ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

19.03.2019 - ಆಕೆಯ ಪತಿ ಜೋಸೆಫನು ನೀತಿವಂತನು



ಮೊದಲನೇ ವಾಚನ: 2 ಸಮುವೇಲ  7:4-5, 12-14, 16

ಸರ್ವೇಶರ ನಾತಾನನಿಗೆ ಹೀಗೆಂದು ಆಜ್ಞಾಪಿಸಿದರು: "ನೀನು ಹೋಗಿ ನನ್ನ ದಾಸ ದಾವೀದನಿಗೆ ತಿಳಿಸಬೇಕಾದುದು ಇದು: "ನೀನು ನನಗೊಂದು ದೇವಾಲಯವನ್ನು ಕಟ್ಟಬೇಕೆಂದಿರುವೆಯೋ? ನಿನ್ನ ಆಯುಷ್ಕಾಲ ಮುಗಿದು ನೀನು ನಿನ್ನ ಪೂರ್ವಜರನ್ನು ಸೇರಿ ವಿಶ್ರಮಿಸುವಾಗ ನಿನ್ನ ಮಕ್ಕಳಲ್ಲಿ ಒಬ್ಬನನ್ನು ನಿನಗೆ ಉತ್ತರಾಧಿಕಾರಿಯನ್ನಾಗಿ ನೇಮಿಸಿ ಅವನ ರಾಜ್ಯವನ್ನು ಸ್ಥಿರಪಡಿಸುವೆನು. ಅವನು ನನ್ನ ಹೆಸರಿನಲ್ಲಿ ಒಂದು ದೇವಾಲಯವನ್ನು ಕಟ್ಟುವನು. ನಾನು ಅವನ ಸಿಂಹಾಸನವನ್ನು ಸ್ಥಿರಪಡಿಸುವೆನು. ನಾನು ಅವನಿಗೆ ತಂದೆಯಾಗಿರುವೆನು, ಅವನು ನನಗೆ ಮಗನಾಗಿರುವನು. ಅವನು ತಪ್ಪುಮಾಡಿದಾಗ, ಮಗನಿಗೆ ತಂದೆ ಬೆತ್ತದ ರುಚಿತೋರಿಸುವಂತೆ ನಾನು ಅವನನ್ನು ಶಿಕ್ಷಿಸುವೆನು. ನಿನ್ನ ಮನೆತನವೂ ಸದಾಕಾಲ ಸ್ಥಿರವಾಗಿರುವುವು; ನಿನ್ನ ಸಂಹಾಸನ ಶಾಶ್ವತವಾಗಿರುವುದು.

ಕೀರ್ತನೆ: 89:2-3, 4-5, 27, 29

ಶ್ಲೋಕ: ಸ್ಥಾಪಿಸುವೆ ಶಾಶ್ವತವಾಗಿನ ನಿನ್ನ ಸಂತತಿಯನ್ನು ಯುಗಯುಗಕ್ಕೂ

ಎರಡನೇ ವಾಚನ: ರೋಮನರಿಗೆ  4:13, 16-18, 22

ಅಬ್ರಹಾಮನಿಗೂ ಆತನ ಸಂತತಿಗೂ ಜಗತ್ತನ್ನೇ ಕೊಡುವುದಾಗಿ ದೇವರು ವಾಗ್ದಾನ ಮಾಡಿದರು. ಈ ವಾಗ್ದಾನವನ್ನು ಅಬ್ರಹಾಮನು ಪಡೆದದ್ದು ಧರ್ಮಶಾಸ್ತ್ರದ ಪಾಲನೆಯಿಂದ ಅಲ್ಲ. ಆದರೆ ವಿಶ್ವಾಸದ ಮೂಲಕ ದೇವರೊಡನೆ ಸತ್ಸಂಬಂಧವನ್ನು ಹೊಂದಿದ್ದರಿಂದ ದೈವವಾಗ್ದಾನಕ್ಕೆ ವಿಶ್ವಾಸವೇ ಆಧಾರ. ಇವೆಲ್ಲಕ್ಕೂ ದೈವಾನುಗ್ರಹವೇ ಮೂಲ. ಇವು ಅಬ್ರಹಾಮನ ಸಂತತಿಯವರಿಗೆ, ಅಂದರೆ ಧರ್ಮಶಾಸ್ತ್ರವನ್ನು ಅನುಸರಿಸಿ ನಡೆಯುವವರಿಗೆ ಮಾತ್ರವಲ್ಲ, ಅಬ್ರಹಾಮನಂತೆ ದೇವರಲ್ಲಿ ವಿಶ್ವಾಸವಿಟ್ಟವರೆಲ್ಲರಿಗೂ ಖಚಿತವಾಗಿ ದೊರೆಯುತ್ತದೆ. ಏಕೆಂದರೆ, ಅಬ್ರಹಾಮನೇ ನಮ್ಮೆಲ್ಲರಿಗೂ ಮೂಲಪಿತ. "ನಾನುನಿನ್ನನ್ನು ಅನೇಕ ಜನಾಂಗಗಳಿಗೆ ಮೂಲಪಿತನನ್ನಾಗಿ ನೇಮಿಸಿದ್ದೇನೆ." ಎಂದು ಪವಿತ್ರಗ್ರಂಥದಲ್ಲೆ ಬರೆದಿದೆ. ಹೌದು ಮೃತರನ್ನು ಜೆವಂತಗೊಳಿಸುವವರೂ ಅಸ್ತಿತ್ವದಲ್ಲಿ ಇಲ್ಲದ್ದನ್ನು ಅಸ್ಥಿತ್ವಕ್ಕೆ ತರುವಂಥವರೂ ಆದ ದೇವರಲ್ಲಿ ಅತನು ವಿಶ್ವಾಸವಿಟ್ಟನು. ಆದ್ದರಿಂದ ಈ ವಾಗ್ದಾನವನ್ನು ಸಾಕ್ಷಾತ್ ದೇವರಿಂದಲೇ ಪಡೆದನು. ಆತನ ವಿಶ್ವಾಸ ಮತ್ತು ಭರವಸೆ ಎಷ್ಟರಮಟ್ಟಿಗೆ ಇತ್ತೆಂದರೆ, ಈ ದೈವವಾಗ್ದಾನವು ನೆರವೇರುವ ನಿರೀಕ್ಷೆಯಿಲ್ಲದಿದ್ದರೂ ಆತನು ದೇವರನ್ನು ನಂಬಿದನು. ಆದುದರಿಂದಲೇ "ನಿನ್ನ ಸಂತಾನವು ನಕ್ಷತ್ರಗಳಷ್ಟು ಅಸಂಖ್ಯಾತವಾಗುವುದು," ಎಂಬ ಹೇಳಿಕೆಯಂತೆ ಆತನು ಅನೇಕ ಜನಾಂಗಗಳಿಗೆ ಮೂಲಪಿತನಾದನು. ಆದ್ದರಿಃದಲೇ, "ದೇವರು ಆತನನ್ನು ತನ್ನೊಂದಿಗೆ ಸತ್ಸಂಬಂಧದಲ್ಲಿ ಇರುವುದಾಗಿ ಪರಿಗಣಿಸಿದರು." ಎಂದು ಲಿಖಿತವಾಗಿದೆ.

ಶುಭಸಂದೇಶ: ಮತ್ತಾಯ 1:18-21, 24

ಕ್ರಿಸ್ತ ಯೇಸುವಿನ ಜನನದ ಪ್ರಕರಣ: ಯೇಸುವಿನ ತಾಯಿ ಮರಿಯಳಿಗೂ ಜೋಸೆಫನಿಗೂ ನಿಶ್ಚಿತಾರ್ಥವಾಗಿತ್ತು. ಅವರಿಬ್ಬರೂ ಕೂಡಿ ಬಾಳುವುದಕ್ಕೆ ಮುಂಚೆಯೇ ಮರಿಯಳು ಗರ್ಭವತಿಯಾಗಿರುವುದು ತಿಳಿದುಬಂತು. ಆಕೆ ಗರ್ಭ ಧರಿಸಿದ್ದು ಪವಿತ್ರಾತ್ಮ ಪ್ರಬಾವದಿಂದ. ಆಕೆಯ ಪತಿ ಜೋಸೆಫನು ನೀತಿವಂತನು. ಮರಿಯಳನ್ನು ಅವಮಾನಕ್ಕೆ ಗುರಿಮಾಡುವ ಉದ್ದೇಶ ಅವನದಲ್ಲವಾದ್ದರಿಂದ ಯಾರಿಗೂ ತಿಳಿಯದ ಹಾಗೆ ನಿಶ್ಚಿತಾರ್ಥವನ್ನು ಮುರಿದುಬಿಡಬೇಕೆಂದಿದ್ದನು. ಆತನು ಈ ಕುರಿತು ಆಲೋಚಿಸುತ್ತಿದ್ದಂತೆ, ದೇವದೂತನು ಕನಸಿನಲ್ಲಿ ಕಾಣಿಸಿಕೊಂಡು, "ದಾವೀದ ವಂಶದ ಜೋಸೆಫನೇ, ಮರಿಯಳನ್ನು ನಿನ್ನ ಪತ್ನಿಯನ್ನಾಗಿ ಸ್ವೀಕರಿಸಲು ಅಂಜಬೇಡ. ಆಕೆ ಗರ್ಭ ಧರಿಸಿರುವುದು ಪವಿತ್ರಾತ್ಮ ಪ್ರಭಾವದಿಂದಲೇ. ಆಕೆ ಒಬ್ಬ ಮಗನನ್ನು ಹೆರುವಳು. ಆತನಿಗೆ ನೀನು  "ಯೇಸು"  ಎಂಬ ಹೆಸರಿಡಬೇಕು. ಏಕೆಂದರೆ ತನ್ನ ಜನರನ್ನು ಅವರ ಪಾಪಗಳಿಂದ ರಕ್ಷಿಸಿ ಉದ್ಧರಮಾಡುವವನು ಆತನೇ," ಎಂದನು. ಆಗ ಜೋಸೆಫನು ಎಚ್ಚೆತ್ತು ದೇವದೂತನ ಆಜ್ಞೆಯ ಪ್ರಕಾರ ಮರಿಯಳನ್ನು ವಿವಾಹ ಮಾಡಿಕೊಂಡನು.

18.03.2019 - "ಕೊಟ್ಟ ಅಳತೆಯಲ್ಲೇ ದೇವರು ನಿಮಗೂ ಅಳೆದು ಕೊಡುವರು"

ಮೊದಲನೇ ವಾಚನ: ದಾನಿಯೇಲ 9:4-10 

ಪಾಪವನ್ನು ಅರಿಕೆಮಾಡಿ ನನ್ನ ದೇವರಾದ ಸರ್ವೇಶ್ವರನಿಗೆ ಹೀಗೆಂದು ಬಿನ್ನವಿಸಿದೆ:  "ಹೇ ಸರ್ವೇಶ್ವರಾ, ಮಹೋನ್ನತರೂ ಭಯಭಕ್ತಿಗೆ ಪಾತ್ರರೂ ಆದ ದೇವರೇ, ನಿಮ್ಮನ್ನು ಪ್ರೀತಿಸಿ, ನಿಮ್ಮ ಆಜ್ಞೆಗಳನ್ನು ಅನುಸರಿಸುವವರಿಗೆ ನೀವು ಮಾಡಿದ ವಾಗ್ದಾನಗಳನ್ನು ಪ್ರೀತಿಯಿಂದ ನೆರವೇರಿಸುತ್ತೀರಿ. "ನಾವು ಪಾಪಾಪರಾಧಗಳನ್ನು ಮಾಡಿ, ಕೆಟ್ಟವರಾಗಿ ನಡೆದಿದ್ದೇವೆ; ನಿಮಗೆ ವಿರುದ್ಧ ತಿರುಗಿಬಿದ್ದು, ನಿಮ್ಮ ಆಜ್ಞೆಗಳನ್ನು ತೊರೆದು ಬಿಟ್ಟಿದ್ದೇವೆ. ಅರಸರಿಗೆ, ಒಡೆಯರಿಗೆ, ಹಿರಿಯರಿಗೆ ಹಾಗು ಜನಸಾಮಾನ್ಯರಿಗೆ ನಿಮ್ಮ ದಾಸರಾದ ಪ್ರವಾದಿಗಳು ನಿಮ್ಮ ಹೆಸರಿನಲ್ಲಿ ನುಡಿದ ಮಾತುಗಳಿಗೆ ನಾವು ಕಿವಿಗೊಡಲೇ ಇಲ್ಲ. ಸರ್ವೇಶ್ವರಾ, ನೀವು ಸತ್ಯಸ್ವರೂಪಿ. ನಾವೋ ಲಜ್ಜೆಗೆಟ್ಟವರು. ಹೌದು, ಯೆಹೂದ್ಯರು ಹಾಗು ಜೆರುಸಲೇಮಿನ ನಿವಾಸಿಗಳು ಈಗಾಗಲೆ ನಿಮಗೆ ವಿರುದ್ಧ ಮಾಡಿದ ದ್ರೋಹದ ನಮಿತ್ತ ನಿಮ್ಮಿಂದ ದೇಶವಿದೇಶಗಳಿಗೆ ತಳ್ಳಲ್ಪಟ್ಟಿದ್ದಾರೆ. ದೂರದ ದೇಶಗಳಿಗೂ ಹತ್ತಿರದ ನಾಡುಗಳಿಗೂ ಚದುರಿಹೋಗಿರುವ ಎಲ್ಲ ಇಸ್ರಯೇಲರು ನಿಚಿಕೆಗೆ ಈಡಾಗಿದ್ದಾರೆ. ಸ್ವಾಮೀ, ನಿಮಗೆ ವಿರುದ್ಧ ಪಾಪಮಾಡಿದ್ದರಿಂದ ನಾವೂ ನಮ್ಮ ಅರಸರೂ ಓಡೆಯರೂ ಹಿರಿಯರೂ ನಾಚಿಕೆಗೆ ಗುರಿಯಾಗಿದ್ದೇವೆ. ನಮ್ಮ ದೇವರಾದ ಸರ್ವೇಶ್ವರ, ನಮ್ಮನ್ನು ಕರುಣಿಸುವವರೂ ಕ್ಷಮಿಸುವವರೂ ಆಗಿದ್ದಾರೆ. ಆದರೆ ನಾವು ಅವರಿಗೆ ವಿರುದ್ಧ ತಿರುಗಿಬಿದ್ದೆವು. ನಮ್ಮ ದೇವರಾದ ಸರ್ವೇಶ್ವರನ ಮಾತನ್ನು ಕೇಳಲಿಲ್ಲ. ಅವರ ದಾಸರಾದ ಪ್ರವಾದಿಗಳ ಮುಖಾಂತರ ನಮಗೆ ಗೊತ್ತುಮಾಡಿದ ಸನ್ಮಾರ್ಗದಲ್ಲಿ ನಾವು ನಡೆಯಲಿಲ್ಲ.

ಕೀರ್ತನೆ: 79:8, 9, 11, 13

ಶ್ಲೋಕ: ಪ್ರಭೂ, ನಮ್ಮ ಪಾಪಗಳಿಗೆ ತಕ್ಕಂತೆ ನಮ್ಮನ್ನು ದಂಡಿಸದಿರಿ

ಶುಭಸಂದೇಶ: ಲೂಕ 6:36-38


ನಿಮ್ಮ ತಂದೆಯಾದ ದೇವರಂತೆ ನೀವೂ ದಯಾವಂತರಾಗಿರಿ. "ನೀವು ಇತರರ ಬಗ್ಗೆ ತೀರ್ಪು ಕೊಡಬೇಡಿ, ಆಗ ದೇವರು ನಿಮ್ಮ ಬಗ್ಗೆ ತೀರ್ಪು ಕೊಡುವುದಿಲ್ಲ; ಪರರನ್ನು ದಂಡನೆಗೆ ಗುರಿ ಮಾಡಬೇಡಿ, ದೇವರು ನಿಮ್ಮನ್ನೂ ದಂಡನೆಗೆ ಗುರಿ ಮಾಡುವುದಿಲ್ಲ. ಪರರನ್ನು ಕ್ಷಮಿಸಿರಿ, ದೇವರು ನಿಮ್ಮನ್ನೂ ಕ್ಷಮಿಸುವರು: ಪರರಿಗೆ ಕೊಡಿ, ದೇವರು ನಿಮಗೂ ಕೊಡುವರು; ಅಳತೆಯಲ್ಲಿ ತುಂಬಿ, ಕುಲುಕಿ, ಅದುಮಿ ತುಳುಕುವಂತೆ ಅಳೆದು ನಿಮ್ಮ ಮಡಿಲಿಗೆ ಹಾಕುವರು. ನೀವು ಕೊಟ್ಟ ಅಳತೆಯಲ್ಲೇ ದೇವರು ನಿಮಗೂ ಅಳೆದು ಕೊಡುವರು," ಎಂದರು.

ಮನಸಿಗೊಂದಿಷ್ಟು : ವೈದ್ಯರು ರೋಗಿಗಳಿಗೆ ನೀಡುವ ಔಷದಿಯ ಚೀಟಿಯಂತೆ ಮನಸ್ಸಿನ ನಿರಾಳತೆ ಹಾಗೂ  ದೇವರ ಕೃಪೆಗೆ ಯೇಸು ಒಂದಷ್ಟು ಸಿದ್ಧ ಔಷದಿಗಳ ಪಟ್ಟಿ ನೀಡುತ್ತಾರೆ. ಔಷದಿಯಂತೆ ಇವು ನುಂಗುವಾಗ ಕಹಿ,  ಅದರೆ ಅದು ಮನಸಿಗೆ ನೀಡುವ ಆನಂದ ಅವರ್ಣನೀಯ. ನಾವು-ಪರರು-ದೇವರು ಎಂಬ ತ್ರಿಕೋನವು ಒಂದಕ್ಕೊಂದು ಬೆಸೆದುಕೊಂಡು ಈ ಜಗದಲ್ಲಿ ಮಾನವತೆಯಿಂದ ದೈವತ್ವದೆಡೆಗೆ ನಮ್ಮನ್ನು ಪ್ರೇರೇಪಿಸುತ್ತಿದೆ

ಪ್ರಶ್ನೆ : ದೇವರಿಂದ ಅಗಾಧವಾಗಿ ಪಡೆಯುತ್ತಿರುವ ನಾವು, ನೀಡುತ್ತಿರುವ ಅಳತೆ ಸರಿಯಾಗಿದೆಯೇ?


ಪಸ್ಸು ಕಾಲದಲ್ಲಿನ ಇಲ್ಲಿಯವರೆಗಿನ ಪ್ರಶ್ನೆಗಳು 


 -   ತಪಸ್ಸು ಕಾಲದಲ್ಲಿ ನಮ್ಮ ಅಧ್ಯಾತ್ಮಿಕ ಗುರಿಗಳೇನು?

 -  ಶಿಲುಬೆ ಹೊತ್ತು ಹಿಂಬಾಲಿಸಲು ಸಿದ್ಧವಿದ್ದೇವೆಯೇ

 -  ದೇವರ ಮುಂದೆ ನಾವು ತೋರಬಹುದಾದ ಆಸ್ತಿಗಳಾವುವು

 -  ನಮಗೆ  ದೈವೀಕ ವೈದ್ಯನ ಅವಶ್ಯಕತೆಯಿದೆ ಎಂಬ ಅರಿವು ನಮಗಿದೆಯೇ?

 -  ನಾವಿಂದು ಯಾವುದೆಲ್ಲವುಗಳಿಂದ ಜೀವಿಸುತ್ತಿದ್ದೇವೆ?

 -  ನಮ್ಮ ಜೀವನದಲ್ಲಿ ಹಸಿದವರಿಗೆ ನಾವಾಗೇ ಹೋಗಿ ಊಟವಿತ್ತ ಉದಾಹರಣೆಗಳೆಷ್ಟು

 -  ನಮ್ಮ ಪ್ರಾರ್ಥನೆಯಲ್ಲಿ ನಿರರ್ಥಕ ಪದಗಳೆಷ್ಟುಸ್ವಾರ್ಥ ಬೇಡಿಕೆಗಳೆಷ್ಟು?

 -  ನಮ್ಮ ಹೃದಯವೂ ನೆನೆವೆ ನಗರದಂತಾಗಲು ಸಾಧ್ಯವಿಲ್ಲವೇ?

 -  ನಮಗಾಗಿ ನಾವು ಏನು ಅಪೇಕ್ಷಿಸುತ್ತೇವೆಯೋ ಅದನ್ನು ಇತರರಿಗೂ ಬಯಸುತ್ತಿದ್ದೇವೆಯೇ?

 -  ನಾವು ಮತ್ತೊಬ್ಬರನ್ನು ತುಚ್ಛೀಕರಿಸಿದ ಸಂದರ್ಭಗಳ ಲೆಕ್ಕ ನಮ್ಮಲ್ಲಿದೆಯೇ?   

-ನಾವು ಯೇಸುವಿಗೆ ಸ್ವಂತ ಜನರಾಗಿದ್ದೇವೆಯೇ ಅಥವಾ ಇನ್ನೂ ಅನ್ಯರಾಗೇ ಉಳಿದಿದ್ದೇವೆಯೇ?


ಯೇಸುವಿನ ಈ ರೂಪಾಂತರದ ಘಟನೆ ನಮ್ಮೊಳಗಿನ ರೂಪಾಂತರಕ್ಕೆ ಸ್ಪೂರ್ತಿಯಾಗಬಲ್ಲದೇ?

17.03.2019 - "ಈತನು ನನ್ನ ಪುತ್ರನು; ನಾನು ಆರಿಸಿಕೊಂಡವನು, ಈತನ ಮಾತಿಗೆ ಕಿವಿಗೊಡಿರಿ,"

ಮೊದಲನೇ ವಾಚನ: ಆದಿಕಾಂಡ 15:5-12, 17-18


ಸರ್ವೇಶ್ವರ ಬಳಿಕ ಅಬ್ರಾಮನನ್ನು ಹೊರಗೆ ಕರೆತಂದು, " ಆಕಾಶದ ಕಡೆಗೆ ನೋಡು. ಆ ನಕ್ಷತ್ರಗಳನ್ನು ನಿನ್ನಿಂದಾದರೆ ಲೆಕ್ಕಿಸು. ನಿನ್ನ ಸಂತಾನವು ಅಷ್ಟು ಅಸಂಖ್ಯಾತವಾಗುವುದು!" ಎಂದರು. ಅಬ್ರಾಮನು ಸರ್ವೇಶ್ವರ ಸ್ವಾಮಿಯಲ್ಲಿ ವಿಶ್ವಾಸವಿಟ್ಟನು. ಅವರು ಅವನ ವಿಶ್ವಾಸವೇ ಸರಿಯಾದ ಸಂಬಂಧವೆಂದು ಪರಿಗಣಿಸಿದರು. ಸರ್ವೇಶ್ವರ ಬಳಿಕ ಅಬ್ರಾಮನಿಗೆ ಇಂತೆಂದರು: "ಈ ನಾಡನ್ನು ನಿನಗೆ ಸೊತ್ತಾಗಿ ಕೊಡಬೇಕೆಂದು ಬಾಬಿಲೋನಿನಲ್ಲಿರುವ ಊರ್ ಪಟ್ಟಣದಿಂದ ನಿನ್ನನ್ನು ಬರಮಾಡಿದ ಸರ್ವೇಶ್ವರ ನಾನೇ," ಎಂದರು. ಅದಕ್ಕೆ ಅಬ್ರಾಮನು, "ಸರ್ವೇಶ್ವರ, ಇದು ನನ್ನ ಸೊತ್ತು ಎಂದು ತಿಳಿದುಕೊಳ್ಳುವುದು ಹೇಗೆ?" ಎಂದನು. ಸರ್ವೇಶ್ವರ ಪ್ರತ್ಯುತ್ತರವಾಗಿ, "ನೀನು ಮೂರು ಮೂರು ವರ್ಷದ ಒಂದು ಕಡಸನ್ನು, ಒಂದು ಆಡನ್ನು, ಒಂದು ಟಗರನ್ನು, ಒಂದು ಬೆಳವಕ್ಕಿಯನ್ನು ಹಾಗು ಒಂದು ಮರಿ ಪಾರಿವಾಳವನ್ನು ತೆಗೆದುಕೊಂಡು ಬಾ," ಎಂದರು. ಅಬ್ರಾಮನು ಅವುಗಳನ್ನೆಲ್ಲಾ ತೆಗೆದುಕೊಂಡು ಬಂದು ಆ ಪ್ರಾಣಿಗಳನ್ನು ಕಡಿದು, ಎರಡೆರಡು ಹೋಳುಮಾಡಿ, ತುಂಡಿಗೆ ತುಂಡನ್ನು ಎದುರಾಗಿಟ್ಟನು. ಪಕ್ಷಿಗಳನ್ನು ಮಾತ್ರ ಕಡಿಯಲಿಲ್ಲ. ಆ ಪ್ರಾಣಿಗಳ ತುಂಡುಗಳ ಮೇಲೆ ರಣ ಹದ್ದುಗಳು ಎರಗಿದಾಗ - ಅಬ್ರಾಮನು ಅವುಗಳನ್ನು ಓಡಿಸಿಬಿಟ್ಟನು. ಹೊತ್ತು ಮುಳುಗುತ್ತಿದ್ದಾಗ ಅಬ್ರಾಮನಿಗೆ ಗಾಢನಿದ್ರೆ ಹತ್ತಿತು. ಭೀಕರವಾದ ಕಾರ್ಗತ್ತಲು ಅವನನ್ನು ಕವಿಯಿತು. ಹೊತ್ತು ಮುಳುಗಿ ಕಾರ್ಗತ್ತಲಾದಾಗ ಇಗೋ, ಹೊಗೆಯಾಡುವ ಒಲೆಯೊಂದು ಹಾಗು ಉರಿಯುವ ದೀವಟಿಗೆಯೊಂದು ಕಾಣಿಸಿಕೊಂಡು ಆ ತುಂಡುಗಳ ನಡುವೆ ಹಾದುಹೋದವು. ಸರ್ವೇಶ್ವರ ಅಂದೇ ಅಬ್ರಾಮನ ಸಂಗಡ ಒಂದು ಒಡಂಬಡಿಕೆಯನ್ನು ಮಾಡಿಕೊಂಡರು: "ಈಜಿಪ್ಟಿನ ನದಿಯಿಂದ ಯೂಫ್ರೆಟಿಸ್ ಮಹಾನದಿಯವರೆಗೆ, ಕೊಡುವೆನು ಈ ನಾಡೆಲ್ಲವನ್ನು ನಿನ್ನ ಸಂತತಿಯವರಿಗೆ,"

ಕೀರ್ತನೆ: 27:1, 7-8, 8-9, 13-14

ಶ್ಲೋಕ: ನನಗೆ ಬೆಳಕು ರಕ್ಷೆ ಪ್ರಭುವೇ

 ಎರಡನೇ ವಾಚನ; ಫಿಲಿಪ್ಪಿಯರಿಗೆ 3:17-4:1

 ಸಹೋದರರೇ, ನೀವು ನನ್ನನ್ನು ಅನುಸರಿಸಿ. ನಮ್ಮಂತೆ ಆದರ್ಶಜೀವನ ನಡೆಸುವವರನ್ನು ಅನುಸರಿಸಿ ಬಾಳಿರಿ. ಕ್ರಿಸ್ತಯೇಸುವಿನ ಶಿಲುಬೆಗೆ ವಿರೋಧವಾಗಿ ನಡೆಯುವವರು ಅನೇಕರಿದ್ದಾರೆ. ಇದನ್ನು ನಾನು ಹಲವಾರು ಸಾರಿ ತಿಳಿಸಿರುವಂತೆ ಈಗಲೂ ಅತೀವ ದುಃಖದಿಂದ ಹೇಳುತ್ತಿದ್ದೇನೆ. ಹೊಟ್ಟೆಯೇ ಅವರ ದೇವರು, ನಾಚಿಕೆಪಡಿಸುವ ಕಾರ್ಯಗಳಲ್ಲಿಯೇ ಅವರಿಗೆ ಹೆಮ್ಮೆ, ನಶ್ವರವಾದ ವಿಷಯಗಳಲ್ಲಿಯೇ ಅವರಿಗೆ ವ್ಯಾಮೋಹ. ಹೀಗಾಗಿ, ವಿನಾಶವೇ ಅವರ ಅಂತ್ಯ. ನಾವಾದರೋ ಸ್ವರ್ಗಸಾಮ್ರಾಜ್ಯದ ಪ್ರಜೆಗಳು, ಉದ್ಧರಕರಾದ ಪ್ರಭು ಯೇಸುಕ್ರಿಸ್ತರು ಪನರಾಗಮಿಸುವುದು ಅಲ್ಲಿಂದಲೇ ಎಂದು ಎದುರುನೋಡುತ್ತಿದ್ದೇವೆ. ಅವರು ಸಮಸ್ತವನ್ನು ಸ್ವಾಧೀನಪಡಿಸಿಕೊಳ್ಳುವರು; ಸಶ್ವರವಾದ ನಮ್ಮ ದೀನ ದೇಹಗಳನ್ನು ತಮ್ಮ ಶಕ್ತಿಯಿಂದ ರೂಪಾಂತರಗೊಳಿಸಿ ತಮ್ಮ ತೇಜೋಮಯ ಶರೀರದಂತೆ ಮಾಡುವರು. ಹೀಗಿರಲಾಗಿ ಒಲವಿನ ಸಹೋದರರೇ, ನನ್ನ ಅತಿ ಪ್ರಿಯರೇ, ಆಪ್ತರೇ, ನನ್ನ ಮುದವೂ ಮುಕುಟವೂ ಆದವರೇ, ಪ್ರಭುವಿನಲ್ಲಿ ದೃಢ ವಿಶ್ವಾಸಿಗಳಾಗಿ ಬಾಳಿರಿ.

ಶುಭಸಂದೇಶ: ಲೂಕ 9:28-36

ಪೇತ್ರ, ಯೊವಾನ್ನ ಮತ್ತು ಯಕೋಬ ಇವರನ್ನು ತನ್ನೊಡನೆ ಕರೆದುಕೊಂಡು ಯೇಸುಸ್ವಾಮಿ ಪ್ರಾರ್ಥನೆ ಮಾಡಲು ಬೆಟ್ಟವನ್ನು ಹತ್ತಿದರು. ಪ್ರಾರ್ಥನೆ ಮಾಡುವ ಸಮಯದಲ್ಲಿ ಯೇಸುವಿನ ಮುಖಚರ್ಯೆಯು ಮಾರ್ಪಟ್ಟಿತು. ಅವರ ಉಡುಪು ಬೆಳ್ಳಗೆ ಪ್ರಜ್ವಲಿಸಿತು. ಇದ್ದಕಿದ್ದ ಹಾಗೆ ಮೋಶೆ ಮತ್ತು ಎಲೀಯ ಎಂಬ ಇಬ್ಬರು ಪ್ರವಾದಿಗಳು ಅವರೊಡನೆ ಮಾತನಾಡುತ್ತಿದ್ದರು. ದಿವ್ಯ ವೈಭವದಿಂದ ಕಂಗೊಳಿಸುತ್ತಿದ್ದ ಇವರಿಬ್ಬರು ಯೇಸು ಜೆರುಸಲೇಮಿನಲ್ಲಿ ಪ್ರಾಣ ತ್ಯಾಗಮಾಡಿ ದೈವೇಚ್ಛೆಯನ್ನು ನೆರವೇರಿಸಲಿದ್ದ ವಿಷಯವಾಗಿ  ಸಂಭಾಷಿಸುತ್ತಿದ್ದರು. ಗಾಢ ನಿದ್ರೆಯಲ್ಲಿದ್ದ ಪೇತ್ರ ಮತ್ತು ಸಂಗಡಿಗರು ಎಚ್ಚೆತ್ತಾಗ ಯೇಸುವಿನ ಮಹಿಮೆಯನ್ನೂ ಅವರೊಡನೆ ನಿಂತಿದ್ದ ಆ ಇಬ್ಬರನ್ನೂ ಕಂಡರು. ಅವರಿಬ್ಬರು ಯೇಸುವನ್ನು ಬಿಟ್ಟುಹೋಗುತ್ತಿರುವಾಗ, ಪೇತ್ರನು ಯೇಸುವಿಗೆ, "ಗುರುದೇವಾ, ನಾವು ಇಲ್ಲೇ ಇರುವುದು ಒಳ್ಳೆಯದು; ಅಪ್ಪಣಿಯಾಗಲಿ, ಮೂರು ಗುಡಾರಗಳನ್ನು ಕಟ್ಟುವೆವು - ತಮಗೊಂದು, ಮೋಶೆಗೊಂದು ಮತ್ತು ಎಲೀಯನಿಗೊಂದು," ಎಂದನು. ತಾನು ಏನು ಹೇಳುತ್ತಿರುವೆನೆಂದೇ ಪೇತ್ರನು ಗ್ರಹಿಸಲಿಲ್ಲ. ಆತನು ಇದನ್ನು ಹೇಳುತ್ತಿದ್ದ ಹಾಗೆ ಮೇಘವೊಂದು ಬಂದು ಅವರನ್ನಾವರಿಸಿತು. ಆ ಮೇಘದಲ್ಲಿ ಅವರು ಅದೃಶ್ಯರಾದಾಗ ಶಿಷ್ಯರು ದಿಗಿಲುಗೊಂಡರು. ಅದರೊಳಗಿಂದ, "ಈತನು ನನ್ನ ಪುತ್ರನು; ನಾನು ಆರಿಸಿಕೊಂಡವನು ಈತನ ಮಾತಿಗೆ ಕಿವಿಗೊಡಿರಿ," ಎಂಬ ವಾಣಿ ಕೇಳಿಸಿತು. ಆ ವಾಣಿ ಆದಮೇಲೆ ಕಾಣಿಸಿಕೊಂಡವರು ಯೇಸು ಮಾತ್ರ. ಶಿಷ್ಯರು ತಾವು ನೋಡಿದ್ದನ್ನು ಕುರಿತು ಆ ದಿನಗಳಲ್ಲಿ ಏನನ್ನೂ ಹೇಳದೆ, ಯಾರಿಗೂ ತಿಳಿಸದೆ ತತ್ಕಾಲ ಮೌನದಿಂದ ಇದ್ದರು.


ಮನಸಿಗೊಂದಿಷ್ಟು : ಗಾಢ ನಿದ್ರೆಯಲ್ಲಿದ್ದ ಶಿಷ್ಯರು ಎಚ್ಚೆತ್ತಾಗ ಕ್ರಿಸ್ತನ ಮಹಿಮೆಯನ್ನು ನೋಡಿದರು ಎನ್ನುತ್ತದೆ ಇಂದಿನ ಶುಭ ಸಂದೇಶ. ನಮ್ಮ ಜೀವನದಲ್ಲೂ ಅನೇಕ ಸಲ ನಾವು ಕ್ರಿಸ್ತನ ಮಹಿಮೆಯನ್ನು ಕಾಣಲು ನಮ್ಮ ಅಧ್ಯಾತ್ಮಿಕ ನಿದ್ದೆಯೇ ಅಡ್ಡಿಯಾಗುತ್ತದೆ. ಗೊಂದಲಗಳು ನಮ್ಮನ್ನು ಕಾಡಿದಾಗ ದೇವರ ಮಾತು ಕೇಳಲು ನಮ್ಮ ಮನಸು ಜಾಗೃತವಾಗಿರಬೇಕಾಗುತ್ತದೆ. ಶುಭ ಸಂದೇಶದಲ್ಲಿ ಶಿಷ್ಯರಿಗೆ ಕೇಳಿದ ವಾಣಿಯಂತೆ ದೈವ ವಾಕ್ಯಗಳು ನಮ್ಮನ್ನು ಮುನ್ನಡೆಸುತ್ತಿರಲಿ ಎಂಬುದು ನಮ್ಮ ಗುರಿಯಾಗಲಿ.

ಪ್ರಶ್ನೆ :ಯೇಸುವಿನ ಈ ರೂಪಾಂತರದ ಘಟನೆ ನಮ್ಮೊಳಗಿನ ರೂಪಾಂತರಕ್ಕೆ ಸ್ಪೂರ್ತಿಯಾಗಬಲ್ಲದೇ?


ತಪಸ್ಸು ಕಾಲದಲ್ಲಿನ ಇಲ್ಲಿಯವರೆಗಿನ ಪ್ರಶ್ನೆಗಳು 


Ø   ತಪಸ್ಸು ಕಾಲದಲ್ಲಿ ನಮ್ಮ ಅಧ್ಯಾತ್ಮಿಕ ಗುರಿಗಳೇನು?

Ø  ಶಿಲುಬೆ ಹೊತ್ತು ಹಿಂಬಾಲಿಸಲು ಸಿದ್ಧವಿದ್ದೇವೆಯೇ? 

Ø  ದೇವರ ಮುಂದೆ ನಾವು ತೋರಬಹುದಾದ ಆಸ್ತಿಗಳಾವುವು? 

Ø  ನಮಗೆ  ದೈವೀಕ ವೈದ್ಯನ ಅವಶ್ಯಕತೆಯಿದೆ ಎಂಬ ಅರಿವು ನಮಗಿದೆಯೇ?

Ø  ನಾವಿಂದು ಯಾವುದೆಲ್ಲವುಗಳಿಂದ ಜೀವಿಸುತ್ತಿದ್ದೇವೆ?

Ø  ನಮ್ಮ ಜೀವನದಲ್ಲಿ ಹಸಿದವರಿಗೆ ನಾವಾಗೇ ಹೋಗಿ ಊಟವಿತ್ತ ಉದಾಹರಣೆಗಳೆಷ್ಟು? 

Ø  ನಮ್ಮ ಪ್ರಾರ್ಥನೆಯಲ್ಲಿ ನಿರರ್ಥಕ ಪದಗಳೆಷ್ಟುಸ್ವಾರ್ಥ ಬೇಡಿಕೆಗಳೆಷ್ಟು?

Ø  ನಮ್ಮ ಹೃದಯವೂ ನೆನೆವೆ ನಗರದಂತಾಗಲು ಸಾಧ್ಯವಿಲ್ಲವೇ?

Ø  ನಮಗಾಗಿ ನಾವು ಏನು ಅಪೇಕ್ಷಿಸುತ್ತೇವೆಯೋ ಅದನ್ನು ಇತರರಿಗೂ ಬಯಸುತ್ತಿದ್ದೇವೆಯೇ?

Ø  ನಾವು ಮತ್ತೊಬ್ಬರನ್ನು ತುಚ್ಛೀಕರಿಸಿದ ಸಂದರ್ಭಗಳ ಲೆಕ್ಕ ನಮ್ಮಲ್ಲಿದೆಯೇ?   

Øನಾವು ಯೇಸುವಿಗೆ ಸ್ವಂತ ಜನರಾಗಿದ್ದೇವೆಯೇ ಅಥವಾ ಇನ್ನೂ ಅನ್ಯರಾಗೇ ಉಳಿದಿದ್ದೇವೆಯೇ? 


16.03.2019 - "ತಂದೆ ಪರಿಪೂರ್ಣರಾಗಿರುವಂತೆ ನೀವೂ ಪರಿಪೂರ್ಣರಾಗಿರಿ."

ಮೊದಲನೇ ವಾಚನ: ಧರ್ಮೋಪದೇಶಕಾಂಡ 26:16-19

ಮೋಶೆ ಜನರಿಗೆ ಹೀಗೆಂದನು: "ಈ ಆಜ್ಞಾವಿಧಿಗಳನ್ನು ನೀವು ಅನುಸರಿಸಬೇಕೆಂದು ನಮ್ಮ ದೇವರಾದ ಸರ್ವೇಶ್ವರ ನಿಮಗೆ ಇಂದು ಆಜ್ಞಾಪಿಸಿದ್ದಾರೆ. ಆದುದರಿಂದ ನೀವು ಪೂರ್ಣ ಹೃದಯದಿಂದಲೂ ಮನಸ್ಸಿನಿಂದಲೂ ಇವುಗಳನ್ನು ಕೈಗೊಂಡು ನಡೆಯಬೇಕು. ನಮಗೆ ಸರ್ವೇಶ್ವರನೇ ದೇವರಾಗಿರುವರೆಂದೂ ಹಾಗು ಅವರು ಹೇಳಿದ ಮಾರ್ಗದಲ್ಲೇ ನಡೆದು ಅವರ ಆಜ್ಞಾವಿಧಿ ನಿರ್ಣಯಗಳನ್ನು ಕೈಗೊಂಡು ಅವರ ಮಾತಿಗೆ ಲಕ್ಷ್ಯೆಕೊಡುವೆವೆಂದೂ ನೀವು ಈಗ ಒಡಂಬಟ್ಟಿದ್ದೀರಿ. ಸರ್ವೇಶ್ವರಸ್ವಾಮಿಯಾದರೋ ನಿಮ್ಮ ವಿಷಯದಲ್ಲಿ, 'ಇವರು ನನ್ನ ಆಜ್ಞೆಗಳನ್ನೆಲ್ಲ ಅನುಸರಿಸುವವರಾದರೆ ನನ್ನ ವಾಗ್ದಾನಾನುಸಾರ ನನಗೆ ಸ್ವಕೀಯ ಜನರಾಗಿರುವರು. ನಾನು ನಿರ್ಮಿಸಿದ ಬೇರೆ ಎಲ್ಲಾ ಜನಾಂಗಗಳಿಗಿಂತ ಇವರಿಗೆ ಹೆಚ್ಚಾದ ಕೀರ್ತಿ ಘನಮಾನಗಳನ್ನುಂಟು ಮಾಡುವೆನು ಹಾಗು ಇವರು ನನ್ನ ಮಾತಿನ ಮೇರೆಗೆ ತಮ್ಮ ದೇವರಾದ ಸರ್ವೇಶ್ವರನಿಗೆ ಮೀಸಲಾದ ಜನರಾಗಲು ಒಡಂಬಟ್ಟಿದ್ದಾರೆ,' ಎನ್ನುವರು."

ಕೀರ್ತನೆ: 119:1-2, 4-5, 7-8

ಶ್ಲೋಕ: ಪ್ರಭುವಿನ ಶಾಸ್ತ್ರಾನುಸಾರ ನಡೆವವರು ಧನ್ಯರು

ಶುಭಸಂದೇಶ: ಮತ್ತಾಯ 5:43-48

 ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಹೀಗೆಂದರು: "ಮಿತ್ರರನ್ನು ಪ್ರೀತಿಸು, ಶತ್ರುವನ್ನು ದ್ವೇಷಿಸು" ಎಂದು ಹೇಳಿರುವುದು ನಿಮಗೆ ತಿಳಿದೇ ಇದೆ. ನಾನು ಹೇಳುವುದನ್ನು ಗಮನಿಸಿರಿ: ನಿಮ್ಮ ಶತ್ರುಗಳನ್ನು ಪ್ರೀತಿಸಿರಿ; ನಿಮ್ಮನ್ನು ಪೀಡಿಸುವವರಿಗಾಗಿ ಪ್ರಾರ್ಥನೆ ಮಾಡಿರಿ. ಇದರಿಂದ ಸ್ವರ್ಗದಲ್ಲಿರುವ ನಿಮ್ಮ ತಂದೆಗೆ ನೀವು ಮಕ್ಕಳಾಗುವಿರಿ. ಅವರು ಸಜ್ಜನರ ಮೇಲೂ ದುರ್ಜನರ ಮೇಲೂ ಅನೀತಿವಂತರ ಮೇಲೂ ಮಳೆಗರೆಯುತ್ತಾರೆ. ನಿಮ್ಮನ್ನು ಪ್ರೀತಿಸುವವರನ್ನು ಮಾತ್ರ ನೀವು ಪ್ರೀತಿಸಿದರೆ ಅದರಿಂದೇನು ಫಲ? ಸುಂಕ ವಸೂಲಿ ಮಾಡುವವರೂ ಹಾಗೆ ಮಾಡುವುದಿಲ್ಲವೇ? ನಿಮ್ಮ ಮಿತ್ರರನ್ನು ಮಾತ್ರ ನೀವು ಗೌರವಿಸಿದರೆ ಅದರಲ್ಲೇನು ವಿಶೇಷ? ಅನ್ಯ ಜನರೂ ಹಾಗೆ  ಮಾಡುತ್ತಾರಲ್ಲವೇ? ಆದುದರಿಂದ ಸ್ವರ್ಗದಲ್ಲಿರುವ ನಮ್ಮ ತಂದೆ ಪರಿಪೂರ್ಣರಾಗಿರುವಂತೆ ನೀವೂ ಪರಿಪೂರ್ಣರಾಗಿರಿ."

ಮನಸಿಗೊಂದಿಷ್ಟು : ತಮ್ಮವರು ಹಾಗೂ ಅನ್ಯ ಜನರೂ ಎಂಬ ವಿಂಗಡಣೆಯನ್ನು ಯೇಸು ಮಾಡುತ್ತಾರೆ. ಈ ವಿಂಗಡನೆಗೆ ಬೇರೆ ಯಾವ ಮಾನದಂಡವು ಇಲ್ಲ. ಅದು ಕೇವಲ ತಮ್ಮ ವಾಕ್ಯಗಳಂತೆ ನಡೆಯುವವರು ಮತ್ತು ನಡೆಯದವರು ಎಂಬುದು ಮಾತ್ರ. ಯೇಸುವಿನ ಮಾತುಗಳಂತೆ ನಡೆಯುವವರು ಅನುಸರಿಸಬೇಕಾದ ಮಾರ್ಗ ಕಠಿಣ ಆದರೆ ಸುಂದರ. ಆದರೆ ಅದರಿಂದ ದೊರಕುವ ಬಹುಮಾನ ಸ್ವರ್ಗದ ತಂದೆಯ ಮಕ್ಕಳಾಗುವ ಸೌಭಾಗ್ಯ ಹಾಗೂ ತಂದೆಯಂತೆ ಪರಿಪೂರ್ಣವಾಗುವ ಪರಿಪೂರ್ಣತೆ

ಪ್ರಶ್ನೆ : ನಾವು ಯೇಸುವಿಗೆ ಸ್ವಂತ ಜನರಾಗಿದ್ದೇವೆಯೇ ಅಥವಾ ಇನ್ನೂ ಅನ್ಯರಾಗೇ ಉಳಿದಿದ್ದೇವೆಯೇ? 



ತಪಸ್ಸು ಕಾಲದಲ್ಲಿನ ಇಲ್ಲಿಯವರೆಗಿನ ಪ್ರಶ್ನೆಗಳು 


Ø  ತಪಸ್ಸು ಕಾಲದಲ್ಲಿ ನಮ್ಮ ಅಧ್ಯಾತ್ಮಿಕ ಗುರಿಗಳೇನು?

Ø  ಶಿಲುಬೆ ಹೊತ್ತು ಹಿಂಬಾಲಿಸಲು ಸಿದ್ಧವಿದ್ದೇವೆಯೇ? 

Ø  ದೇವರ ಮುಂದೆ ನಾವು ತೋರಬಹುದಾದ ಆಸ್ತಿಗಳಾವುವು? 

Ø  ನಮಗೆ ದೈವೀಕ ವೈದ್ಯನ ಅವಶ್ಯಕತೆಯಿದೆ ಎಂಬ ಅರಿವು ನಮಗಿದೆಯೇ?

Ø  ನಾವಿಂದು ಯಾವುದೆಲ್ಲವುಗಳಿಂದ ಜೀವಿಸುತ್ತಿದ್ದೇವೆ?

Ø  ನಮ್ಮ ಜೀವನದಲ್ಲಿ ಹಸಿದವರಿಗೆ ನಾವಾಗೇ ಹೋಗಿ ಊಟವಿತ್ತ ಉದಾಹರಣೆಗಳೆಷ್ಟು? 

Ø  ನಮ್ಮ ಪ್ರಾರ್ಥನೆಯಲ್ಲಿ ನಿರರ್ಥಕ ಪದಗಳೆಷ್ಟು, ಸ್ವಾರ್ಥ ಬೇಡಿಕೆಗಳೆಷ್ಟು?

Ø  ನಮ್ಮ ಹೃದಯವೂ ನೆನೆವೆ ನಗರದಂತಾಗಲು ಸಾಧ್ಯವಿಲ್ಲವೇ?

Ø  ನಮಗಾಗಿ ನಾವು ಏನು ಅಪೇಕ್ಷಿಸುತ್ತೇವೆಯೋ ಅದನ್ನು ಇತರರಿಗೂ ಬಯಸುತ್ತಿದ್ದೇವೆಯೇ?

Ø  ನಾವು ಮತ್ತೊಬ್ಬರನ್ನು ತುಚ್ಛೀಕರಿಸಿದ ಸಂದರ್ಭಗಳ ಲೆಕ್ಕ ನಮ್ಮಲ್ಲಿದೆಯೇ?   

15.03.2019 - ನನ್ನ ಸಕಲ ವಿಧಿಗಳನ್ನು ಕೈಗೊಂಡು, ನ್ಯಾಯ ನೀತಿಗಳನ್ನು ನಡೆಸಿದರೆ ಸಾಯನು

ಮೊದಲನೇಯ ವಾಚನ :  ಯೆಜೆಕಿಯೇಲ 18 : 21-28

"ಆದರೆ ದುಷ್ಟನು ತಾನು ಮಾಡುತ್ತಿದ್ದ  ಪಾಪಗಳನ್ನೆಲ್ಲಾ ಬಿಟ್ಟುಬಿಟ್ಟು, ನನ್ನ ಸಕಲ ವಿಧಿಗಳನ್ನು ಕೈಗೊಂಡು, ನ್ಯಾಯ ನೀತಿಗಳನ್ನು ನಡೆಸಿದರೆ ಸಾಯನು; ಖಂಡಿತ ಜೀವಿಸುವನು. ಅವನು ಮಾಡಿದ ಯಾವ ಅಪರಾಧವೂ ಆತನ ಲೆಕ್ಕಕ್ಕೆ ಸೇರದು. ಅವನು ಮಾಡುತ್ತಿರುವ ಸದ್ಧರ್ಮದಿಂದಲೇ ಅವನು ಜೀವಿಸುವನು. ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ. ದುಷ್ಟನ ಸಾವಿನಲ್ಲಿ ನನಗೆ ಲವಲೇಶವಾದರೂ ಸಂತೋಷವಿಲ್ಲ. ಅವನು ತನ್ನ ದುರ್ಮಾರ್ಗವನ್ನು ಬಿಟ್ಟು ಬಾಳುವುದೇ ನನಗೆ ಸಂತೋಷ. ಆದರೆ ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು, ಅಧರ್ಮಮಾಡಿ, ದುಷ್ಟನು ನಡೆಸುವ ದುರಾಚಾರಗಳನ್ನೆಲ್ಲಾ ನಡೆಸಿದರೆ, ಅವನು ಜೀವಿಸುವನೇ? ಅವನು ಮಾಡಿದ ಯಾವ ಸುಕೃತ್ಯವೂ ಅವನ ಲೆಕ್ಕಕ್ಕೆ ಸೇರಲ್ಪಡದು, ಅವನು ಮಾಡುತ್ತಿರುವ ಪಾಪಾಪರಾಧಗಳಿಂದಲೇ ಸಾಯುವನು. "ಆದರೆ ನೀವು, 'ಸರ್ವೇಶ್ವರನ ಕ್ರಮ ಸರಿಯಿಲ್ಲ' ಎಂದು ಹೇಳುತ್ತಿದ್ದೀರಿ; ಇಸ್ರಯೇಲ್ ವಂಶದವರೇ ನನ್ನ ಕ್ರಮವು ಸರಿಯಿಲ್ಲವೇ? ನಿಮ್ಮ ಕ್ರಮವೇ ಸರಿಯಿಲ್ಲವಷ್ಟೆ. ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು ಅಧರ್ಮದಿಂದಲೇ ಸಾಯಬೇಕಾಯಿತು. ದುಷ್ಟನು ತಾನು ಮಾಡುತ್ತಿದ್ದ ದುಷ್ಟತನವನ್ನು ಬಿಟ್ಟು, ನ್ಯಾಯನೀತಿಗಳನ್ನು ನಡೆಸಿದರೆ, ತನ್ನ ಪ್ರಾಣವನ್ನು ಉಳಿಸಿಕೊಳ್ಳುವನು. ಅವನು ಯೋಚಿಸಿ, ತಾನು ಮಾಡುತ್ತಿದ್ದ ಅಪರಾಧಗಳನ್ನೆಲ್ಲಾ ಬಿಟ್ಟದ್ಧರಿಂದ ಸಾಯನು, ಖಂಡಿತ ಜೀವಿಸುವನು.

ಕೀರ್ತನೆ: 130: 1-2, 3-4, 5-7, 7-8

ಶ್ಲೋಕ: ಪಾಪಗಳ ನೀ ಪಟ್ಟಿ ಮಾಡಿದೆಯಾದರೆ ಪ್ರಭೂ ನಿನ್ನ ಮುಂದೆ ಯಾರು ತಾನೆ ನಿಲ್ಲಬಲ್ಲರು ವಿಭೂ?

ಶುಭಸಂದೇಶ: ಮತ್ತಾಯ 5:20-26

"ಧರ್ಮಶಾಸ್ತ್ರಿಗಳ ಹಾಗೂ ಫರಿಸಾಯರ ಧರ್ಮನಿಷ್ಠೆಗಿಂತ ನಿಮ್ಮ ಧರ್ಮನಿಷ್ಠೆ ಉತ್ತಮವಾಗದ ಹೊರತು ನೀವು ಸ್ವರ್ಗಸಾಮ್ರಾಜ್ಯವನ್ನು ಪ್ರವೇಶಿಸಲಾರಿರಿ ಎಂಬುದು ನಿಶ್ಚಯ."  "ನರಹತ್ಯೆ ಮಾಡಬೇಡ; ನರಹತ್ಯೆ ಮಾಡುವವನು ನ್ಯಾಯತೀರ್ಪಿಗೆ ಗುರಿಯಾಗುವನು' ಎಂದು ಪೂರ್ವಿಕರಿಗೆ ಹೇಳಿದ್ದನ್ನು ನೀವು ಕೇಳಿದ್ದೀರಿ. ಆದರೆ ನಾನೀಗ ನಿಮಗೆ ಹೇಳುತ್ತೇನೆ, ಕೇಳಿ: ತನ್ನ ಸೋದರನ ಮೇಲೆ (ನಿಷ್ಕಾರಣವಾಗೆ) ಕೋಪಗೊಳ್ಳುವ ಪ್ರತಿಯೊಬ್ಬನೂ ನ್ಯಾಯತೀರ್ಪಿಗೆ ಈಡಾಗುವನು; ತನ್ನ ಸೋದರನನ್ನು ತುಚ್ಛೀಕರಿಸುವವನು ನ್ಯಾಯಸಭೆಯ ವಿಚಾಣೆಗೆ ಒಳಗಾಗುವನು; 'ಮುರ್ಖ' ಎಂದು ಮೂದಲಿಸುವವನು ನರಕಾಗ್ನಿಗೆ ಗುರಿಯಾಗುವನು. ಆದಕಾರಣ, ಬಲಿಪೀಠದ ಮುಂದೆ ದೇವರಿಗೆ ಕಾಣಿಕೆಯನ್ನು  ಅರ್ಪಿಸಲಿರುವಾಗ, ನಿನ್ನ ಸೋದರನಿಗೆ ನಿನ್ನ ಮೇಲೆ ಏನೋ ಮನಃಸ್ತಾಪವಿದೆ ಎಂಬುದು ನಿನ್ನ ನೆನಪಿಗೆ ಬಂದರೆ, ನಿನ್ನ ಕಾಣಿಕೆಯನ್ನು ಆ ಬಲೀಪೀಠದ ಮುಂದೆಯೇ ಇಟ್ಟುಬಿಡು. ಮೊದಲು ಹೋಗಿ ನಿನ್ನ ಸೋದರನೊಡನೆ ಸಮಾಧಾನ ಮಾಡಿಕೊ, ಆನಂತರ ಬಂದು ನಿನ್ನ ಕಾಣಿಕೆಯನ್ನು ಒಪ್ಪಿಸು."  "ನಿನ್ನ ಎದುರಾಳಿ ನಿನ್ನನ್ನು ನ್ಯಾಯ ಸ್ಥಾನಕ್ಕೆ ಎಳೆಯುವಾಗ ಮಾರ್ಗ ಮಧ್ಯೆದಲ್ಲೇ ಅವನೊಡನೆ ಬೇಗ ಸಂಧಾನ ಮಾಡಿಕೊ. ಇಲ್ಲದಿದ್ದರೆ, ಅವನು ನಿನ್ನನ್ನು ನ್ಯಾಯಾಧಿಪತಿಗೆ ಒಪ್ಪಿಸಬಹುದು. ನ್ಯಾಯಾಧಿಪತಿ ನಿನ್ನನ್ನು ಪೋಲೀಸರ ವಶಕ್ಕೆ ಬಿಡಬಹುದು. ಆನಂತರ ನಿನಗೆ ಸೆರೆವಾಸ ಪ್ರಾಪ್ತವಾದೀತು! ಅಲ್ಲಿಂದ ನೀನು ಹೊರಗೆ ಬರಬೇಕಾದರೆ ಬಿಡಿ ಕಾಸನ್ನೂ ಬಿಡದೆ ಎಲ್ಲವನ್ನೂ ತೆರಬೇಕಾಗುವುದು. ಇದನ್ನು ನೆನಪಿನಲ್ಲಿಡು.

ಮನಸಿಗೊಂದಿಷ್ಟು : ಯೇಸು ಇಲ್ಲಿ ಅತ್ಯಂತ ಸರಳವೂ ಆದರೆ ಕಷ್ಟವೂ ಆದ ಪರಿಹಾರವನ್ನು ಕೊಡುತ್ತಾರೆ. ಅದೆಷ್ಟೋ ದ್ವೇಷ, ಮನಸ್ತಾಪಗಳು ಮೊಳಕೆಯಲ್ಲೇ ಪರಿಹರಿಸಬಹುದಾದರೂ ಅದು ಕುಟುಂಬಗಳಿಗೆ, ಮುಂದಿನ ತಲೆ ಮಾರುಗಳಿಗೂ ಸಾಗುವುದನ್ನು ನಾವು ಕಾಣುತ್ತೇವೆ. ಭಾರತದಂತ ದೇಶದಲ್ಲಿ ಅತ್ಯಂತ ಹೆಚ್ಚಿನ ಮೊಕದೊಮ್ಮೆಗಳು ಕೇಸುಗಳು ದಾಖಲಾಗುವುದು  ಹೊಲ ಗದ್ದೆಗಳ ನಡುವಿನ ದಾರಿಯ ಕಾರಣಕ್ಕೇ. ಇಲ್ಲಿ ಸೋತು ಗೆಲ್ಲುವ, ಗೆದ್ದು ಸೋಲುವ  ಮಾರ್ಗ ಯೇಸುವಿನದು.

ಪ್ರಶ್ನೆ : ನಾವು ಮತ್ತೊಬ್ಬರನ್ನು ತುಚ್ಛೀಕರಿಸಿದ ಸಂದರ್ಭಗಳ ಲೆಕ್ಕ ನಮ್ಮಲ್ಲಿದೆಯೇ?   

14.03.2019 - ಹುಡುಕಿದವನಿಗೆ ಸಿಗುವುದು

ಮೊದಲನೇ ವಾಚನ: ಎಸ್ತೇರಳು 14(3):12, 14-16, 23-25

ರಣ ಭಯದಿಂದ ಕಂಗೆಟ್ಟ ರಾಣಿ ಎಸ್ತೇರಳು ಸರ್ವೇಶ್ವರನ ಆಶ್ರಯವನ್ನು ಕೋರಿದಳು. ಇಸ್ರಯೇಲರ ದೇವರಾದ ಸರ್ವೇಶ್ವರನಿಗೆ ಪ್ರಾರ್ಥನೆಮಾಡುತ್ತಾ ಈ ಪರಿ ಮೊರೆಯಿಟ್ಟಳು: "ನನ್ನ ಸರ್ವೇಶ್ವರಾ, ಅರಸನೇ, ತಾವೊಬ್ಬರೇ ದೇವರು, ಒಬ್ಬಂಟಿಗಳು ನಾನು, ತಾವೇ ನನಗೆ ನೆರವು. ನನ್ನ ಪ್ರಾಣಕ್ಕ ಗಂಡಾಂತರ ಬಂದಿಹ ಈ ವೇಳೆಯಲಿ ತಮ್ಮನಲ್ಲದೆ ಯಾರನ್ನು ಆಶ್ರಯಿಸಲಿ? ತಾವಾರಿಸಿಕೊಂಡಿರಿ ಸಕಲ ರಾಷ್ಟ್ರಗಳಂದ ಇಸ್ರಯೇಲರನ್ನು ತಮ್ಮ ಪ್ರಜೆಯಾಗಲು ಪ್ರತ್ಯೇಕಿಸಿದಿರಿ, ನಮ್ಮ ಪೂರ್ವಜರನ್ನು. ತಪ್ಪದೆ ಈಡೇರಿಸಿದಿರಿ ತಮ್ಮ ವಾಗ್ದಾನಗಳನ್ನು ಕುಟುಂಬದವರಿಂದ ಬಾಲ್ಯದಿಂದಲೇ ನಾ ಕಲಿತ ಈ ಪಾಠವನ್ನು. ಸರ್ವೇಶ್ಯರಾ, ನಮ್ಮನ್ನು ತಂದುಕೊಳ್ಳಿ ನೆನಪಿಗೆ ಆಪತ್ತಿನಲ್ಲಿ ನೆರವಿತ್ತು ಧೈರ್ಯನೀಡಿ ನಮಗೆ ರಾಜಾಧಿರಾಜ, ಒಡೆಯ ತಾವು ಸಕಲ ದೇವರುಗಳಿಗೆ. ಕರುಣಿಸಿ, ಸಂಹರಾಜನ ಮುಂದೆ ನಿಂತು ನಾ ವಾದಿಸುವಂತೆ ಈ ರಾಜನು ಶತ್ರು ಹಾಮಾನನನ್ನು ದ್ವೇಷಿಸುವಂತೆ ಆ ಶತ್ರು  ಹಾಗು ಅವನ ಸಂಗಡಿಗರು ನಾಶವಾಗುವಂತೆ. ಸರ್ವೇಶ್ವರ, ರಕ್ಷಿಸಿ ನೆರವಿತ್ತು ಈ ಒಬ್ಬಂಟಿಗಳಿಗೆ, ಯಾರನ್ನು ಆಶ್ರಯಿಸಲಿ ನಾನು. ತಮ್ಮನ್ನಲ್ಲದೆ?

ಕೀರ್ತನೆ: 138: 1-2, 2-3, 7-8

ಶ್ಲೋಕ: ಸರ್ವೇಶ್ವರಾ, ಮೊರೆಯಿಟ್ಟಾಗ ದಯಪಾಲಿಸಿದೆ ಎನಗೆ ಸದುತ್ತರವನು

ಮತ್ತಾಯ : 7: 7-12

ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಹೀಗೆಂದರು: "ಕೇಳಿರಿ, ನಿಮಗೆ ಕೊಡಲಾಗುವುದು; ಹುಡುಕಿರಿ, ನಿಮಗೆ ಸಿಗುವುದು; ತಟ್ಟಿರಿ, ನಿಮಗೆ ಬಾಗಿಲು ತೆರೆಯಲಾಗುವುದು. ಏಕೆಂದರೆ ಕೇಳಿಕೊಳ್ಳುವ  ಪ್ರತಿಯೊಬ್ಬನಿಗೂ ಕೊಡಲಾಗುವುದು, ಹುಡುಕಿದವನಿಗೆ ಸಿಗುವುದು, ತಟ್ಟುವವನಿಗೆ ಬಾಗಿಲು ತೆರೆಯಲಾಗುವುದು. ನಿಮ್ಮಲ್ಲಿ ಯಾವನು ತಾನೇ ತನ್ನ ಮಗ ರೊಟ್ಟಿಯನ್ನು ಕೇಳಿದರೆ ಕಲ್ಲನ್ನು ಕೊಟ್ಟಾನು? ಮೀನನ್ನು ಕೇಳಿದರೆ ಹಾವನ್ನು ಕೊಟ್ಟಾನು? ಕೆಟ್ಟವರಾದ ನೀವೇ ನಿಮ್ಮ ಮಕ್ಕಳಿಗೆ ಒಳ್ಳೆಯ ಪದಾರ್ಥಗಳನ್ನು ಕೊಡಬಲ್ಲವರಾದರೆ, ಅದಕ್ಕಿಂತಲೂ ಎಷ್ಟೋ ಹೆಚ್ಚಾಗಿ ಸ್ವರ್ಗದಲ್ಲಿರುವ ನಿಮ್ಮ ತಂದೆ ತಮ್ಮನ್ನು ಕೇಳಿಕೊಳ್ಳುವವರಿಗೆ ಒಳ್ಳೆಯ ಕೊಡುಗೆಗಳನ್ನು ಕೊಡಬಲ್ಲರು! ಜನರು ನಿಮಗೆ ಏನೇನು ಮಾಡಬೇಕೆಂದು ನೀವು ಅಪೇಕ್ಷಿಸುತ್ತೀರೋ, ಅದನ್ನೇ ನೀವು ಅವರಿಗೆ ಮಾಡಿ. ಧರ್ಮಶಾಸ್ತ್ರದ ಹಾಗೂ ಪ್ರವಾದನೆಗಳ ಸಾರ ಇವೇ."

ಮನಸಿಗೊಂದಿಷ್ಟು : ದೇವರು ನಮ್ಮ ಎಲ್ಲ ಪ್ರಾರ್ಥನೆಗಳಿಗೆ ಉತ್ತರಿಸುತ್ತಾರೆ. ಆದರೆ ಅವರು ಉತ್ತರಿಸುವುದು ಅವರದೇ ಆದ ವಿಧ, ವಿವೇಕ, ಸಮಯ ಹಾಗೂ ಪ್ರೀತಿಯಲ್ಲಿ. ಅವರ ಚಿತ್ತ ಸಮಯದಲ್ಲಿ ವಿಶ್ವಾಸವಿಟ್ಟು ನಮ್ಮ ಪ್ರಾರ್ಥನೆಯ ಈಡೇರುವಿಕೆಗಾಗಿ ಕಾಯುವುದಷ್ಟೇ ನಮ್ಮ ಕೆಲಸ. ಅಂತಿಮವಾಗಿ  ನಾವು ಕೇಳಿದ್ದಕ್ಕಿಂತ ಉತ್ತಮವಾದುದ್ದನ್ನೇ ನೀಡುವ ದೇವರು ಎಂಬ ನಮ್ಮ ನಂಬಿಕೆ ನಮ್ಮನ್ನು ಕಾಯುತ್ತದೆ. 

ಪ್ರಶ್ನೆ: ನಮಗಾಗಿ ನಾವು ಏನು ಅಪೇಕ್ಷಿಸುತ್ತೇವೆಯೋ ಅದನ್ನು ಇತರರಿಗೂ ಬಯಸುತ್ತಿದ್ದೇವೆಯೇ?

13.03.2019 - ಪ್ರವಾದಿ ಯೋನನಗಿಂತಲೂ ಮೇಲಾದವನು ಇಗೋ, ಇಲ್ಲಿದ್ದಾನೆ

ಮೊದಲನೇ ವಾಚನ: ಯೋನ 3:1-10


ಯೋನನಿಗೆ ಸರ್ವೇಶ್ವರ ಸ್ವಾಮಿಯ ವಾಣಿ ಪುನಃ ಕೇಳಿಸಿತು: "ಎದ್ದು ಮಹಾನಗರವಾದ ನಿನೆವೆಗೆ ಹೋಗು. ನಾನು ನಿಮಗೆ ತಿಳಿಸಿದ ಸಂದೇಶವನ್ನು ಅಲ್ಲಿಯ ನಿವಾಸಿಗಳಿಗೆ ಸಾರು," ಎಂದಿತು. ಸ್ವಾಮಿಯ ಆಜ್ಞಾನುಸಾರ ಯೋನನು ನಿನೆವೆಗೆ ಹೋದನು. ಅದೊಂದು ವಿಸ್ತಾರವಾದ ನಗರ. ಅದನ್ನು ಹಾದು ಹೋಗಲು ಮೂರು ದಿನಗಳು ಹಿಡಿಯುತ್ತಿತ್ತು. ನಗರವನ್ನು ಪ್ರವೇಶಿಸಿ ಒಂದು ದಿನದ ಪ್ರಯಾಣ ಮಾಡಿದ ನಂತರ ಯೋನನು ಸ್ವಾಮಿಯ ಸಂದೇಶವನ್ನು ಸಾರುತ್ತಾ, "ಜನರೇ ಕೇಳಿ: ನಿಮ್ಮ ನಗರ ನಲವತ್ತು ದಿನಗಳಲ್ಲಿ ನಾಶವಾಗುವುದು," ಎಂದನು. ಆ ನಗರದ ನಿವಾಸಿಗಳು ದೇವರ ಸಂದೇಶವನ್ನು ನಂಬಿದರು. ಪ್ರತಿಯೊಬ್ಬನೂ ಉಪವಾಸ ಕೈಗೊಳ್ಳಬೇಕೆಂದು ನಿರ್ಧರಿಸಿದರು. ಹಿರಿಯರು ಮೊದಲುಗೊಂಡು ಕಿರಿಯರವರೆಗೆ ಎಲ್ಲರೂ ಮನಃಪರಿವರ್ತನೆಯ ಚಿಹ್ನೆಯಾಗಿ ಗೋಣಿತಟ್ಟನ್ನು ಹುಟ್ಟುಕೊಂಡರು. ಈ ಸಂಗತಿ ನಿನೆವೆಯ ಅರಸನ ಕಿವಿಗೆ ಬಿದ್ದಿತು. ಅವನು ಸಿಂಹಾಸನದಿಂದ ಇಳಿದು, ತನ್ನ ರಾಜವಸ್ತ್ರಗಳನ್ನು ತೆಗೆದುಬಿಟ್ಟು, ಗೋಣಿತಟ್ಟನ್ನು ಉಟ್ಟುಕೊಂಡು ಬೂದಿಯಲ್ಲಿ ಕುಳಿತುಕೊಂಡನು. ಕೂಡಲೇ ತನ್ನ ಪ್ರಜೆಗಳಿಗೆ ಈ ರಾಜಾಜ್ಞೆಯನ್ನು ನಿನೆವೆಯಲ್ಲಿ ಹೊರಡಿಸಿದನು; "ಅರಸನ ಹಾಗೂ ಆತನ ಆಪ್ತ ಪ್ರಮುಖರ ಆಜ್ಞೆಯಿದು: ಜನರಾಗಲೀ, ದನಕರುಗಳಾಗಲೀ, ಕುರಿಮೇಕೆಗಳಾಗಲೀ ಯಾರೂ ಏನನ್ನೂ ತಿನ್ನಬಾರದು, ಕುಡಿಯಲೂಬಾರದು. ಎಲ್ಲಾ ಜನರು ಗೋಣಿತಟ್ಟನ್ನು ಉಟ್ಟುಕೊಳ್ಳಬೇಕು, ಪ್ರಾಣಿಗಳಿಗೂ ಹೊದಿಸಬೇಕು. ದೇವರನ್ನು ಶ್ರದ್ಧೆಯಿಂದ ಪ್ರಾರ್ಥಿಸಬೇಕು. ಎಲ್ಲರೂ ದೌರ್ಜನ್ಯವನ್ನು ತ್ಯಜಿಸಿ ಹಿಂಸಾಚಾರವನ್ನು ಕೈ ಬಿಡಬೇಕು ಹೀಗೆ ಮಾಡಿದ್ದೇ ಆದರೆ, ದೇವರು ಒಂದು ವೇಳೆ ತಮ್ಮ ಮನಸ್ಸನ್ನು ಬದಲಾಯಿಸಿ ತಮ್ಮ ಉಗ್ರ ಕೋಪವನ್ನು ತಡೆದಾರು, ನಾವು ನಾಶವಾಗದೆ ಉಳಿದೆವು." ಆ ಜನರು ಮಾಡಿದುದೆಲ್ಲವನ್ನು ದೇವರು ಗಮನಿಸಿದರು.  ತಮ್ಮ ದುರ್ನಡತೆಯನ್ನು ಜನರು ಕೈಬಿಟ್ಟದ್ದನ್ನು ಕಂಡು ಮನಮರುಗಿ ಅವರಿಗೆ ವಿಧಿಸಬೇಕೆಂದಿದ್ದ ಶಿಕ್ಷೆಯನ್ನು ತಡೆಹಿಡಿದರು.

ಕೀರ್ತನೆ: 51:3-4, 12-13, 18-19

ಶ್ಲೋಕ: ನೊಂದ ಬೆಂದ ಮನವನಾತ ಒಲ್ಲೆಯೆನನು

ಶುಭಸಂದೇಶ: ಲೂಕ 11: 29-32

ನರ ಗುಂಪು ಹೆಚ್ಚುತ್ತಿದ್ದಾಗ, ಯೇಸುಸ್ವಾಮಿ ಹೀಗೆಂದು ಮುಂದುವರಿಸಿದರು. "ಈ ಪೀಳಿಗೆ ಕೆಟ್ಟ ಪೀಳಿಗೆ ಇದು ಅದ್ಭುತ ಕಾರ್ಯವನ್ನು ಸಂಕೇತವಾಗಿ ಕೋರುತ್ತದೆ. ಪ್ರವಾದಿ ಯೋನನ ಸಂಕೇತವೇ ಹೊರತು ಬೇರೆ ಯಾವ ಸಂಕೇತವೂ ಇದಕ್ಕೆ ದೊರಕದು. ಹೇಗೆಂದರೆ ನಿನೆವೆ ನಗರದ ಜನರಿಗೆ ಪ್ರವಾದಿ ಯೋನನು ಸಂಕೇತವಾದಂತೆ ನರಪುತ್ರನು ಈ ಸಂತತಿಗೆ ಸಂಕೇತವಾಗಿರುವನು. ದೈವ ತೀರ್ಪಿನ ದಿನ ದಕ್ಷಿಣ ದೇಶದ ರಾಣಿ ಈ ಪೀಳಿಗೆಗೆ ಎದುರಾಗಿ ನಿಂತುಕೊಂಡು, ಇವರನ್ನು ಅಪರಾಧಿಗಳೆಂದು ತೋರಿಸುವಳು. ಆಕೆ ಸೊಲೊಮೋನನ ಜ್ಞಾನೋಕ್ತಿಗಳನ್ನು ಕೇಳುವುದಕ್ಕಾಗಿ ದೇಶದ ಕಟ್ಟಕಡೆಯಿಂದ ಬಂದಳು. ಆದರೆ, ಸೊಲೊಮೋನನಗಿಂತಲೂ ಮೇಲಾದವನು ಇಗೋ, ಇಲ್ಲಿದ್ದಾನೆ. ತೀರ್ಪಿನ ದಿನ ನಿನೆವೆ ನಗರದವರು, ಈ ಪೀಳಿಗೆಗೆ ಎದುರಾಗಿ ನಿಂತು ಇದನ್ನು ಅಪರಾಧಿ ಎಂದು ತೋರಿಸುವರು. ಏಕೆಂದರೆ, ಪ್ರವಾದಿ ಯೋನನ ಬೋಧನೆಯನ್ನು ಕೇಳಿ ಪಶ್ಚಾತಾಪಪಟ್ಟು ಅವರು ದೇವರಿಗೆ ಅಭಿಮುಖರಾದರು. ಆದರೆ ಪ್ರವಾದಿ ಯೋನನಗಿಂತಲೂ ಮೇಲಾದವನು ಇಗೋ, ಇಲ್ಲಿದ್ದಾನೆ."

ಮನಸಿಗೊಂದಿಷ್ಟು : ಅದ್ಭುತ ಕಾರ್ಯವನ್ನು ಬಯಸಿದ ಪೀಳಿಗೆಯನ್ನು ಕೆಟ್ಟ ಪೀಳಿಗೆ ಎನ್ನುತ್ತಾರೆ ಯೇಸು. ಆ ಪೀಳಿಗೆ ಇಂದಿಗೂ ಮುಂದುವರಿದಿದೆ. ನಮ್ಮ ಜೀವನದಲ್ಲಿ ಯೇಸು ಕ್ರಿಸ್ತರು ತಮ್ಮ ಜೀವನ, ಬೋಧನೆ, ಮೌಲ್ಯಗಳಿಗಿಂತ ನಮಗೆ ಬೇಕಾಗಿರುವುದು ನಮ್ಮ ಕಷ್ಟಗಳ ಪರಿಹಾರಕ್ಕಾಗಿ.  ಕ್ರಿಸ್ತನ ಮುಂದೆ ಅಸಹಾಯಕರಾಗಿ ನಿಲ್ಲುವುದು ತಪ್ಪಲ್ಲ. ಆದರೆ ನಮ್ಮ ಅವರ ನಡುವಿನ ಸಂಬಂಧ ಅಷ್ಟಕ್ಕೇ ಸೀಮಿತವಾದರೆ ಅದಕ್ಕಿಂತ ದೌರ್ಭಾಗ್ಯ ಇನ್ನೊಂದಿಲ್ಲ.

ಪ್ರಶ್ನೆ: ನಮ್ಮ ಹೃದಯವೂ ನೆನೆವೆ ನಗರದಂತಾಗಲು ಸಾಧ್ಯವಿಲ್ಲವೇ?


ಐತಿಹಾಸಿಕ ನೆನೆವೆ ನಗರ ಹಾಗೂ ಅದರ ಜನರ ಮನವರ್ತನೆಯ ಬಗ್ಗೆ ಯೋನನ ಗ್ರಂಥ ವನ್ನು ಓದಿ