ್ನ ಎದೆಗೆ ಅಲಗೇ ನಾಟಿದಂತಿದೆ||
ಶ್ಲೋಕ
2. ಹೇ ಪ್ರಭೂ, ಹೇ ದೇವಾ, ನೆರವಾಗಯ್ಯಾ|
ಅಚಲ ಪ್ರೀತಿಯಿಂದ ನನ್ನ ರಕ್ಷಿಸಯ್ಯಾ||
ನನ್ನ ರಕ್ಷಣೆ ನಿನ್ನ ಕೈಯಿಂದಾದುದೆಂದು ಅವರು ಅರಿಯಲಿ|
ಅದು ನಿನ್ನಿಂದಲೇ ಹೇ ಪ್ರಭೂ, ಆದುದೆಂದು ಖಚಿತವಾಗಲಿ||
ಶ್ಲೋಕ
3. ಕೊಂಡಾಡುವೆನು ಪ್ರಭುವನು ಬಹಳವಾಗಿ|
ಕೀರ್ತಿಸುವೆನು ಆತನನು ಸಾಮೂಹಿಕವಾಗಿ||
ನಿಂತಿರುವನು ಪ್ರಭು ಬಡವನ ಬಲಗಡೆ|
ವಿಧಿಸುವವರಿಂದ ತಪ್ಪಿಸುವನು ಮರಣ ದಂಡನೆ||
ಶ್ಲೋಕ
🌹✝️🌹
ಘೋಷಣೆ
2 ಕೊರಿಂಥಿ. 5:19
ಅಲ್ಲೆಲೂಯ, ಅಲ್ಲೆಲೂಯ!
ದೇವರು ಕ್ರಿಸ್ತ ಯೇಸುವಿನಲ್ಲಿ ಇಡೀ ಜಗತ್ತನ್ನೇ ತಮ್ಮೊಡನೆ ಸಂಧಾನಗೊಳಿಸುತ್ತಿದ್ದಾರೆ; | ಇದನ್ನು ಸಾರುವ ಸೌಭಾಗ್ಯವನ್ನು ಅವರೇ ನಮಗೆ ಕೊಟ್ಟಿದ್ದಾರೆ ||
ಅಲ್ಲೆಲೂಯ!
ಶುಭಸಂದೇಶ : ಲೂಕನು ಬರೆದ ಪವಿತ್ರ ಶುಭಸಂದೇಶದಿಂದ ವಾಚನ 13:31-35
ಪ್ರಭುವಿನ ಶುಭಸಂದೇಶ
ಕ್ರಿಸ್ತರೇ ನಿಮಗೆ ಸ್ತುತಿ ಸಲ್ಲಲಿ
28.08.2026 - ಜಾಗೃತರಾಗಿರಿ! ಏಕೆಂದರೆ ಆ ದಿನವಾಗಲಿ, ಆ ಗಳಿಗೆ ಆಗಲಿ ಯಾವಾಗ ಬರುತ್ತದೆಂದು ನಿಮಗೆ ತಿಳಿಯದು
ಮೊದಲನೇ ವಾಚನ: 1 ಕೊರಿಂಥಿಯರಿಗೆ 1:17-25 ಯೇಸುಕ್ರಿಸ್ತರು ನನ್ನನ್ನು ಕಳುಹಿಸಿರುವುದು ದೀಕ್ಷಾಸ್ನಾನವನ್ನು ಕೊಡುವುದಕ್ಕಲ್ಲ. ಶುಭಸಂದೇಶವನ್ನು ಸಾರುವುದಕ್ಕೆ ಅದೂ ವಾಕ...
-
ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 15:22-31 ಅನಂತರ ಪ್ರೇಷಿತರೂ ಸಭಾಪ್ರಮುಖರೂ ಇಡೀ ಧರ್ಮಸಭೆಯ ಸಮ್ಮತಿಪಡೆದು, ತಮ್ಮಲ್ಲಿ ಕೆಲವರನ್ನು ಆರಿಸಿ, ಪೌಲ ಮತ್ತು ಬಾರ್ಸಬ...
-
ಮೊದಲನೇ ವಾಚನ: 2 ತಿಮೊಥೇಯನಿಗೆ 4:1-8 ದೇವರ ಸಮಕ್ಷಮದಲ್ಲಿ, ಮತ್ತು ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರ್ಪನ್ನು ಕೊಡಲು ಬರುವ ಕ್ರಿಸ್ತಯೇಸುವಿನ ಸಮಕ್ಷಮದಲ್ಲಿ, ನಾನ...
-
ಮೊದಲನೇ ವಾಚನ: ಯೆಶಾಯ 52:13-53:12 ನನ್ನ ದಾಸನಿದೋ, ಕೃತಾರ್ಥ ಆಗುವವನಾತ ಮಹಿಮಾನ್ವಿತ ಏರುವನು ಉನ್ನತ ಪದವಿಗಾತ. ಆತನ ಮುಖ ನರಮಾನವರ ಮುಖಕ್ಕಿಂತ ಆತನ ರೂಪ ನರಪುತ್ರರ ...


