ಮೊದಲನೇ ವಾಚನ: ಗಲಾತ್ಯರಿಗೆ 3:7-14
ಕೀರ್ತನೆ: 111:1-2, 3-4, 5-6
ಶ್ಲೋಕ: ತನ್ನೊಡಂಬಡಿಕೆಯ ಚಿರ ನೆನಪಿರುವುದು ಪ್ರಭುವಿಗೆ
ಶುಭಸಂದೇಶ: ಲೂಕ 11:15-26
ಮೊದಲನೇ ವಾಚನ: ಗಲಾತ್ಯರಿಗೆ 3:7-14
ಕೀರ್ತನೆ: 111:1-2, 3-4, 5-6
ಶ್ಲೋಕ: ತನ್ನೊಡಂಬಡಿಕೆಯ ಚಿರ ನೆನಪಿರುವುದು ಪ್ರಭುವಿಗೆ
ಶುಭಸಂದೇಶ: ಲೂಕ 11:15-26
ಮೊದಲನೇ ವಾಚನ: ಗಲಾತ್ಯರಿಗೆ 3:1-5
ಲೂಕ: 1:69-70, 71-72, 73-75
ಶ್ಲೋಕ: ಸ್ತುತಿಸ್ತೋತ್ರ ಇಸ್ರಯೇಲಿನ ದೇವರಾದ ಸರ್ವೇಶ್ವರನಿಗೆ
ಶುಭಸಂದೇಶ: ಲೂಕ 11:5-13
ಮೊದಲನೇ ವಾಚನ: ಗಲಾತ್ಯರಿಗೆ 2:1-2, 7-14
ಕೀರ್ತನೆ: 117:1, 2
ಶ್ಲೋಕ: ವಿಶ್ವದ ಎಲ್ಲೆಡೆಗಳಿಗೂ ಹೋಗಿ ಜಗತ್ತಿಗೆಲ್ಲಾ ಶುಭಸಂದೇಶವನ್ನು ಪ್ರಬೋಧಿಸಿರಿ.
ಶುಭಸಂದೇಶ: ಲೂಕ11:1-4
ಮೊದಲನೇ ವಾಚನ: ಗಲಾತ್ಯರಿಗೆ1:13-24
ಕೀರ್ತನೆ: 139:1-3, 13-14, 14-15
ಶ್ಲೋಕ: ಪ್ರಭೂ, ನಡೆಸೆನ್ನನು ಆ ಸನಾತನ ಪಥದಲಿ
ಶುಭಸಂದೇಶ: ಲೂಕ 10:38-42
ಮೊದಲನೇ ವಾಚನ: ಗಲಾತ್ಯರಿಗೆ 1:6-12
ಕ್ರಿಸ್ತಯೇಸುವಿನ ಅನುಗ್ರಹದಿಂದ ನಿಮ್ಮನ್ನು ಕರೆದ ದೇವರನ್ನು ನೀವಿಷ್ಟು ಬೇಗನೆ ತ್ಯಜಿಸಿ, ಬೇರೊಂದು ‘ಶುಭಸಂದೇಶ’ವನ್ನು ಅಂಗೀಕರಿಸುತ್ತಿರುವಿರೆಂದು ಕೇಳಿ ನನಗೆ ಆಶ್ಚರ್ಯವಾಗುತ್ತಿದೆ. ವಾಸ್ತವವಾಗಿ, ಬೇರೆ ಯಾವ ಶುಭಸಂದೇಶವೂ ಇಲ್ಲ. ಆದರೆ ಕೆಲವರು ನಿಮ್ಮಲ್ಲಿ ಗೊಂದಲವೆಬ್ಬಿಸಿ, ಕ್ರಿಸ್ತಯೇಸುವಿನ ಶುಭಸಂದೇಶವನ್ನು ಮಾರ್ಪಡಿಸಲು ಯತ್ನಿಸುತ್ತಾ ಇದ್ದಾರೆ. ನಾವು ನಿಮಗೆ ಬೋಧಿಸಿದ ಶುಭಸಂದೇಶಕ್ಕೆ ವಿರುದ್ಧವಾದ ಸಂದೇಶವನ್ನು ನಾವೇ ಆಗಲಿ, ಸ್ವರ್ಗದಿಂದ ಇಳಿದ ದೇವದೂತನೇ ಆಗಲಿ, ಯಾರೇ ಆಗಲಿ ಬೋಧಿಸಿದರೆ ಅವನು ಶಾಪಗ್ರಸ್ತನಾಗಲಿ! ನೀವು ಅಂಗೀಕರಿಸಿದ ಶುಭಸಂದೇಶಕ್ಕೆ ವಿರುದ್ಧವಾದ ಸಂದೇಶವನ್ನು ಸಾರುವವನು ಶಾಪಗ್ರಸ್ತನಾಗಲಿ ಎಂದು ನಾನು ಮೊದಲೇ ಹೇಳಿದಂತೆ, ಮತ್ತೊಮ್ಮೆ ಒತ್ತಿ ಹೇಳುತ್ತೇನೆ. ಇದರಿಂದ ನಾನು ಯಾರನ್ನು ಒಲಿಸಿಕೊಳ್ಳಲು ಯತ್ನಿಸುತ್ತಿದ್ದೇನೆ? ಮಾನವರನ್ನೋ? ದೇವರನ್ನೋ? ನಾನು ಮಾನವರ ಮೆಚ್ಚುಗೆಯನ್ನು ಗಳಿಸಿಕೊಳ್ಳಲು ಯತ್ನಿಸುತ್ತಿಲ್ಲ; ನಾನಿನ್ನೂ ಜನರ ಮೆಚ್ಚುಗೆಯನ್ನು ಗಳಿಸುವವನೇ ಆಗಿದ್ದರೆ ಕ್ರಿಸ್ತಯೇಸುವಿನ ದಾಸನಾಗಿರಲು ಸಾಧ್ಯವೇ ಇಲ್ಲ. ಪ್ರಿಯ ಸಹೋದರರೇ, ನಾನು ಬೋಧಿಸಿದ ಶುಭಸಂದೇಶವು ಮಾನವ ಕಲ್ಪಿತ ಸಂದೇಶ ಅಲ್ಲವೆಂದು ನಿಮಗೆ ಮನದಟ್ಟು ಮಾಡಲು ಬಯಸುತ್ತೇನೆ. ಈ ಶುಭಸಂದೇಶವನ್ನು ನಾನು ಮನುಷ್ಯರಿಂದ ಪಡೆಯಲಿಲ್ಲ; ಅದನ್ನು ಯಾರಿಂದಲೂ ಕಲಿತುಕೊಳ್ಳಲಿಲ್ಲ. ಯೇಸುಕ್ರಿಸ್ತರೇ ನನಗದನ್ನು ಶ್ರುತಪಡಿಸಿದರು.
ಕೀರ್ತನೆ: 111:1-2, 7-8, 9, 10
ಶ್ಲೋಕ: ತನ್ನೊಡಂಬಡಿಕೆಯ ಚಿರ ನೆನಪಿರುವುದು ಪ್ರಭುವಿಗೆ
ಶುಭಸಂದೇಶ: ಲೂಕ 10:25-37
ಒಬ್ಬ ಶಾಸ್ತ್ರಜ್ಞನು ಎದ್ದು ಯೇಸುಸ್ವಾಮಿಯನ್ನು ಪರೀಕ್ಷಿಸುವ ಉದ್ದೇಶದಿಂದ “ಬೋಧಕರೇ, ಅಮರಜೀವ ನನಗೆ ಪ್ರಾಪ್ತಿ ಆಗಬೇಕಾದರೆ ನಾನು ಮಾಡಬೇಕಾದುದು ಏನು?” ಎಂದು ಕೇಳಿದನು. ಅದಕ್ಕೆ ಯೇಸು, “ಧರ್ಮಶಾಸ್ತ್ರದಲ್ಲಿ ಏನು ಬರೆದಿದೆ? ಹೇಗೆ ಪಠಿಸುತ್ತೀಯೆ?” ಎಂದು ಮರುಪ್ರಶ್ನೆ ಹಾಕಿದರು. ಅವನು, “ ‘ನಿನ್ನ ಸರ್ವೇಶ್ವರನಾದ ದೇವರನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಆತ್ಮದಿಂದಲೂ ನಿನ್ನ ಪೂರ್ಣಶಕ್ತಿಯಿಂದಲೂ ನಿನ್ನ ಪೂರ್ಣ ಮನಸ್ಸಿನಿಂದಲೂ ಪ್ರೀತಿಸು ಮತ್ತು ನಿನ್ನನ್ನು ನೀನೇ ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವನನ್ನೂ ಪ್ರೀತಿಸು’ ಎಂದಿದೆ,” ಎಂದು ಉತ್ತರಕೊಟ್ಟನು. ಯೇಸು, “ಸರಿಯಾಗಿ ಉತ್ತರಕೊಟ್ಟೆ, ಅದರಂತೆ ಮಾಡು. ನಿನಗೆ ಅಮರಜೀವ ಲಭಿಸುವುದು,” ಎಂದರು. ಆದರೆ ಆ ಶಾಸ್ತ್ರಜ್ಞನು ತನ್ನನ್ನು ತಾನೇ ಸಮರ್ಥಿಸಿಕೊಳ್ಳಲು, “ನನ್ನ ನೆರೆಯವನು ಯಾರು?” ಎಂದು ಯೇಸುವನ್ನು ಮತ್ತೆ ಪ್ರಶ್ನಿಸಿದನು. ಆಗ ಯೇಸು ಅವನಿಗೆ ಹೀಗೆಂದು ವಿವರಿಸಿದರು: “ಒಬ್ಬನು ಜೆರುಸಲೇಮಿನಿಂದ ಇಳಿದು ಜೆರಿಕೋವಿಗೆ ಪ್ರಯಾಣ ಮಾಡುತ್ತಿದ್ದಾಗ, ದರೋಡೆಗಾರರ ಕೈಗೆ ಸಿಕ್ಕಿಬಿದ್ದ. ದರೋಡೆಗಾರರು ಅವನನ್ನು ಸುಲಿಗೆಮಾಡಿ, ಹೊಡೆದು ಬಡಿದು, ಅರೆಜೀವ ಮಾಡಿ ಅಲ್ಲೇ ಬಿಟ್ಟುಹೋದರು. ಅದೇ ಮಾರ್ಗವಾಗಿ ಒಬ್ಬ ಯಾಜಕನು ಹಾದುಹೋಗಬೇಕಾಗಿ ಬಂದಿತು. ಈತನು, ಅವನನ್ನು ಕಂಡದ್ದೇ ಆಚೆ ಬಳಸಿಕೊಂಡು ಹೋದ. ಹಾಗೆಯೇ ಲೇವಿಯೊಬ್ಬನು ಆ ಸ್ಥಳಕ್ಕೆ ಬಂದು ಅವನನ್ನು ನೋಡಿ, ಹಾಗೆಯೇ ಬಳಸಿಕೊಂಡು ಹೋದ. ಆದರೆ ಆ ಮಾರ್ಗವಾಗಿ ಪ್ರಯಾಣ ಮಾಡುತ್ತಿದ್ದ ಒಬ್ಬ ಸಮಾರಿಯದವನು ಅಲ್ಲಿಗೆ ಬಂದಾಗ, ಅವನನ್ನು ಕಂಡು ಕನಿಕರಪಟ್ಟು, ಹತ್ತಿರಕ್ಕೆ ಹೋಗಿ ಅವನ ಗಾಯಗಳಿಗೆ ಎಣ್ಣೆಯನ್ನೂ ದ್ರಾಕ್ಷಾರಸವನ್ನೂ ಹಚ್ಚಿ ಅವುಗಳಿಗೆ ಬಟ್ಟೆ ಕಟ್ಟಿದ. ಬಳಿಕ ಅವನನ್ನು ತನ್ನ ಸ್ವಂತ ವಾಹಕಪಶುವಿನ ಮೇಲೆ ಹತ್ತಿಸಿಕೊಂಡು ಒಂದು ಛತ್ರಕ್ಕೆ ಕರೆದುಕೊಂಡು ಹೋಗಿ, ಆರೈಕೆ ಮಾಡಿದ. ಮಾರನೆಯ ದಿನ ಎರಡು ದಿನಾರಿ ನಾಣ್ಯಗಳನ್ನು ಛತ್ರದವನಿಗೆ ಕೊಟ್ಟು, ‘ಇವನನ್ನು ಚೆನ್ನಾಗಿ ನೋಡಿಕೊ, ಇದಕ್ಕಿಂತ ಹೆಚ್ಚು ವೆಚ್ಚ ಆದರೆ ನಾನು ಹಿಂದಿರುಗಿ ಬರುವಾಗ ಸಲ್ಲಿಸುತ್ತೇನೆ,’ ಎಂದ. “ದರೋಡೆಗಾರರ ಕೈಗೆ ಸಿಕ್ಕಿದವನಿಗೆ ಈ ಮೂವರಲ್ಲಿ ಯಾರು ನೆರೆಯವನೆಂದು ನಿನಗೆ ತೋರುತ್ತದೆ?” ಎಂದು ಯೇಸು ಆ ಶಾಸ್ತ್ರಜ್ಞನನ್ನು ಕೇಳಿದರು. ಅದಕ್ಕೆ ಅವನು, “ದಯೆತೋರಿದವನೇ ನೆರೆಯವನು,” ಎಂದನು. ಆಗ ಯೇಸು, “ಹೋಗು, ನೀನೂ ಹಾಗೆಯೇ ಮಾಡು,” ಎಂದು ಹೇಳಿದರು.
ಮೊದಲನೇ ವಾಚನ: ಪ್ರವಾದಿ ಯೆಶಾಯನ ಗ್ರಂಥ 5:1-7
ಹಾಡುವೆ ನಾನೆನ್ನ ಪ್ರಿಯನಿಗೆ ಗೀತೆಯೊಂದನು ಅವನ ದ್ರಾಕ್ಷಾವನದ ಕುರಿತು ಪ್ರೇಮಗೀತೆಯನು: ಪ್ರಿಯತಮನಿಗೆ ಇತ್ತೊಂದು ದ್ರಾಕ್ಷಿಯ ತೋಟ ಫಲವತ್ತಾಗಿಹ ಗುಡ್ಡದ ಮೇಲಿನ ತೋಟ. ಆರಿಸಿ ಎಸೆದನು ಕಲ್ಲುಮುಳ್ಳುಗಳನು ಅಗೆದು ಹದಮಾಡಿದನಾತ ಗುಡ್ಡವನು. ನೆಟ್ಟನು ಒಳ್ಳೊಳ್ಳೆ ದ್ರಾಕ್ಷಿಯ ಸಸಿಗಳನು ಕಟ್ಟಿದನು ಕಾವಲಿಗಾಗಿ ಅಟ್ಟಣೆಯೊಂದನು ಕಟ್ಟಿದನು ಅದರೊಳಗೆ ಆಲೆಯೊಂದನು. ನಿರೀಕ್ಷಿಸುತ್ತಿರೆ ಆತ ಸಿಹಿದ್ರಾಕ್ಷಿ ಹಣ್ಣನು, ಬಿಟ್ಟಿತದೋ ಅವನಿಗೆ ಹುಳಿ ಹಣ್ಣನು! ಆದುದರಿಂದ ನನ್ನ ಪ್ರಿಯನು ಹೀಗೆಂದು ಕೇಳುತ್ತಾನೆ: “ಜೆರುಸಲೇಮಿನ ನಿವಾಸಿಗಳೇ, ಜುದೇಯದ ಜನರೇ, ನನಗೂ ನನ್ನ ತೋಟಕ್ಕೂ ಮಧ್ಯೆ ಇರುವ ವ್ಯಾಜ್ಯವನ್ನು ತೀರಿಸಿರಿ. ನನ್ನ ತೋಟಕ್ಕಾಗಿ ನಾನು ಮಾಡಿದ್ದಕ್ಕಿಂತಲೂ ಇನ್ನೇನು ಮಾಡಬೇಕಾಗಿತ್ತು? ಅದು ಸಿಹಿದ್ರಾಕ್ಷಿಯನ್ನು ಕೊಡುವುದೆಂದು ನಾನು ನಿರೀಕ್ಷಿಸುತ್ತಿರಲು, ಅದು ಹುಳಿ ಹಣ್ಣನ್ನು ಕೊಟ್ಟಿತೇಕೆ? ನನ್ನ ಈ ತೋಟಕ್ಕೆ ಏನು ಮಾಡುವೆನೆಂದು ಹೇಳುತ್ತೇನೆ, ಕೇಳಿ: ಕಿತ್ತೆಸೆಯುವೆನು ಅದರ ಬೇಲಿಯನು; ತುತ್ತಾಗುವುದದು ದನಕರುಗಳಿಗೆ. ಕೆಡವಿಹಾಕುವೆನು ಅದರ ಗೋಡೆಯನು; ಈಡಾಗುವುದದು ಪರರ ತುಳಿದಾಟಕ್ಕೆ. ಬಂಜರು ಭೂಮಿಯಾಗಿಸುವೆನು ಅದನ್ನು; ಕುಡಿಕತ್ತರಿಸುವರಾರೂ ಇರರು ಅದಕ್ಕೆ. ಮುಳ್ಳುಕಳೆ ಬೆಳೆಯುವುದು ಅದರೊಳಗೆ. ನೀಡುವೆನು ಆಣತಿಯೊಂದನು ಮೋಡಗಳಿಗೆ; ಸುರಿಸವು ತುಂತುರು ಮಳೆಯನ್ನೂ ಅದಕ್ಕೆ. ಇಸ್ರಯೇಲ್ ಮನೆತನವೇ ಸೇನಾಧೀಶ್ವರ ಸರ್ವೇಶ್ವರ ನೆಟ್ಟ ಆ ದ್ರಾಕ್ಷಿಯ ತೋಟ. ಜುದೇಯದ ಜನರೇ ಆತ ನಾಟಿಮಾಡಿದಾ ಸುಂದರ ಸಸಿತೋಟ. ನ್ಯಾಯನೀತಿಯನು ನಿರೀಕ್ಷಿಸಿದನಾತ ಆದರೆ ಸಿಕ್ಕಿತವನಿಗೆ ರಕ್ತಪಾತ! ಸತ್ಸಂಬಂಧವನು ಎದುರುನೋಡಿದನಾತ ಇಗೋ, ದಕ್ಕಿತವನಿಗೆ ದುಃಖಿತರ ಆರ್ತನಾದ!ಕೀರ್ತನೆ: 80:9, 12, 13-14, 15-16, 19-20
ಶ್ಲೋಕ: ಅನುಗ್ರಹಿಸಿದನು ಪ್ರಭು ಸ್ವರ್ಗದ ದವಸಧಾನ್ಯವನು
ಎರಡನೇ ವಾಚನ: ಫಿಲಿಪ್ಪಿಯರಿಗೆ 4:6-9
ಶುಭಸಂದೇಶ: ಮತ್ತಾಯ 21:33-43
ಮೊದಲನೇ ವಾಚನ: ಯೋಬನ ಗ್ರಂಥ 42:1-3, 5-6, 12-16
ಯೋಬನು ಸರ್ವೇಶ್ವರಸ್ವಾಮಿಗೆ ಕೊಟ್ಟ ಉತ್ತರ ಇದು: “ತಾವು ಎಲ್ಲಾ ಕಾರ್ಯಗಳನು ನಡೆಸಲು ಶಕ್ತರೆಂದು ನಾನು ಬಲ್ಲೆ ಯಾವ ಯೋಜನೆಯು ನಿಮಗೆ ಅಸಾಧ್ಯವಿಲ್ಲವೆಂದು ನಾನು ಅರಿತಿರುವೆ. ‘ಅಜ್ಞಾನದ ಮಾತುಗಳನ್ನಾಡುವ ನೀನು ಯಾರು?’ ‘ಸತ್ಯಾಲೋಚನೆಗಳನು ಮಂಕುಮಾಡುವ ನೀನಾರು?’ ಈ ನಿಮ್ಮ ನುಡಿಯಂತೆ ಅರ್ಥಹೀನ ಮಾತುಗಳನು ನಾನಾಡಿದೆ ನನ್ನ ಬುದ್ಧಿಗೆಟುಕದ ಪವಾಡಗಳನ್ನು ಟೀಕಿಸಿದೆ. ಈವರೆಗೆ ನಿಮ್ಮನು ಕುರಿತು ನಾನು ಕೇಳಿದ್ದು ಬೇರೆಯವರಿಂದ ಈಗಲಾದರೊ ನಿಮ್ಮನು ಕಂಡಿದ್ದೇನೆ ನನ್ನ ಕಣ್ಣುಗಳಿಂದ. ಆದುದರಿಂದ ನಾನು ಹೇಳಿದ್ದೆಲ್ಲಕ್ಕಾಗಿ ವಿಷಾದಿಸುತ್ತೇನೆ ಬೂದಿಯಲು, ಧೂಳಿನಲು ಕುಳಿತು ಪಶ್ಚಾತ್ತಾಪಪಡುತ್ತೇನೆ.” ಸರ್ವೇಶ್ವರ ಯೋಬನ ಮೊದಲನೆಯ ಸ್ಥಿತಿಗಿಂತಲೂ ಅವನ ಕಡೆಯ ಸ್ಥಿತಿಯನ್ನು ಹೀಗೆ ಅಧಿಕಗೊಳಿಸಿ ಆಶೀರ್ವದಿಸಿದರು. ಅವನಿಗೆ ಹದಿನಾಲ್ಕು ಸಾವಿರ ಕುರಿಗಳು, ಆರು ಸಾವಿರ ಒಂಟೆಗಳು, ಒಂದು ಸಾವಿರ ಜೋಡಿ ಎತ್ತುಗಳು, ಒಂದು ಸಾವಿರ ಕತ್ತೆಗಳು ದೊರಕಿದವು. ಅಲ್ಲದೆ ಏಳು ಮಂದಿ ಗಂಡುಮಕ್ಕಳು, ಮೂರು ಮಂದಿ ಹೆಣ್ಣುಮಕ್ಕಳು ಹುಟ್ಟಿದರು. ಮೊದಲನೆಯವಳಿಗೆ ಯೆಮೀಮ, ಎರಡನೆಯವಳಿಗೆ ಕೆಚೀಯ, ಮೂರನೆಯವಳಿಗೆ ಕೆರೆನ್ಹಪ್ಪೂಕ್ ಎಂದು ಹೆಸರಿಟ್ಟನು. ಯೋಬನ ಮಕ್ಕಳಷ್ಟು ಸುಂದರವಾದ ಹೆಣ್ಣುಗಳು ಆ ನಾಡಿನಲ್ಲೆಲ್ಲೂ ಸಿಕ್ಕುತ್ತಿರಲಿಲ್ಲ. ಅವರ ತಂದೆ, ಅವರ ಅಣ್ಣತಮ್ಮಂದಿರಿಗೆ ಕೊಟ್ಟ ಹಾಗೆ ಅವರಿಗೂ ಸೊತ್ತನ್ನು ಹಂಚಿದನು. ತರುವಾಯ ಯೋಬನು ನೂರನಾಲ್ವತ್ತು ವರ್ಷ ಬಾಳಿದನು. ನಾಲ್ಕು ತಲೆಮಾರು ತನಕ ಮಕ್ಕಳನ್ನೂ ಮೊಮ್ಮಕ್ಕಳನ್ನೂ ಕಂಡನು. ಹಣ್ಣು ಹಣ್ಣು ಮುದುಕನಾಗಿ ಸತ್ತನು.
ಕೀರ್ತನೆ: 119:66, 71, 75, 91, 125, 130
ಶ್ಲೋಕ: ಪ್ರಭೂ, ತೋರು ನಿನ್ನ ಮುಖದರ್ಶನ ಈ ದಾಸನಿಗೆ
ಶುಭಸಂದೇಶ: ಲೂಕ 10:17-24
"ನಿಮ್ಮ ಹೆಸರುಗಳು ಸ್ವರ್ಗದಲ್ಲಿ ಲಿಖಿತವಾಗಿದೆ ಎಂದು ಸಂತೋಷ ಪಡಿ," ಕಳುಹಿಸಲಾಗಿದ್ದ ಎಪ್ಪತ್ತೆರಡು ಮಂದಿ ಸಂತೋಷಭರಿತರಾಗಿ ಹಿಂದಿರುಗಿ ಬಂದು, “ಸ್ವಾಮೀ, ನಿಮ್ಮ ಹೆಸರಿನಲ್ಲಿ ಆಜ್ಞೆಮಾಡಿದಾಗ ದೆವ್ವಗಳು ಕೂಡ ನಮಗೆ ಅಧೀನವಾಗುತ್ತವೆ,” ಎಂದು ವರದಿಮಾಡಿದರು. ಅದಕ್ಕೆ ಯೇಸು, “ಸೈತಾನನು ಆಕಾಶದಿಂದ ಸಿಡಿಲಿನಂತೆ ಬೀಳುವುದನ್ನು ಕಂಡೆನು. ಇಗೋ, ಸರ್ಪಗಳನ್ನು ಹಾಗೂ ಚೇಳುಗಳನ್ನು ತುಳಿಯುವುದಕ್ಕೂ ಶತ್ರುವಿನ ಸಮಸ್ತ ಶಕ್ತಿಯನ್ನು ಜಯಿಸುವುದಕ್ಕೂ ನಿಮಗೆ ಅಧಿಕಾರ ಕೊಟ್ಟಿದ್ದೇನೆ. ಯಾವುದೂ ನಿಮಗೆ ಹಾನಿಮಾಡದು. ಆದರೂ ದೆವ್ವಗಳು ನಿಮಗೆ ಅಧೀನವಾಗಿವೆಯೆಂದು ಸಂತೋಷಪಡುವುದಕ್ಕಿಂತ ನಿಮ್ಮ ಹೆಸರುಗಳು ಸ್ವರ್ಗದಲ್ಲಿ ಲಿಖಿತವಾಗಿವೆ ಎಂದು ಸಂತೋಷಪಡಿ,” ಎಂದು ಹೇಳಿದರು. ಅದೇ ಗಳಿಗೆಯಲ್ಲಿ ಯೇಸುಸ್ವಾಮಿ ಪವಿತ್ರಾತ್ಮರಿಂದ ಹರ್ಷಾವೇಶಗೊಂಡು, “ಪಿತನೇ, ಭೂಸ್ವರ್ಗಗಳ ಒಡೆಯನೇ, ಈ ವಿಷಯಗಳನ್ನು ಜ್ಞಾನಿಗಳಿಗೂ ಮೇಧಾವಿಗಳಿಗೂ ಮರೆಮಾಡಿ, ಮಕ್ಕಳಂಥವರಿಗೆ ನೀವು ಶ್ರುತಪಡಿಸಿದ್ದೀರಿ; ಇದಕ್ಕಾಗಿ ನಿಮ್ಮನ್ನು ವಂದಿಸುತ್ತೇನೆ. ಹೌದು ಪಿತನೇ, ಇದೇ ನಿಮ್ಮ ಸುಪ್ರೀತ ಸಂಕಲ್ಪ. ನನ್ನ ಪಿತ ಸಮಸ್ತವನ್ನೂ ನನ್ನ ವಶಕ್ಕೆ ಒಪ್ಪಿಸಿದ್ದಾರೆ. ಪುತ್ರನು ಯಾರೆಂದು ಪಿತನ ಹೊರತು ಬೇರಾರೂ ಅರಿಯರು. ಪಿತನು ಯಾರೆಂದು ಪುತ್ರನು ಮತ್ತು ಯಾರಿಗೆ ಪುತ್ರನು ಅವರನ್ನು ಶ್ರುತಪಡಿಸಲು ಇಚ್ಛಿಸುತ್ತಾನೋ ಅವನೇ ಹೊರತು ಮತ್ತಾರೂ ಅರಿಯರು,” ಎಂದು ಹೇಳಿದರು. ಅನಂತರ ಯೇಸು ಶಿಷ್ಯರ ಕಡೆ ತಿರುಗಿ, ಅವರಿಗೆ ಪ್ರತ್ಯೇಕವಾಗಿ, “ನೀವು ಕಾಣುವುದನ್ನು ಕಾಣುವ ಕಣ್ಣುಗಳು ಭಾಗ್ಯವುಳ್ಳವು. ಏಕೆಂದರೆ, ಎಷ್ಟೋ ಪ್ರವಾದಿಗಳು ಹಾಗೂ ಅರಸರು ನೀವು ನೋಡುವುದನ್ನು ನೋಡುವುದಕ್ಕೂ, ನೀವು ಕೇಳುವುದನ್ನು ಕೇಳುವುದಕ್ಕೂ ಆಶಿಸಿದರು. ಆದರೂ ಅದನ್ನು ಅವರು ನೋಡಲೂ ಇಲ್ಲ, ಕಾಣಲೂ ಇಲ್ಲ ಎಂದು ನಿಮಗೆ ಹೇಳುತ್ತೇನೆ,” ಎಂದರು.
ಮೊದಲನೇ ವಾಚನ: 1 ಕೊರಿಂಥಿಯರಿಗೆ 1:17-25 ಯೇಸುಕ್ರಿಸ್ತರು ನನ್ನನ್ನು ಕಳುಹಿಸಿರುವುದು ದೀಕ್ಷಾಸ್ನಾನವನ್ನು ಕೊಡುವುದಕ್ಕಲ್ಲ. ಶುಭಸಂದೇಶವನ್ನು ಸಾರುವುದಕ್ಕೆ ಅದೂ ವಾಕ...