ಮೊದಲನೇ ವಾಚನ : ದಾನಿಯೇಲ 7:13-14
24.11.24
23.11.24 - "ದೇವರು ಜೀವಂತರ ದೇವರೇ ಹೊರತು ಮೃತರ ದೇವರಲ್ಲ; ಅವರ ದೃಷ್ಟಿಯಲ್ಲಿ ಸರ್ವರೂ ಜೀವಂತರು,”
ಮೊದಲನೇ ವಾಚನ: ಪ್ರಕಟಣಾ ಗ್ರಂಥ 11:4-12
ಕೀರ್ತನೆ: 144:1, 2, 9-10
ಶ್ಲೋಕ: ಸ್ತುತಿಸ್ತೋತ್ರ ಪ್ರಭುವಿಗೆ, ನನ್ನಾಶ್ರಯ ದುರ್ಗಕೆ
ಶುಭಸಂದೇಶ: ಲೂಕ 20:27-40
22.11.24 - “ಯಾವನು ನನ್ನ ಹೆಸರಿನಲ್ಲಿ ಈ ಮಗುವನ್ನು ಸ್ವೀಕರಿಸುತ್ತಾನೋ ಅವನು ನನ್ನನ್ನೇ ಸ್ವೀಕರಿಸುತ್ತಾನೆ;"
ಮೊದಲನೇ ವಾಚನ: ಪ್ರಕಟಣಾ ಗ್ರಂಥ 10:8-11
ಸ್ವರ್ಗದಿಂದ ನನಗೆ ಕೇಳಿಸಿದ ಧ್ವನಿ ಮತ್ತೊಮ್ಮೆ ನನ್ನೊಡನೆ ಮಾತನಾಡಿ, “ಸಮುದ್ರದ ಮೇಲೆಯೂ ಭೂಮಿಯ ಮೇಲೆಯೂ ಕಾಲಿಟ್ಟು ನಿಂತಿರುವ ದೇವದೂತನ ಬಳಿಗೆ ಹೋಗು. ಆತನ ಕೈಯಲ್ಲಿರುವ ತೆರೆದ ಸುರುಳಿಯನ್ನು ತೆಗೆದುಕೋ,” ಎಂದು ತಿಳಿಸಿತು. ನಾನು ಆ ದೇವದೂತನ ಬಳಿಗೆ ಹೋಗಿ, “ಆ ಚಿಕ್ಕ ಸುರುಳಿಯನ್ನು ನನಗೆ ಕೊಡು,” ಎಂದು ಕೇಳಿದೆ. ಅವನು “ತೆಗೆದುಕೋ, ಇದನ್ನು ತಿನ್ನು. ಇದು ನಿನ್ನ ಹೊಟ್ಟೆಯಲ್ಲಿ ಕಹಿಯಾಗಿಯೂ ನಿನ್ನ ಬಾಯಲ್ಲಿ ಜೇನುತುಪ್ಪದಂತೆ ಸಿಹಿಯಾಗಿಯೂ ಇರುತ್ತದೆ,” ಎಂದನು. ಅಂತೆಯೇ, ನಾನು ಆ ಚಿಕ್ಕ ಸುರುಳಿಯನ್ನು ದೇವದೂತನ ಕೈಯಿಂದ ತೆಗೆದುಕೊಂಡು ತಿಂದೆ. ಅದು ನನ್ನ ಬಾಯಲ್ಲಿ ಜೇನುತುಪ್ಪದಂತೆ ಸಿಹಿಯಾಗಿತ್ತು. ಆದರೆ ಅದನ್ನು ತಿಂದಮೇಲೆ ನನ್ನ ಹೊಟ್ಟೆಯೆಲ್ಲಾ ಕಹಿಯಾಯಿತು. ಅನಂತರ, ದೇವದೂತನು ನನಗೆ, “ನೀನು ಇನ್ನೂ ಅನೇಕ ಜನರ, ಜನಾಂಗಗಳ, ಭಾಷೆಗಳನ್ನಾಡುವವರ ಹಾಗು ಅರಸರಾದವರ ವಿರುದ್ಧ ಪ್ರವಾದನೆಯನ್ನು ಸಾರಬೇಕು,” ಎಂದು ಆಜ್ಞಾಪಿಸಿದನು.
ಕೀರ್ತನೆ: 119:14, 24, 72, 103, 111, 131
ಶ್ಲೋಕ: ನಿನ್ನ ನುಡಿ ಎನಿತೋ ರುಚಿ ನನ್ನ ನಾಲಿಗೆಗೆ
ಶುಭಸಂದೇಶ: ಲೂಕ 19:45-48
21.11.24 - "ಯೇಸು ದೆವ್ವವನ್ನು ಗದರಿಸಿ, ಹುಡುಗನನ್ನು ಸ್ವಸ್ಥಮಾಡಿ, ಅವನನ್ನು ಅವನ ತಂದೆಗೆ ಒಪ್ಪಿಸಿದರು"
ಮೊದಲನೇ ವಾಚನ: ಪ್ರಕಟಣಾ ಗ್ರಂಥ 5:1-10
ನಾನು ಈ ದೃಶ್ಯವನ್ನು ಸಹ ಕಂಡೆ : ಸಿಂಹಾಸನದಲ್ಲಿ ಆಸೀನರಾಗಿರುವವರ ಬಲಗೈಯಲ್ಲಿ ಒಂದು ಸುರುಳಿ ಇತ್ತು. ಅದರ ಒಳಭಾಗದಲ್ಲೂ ಹೊರಭಾಗದಲ್ಲೂ ಬರೆಯಲಾಗಿತ್ತು. ಅದನ್ನು ಏಳು ಮುದ್ರೆಗಳಿಂದ ಮುದ್ರಿಸಲಾಗಿತ್ತು. ಬಲಿಷ್ಠ ದೇವದೂತನೊಬ್ಬನು ಮಹಾಶಬ್ದದಿಂದ, “ಈ ಮುದ್ರೆಗಳನ್ನು ಒಡೆದು ಸುರುಳಿಯನ್ನು ಬಿಚ್ಚಲು ಯೋಗ್ಯನು ಯಾರು?” ಎಂದು ಪ್ರಕಟಿಸಿದನು. ಸ್ವರ್ಗದಲ್ಲಾಗಲಿ, ಭೂಮಿಯಲ್ಲಾಗಲಿ, ಪಾತಾಳದಲ್ಲಾಗಲಿ, ಆ ಸುರುಳಿಯನ್ನು ಬಿಚ್ಚುವುದಕ್ಕೂ ಇಲ್ಲವೆ ಅದನ್ನು ಬಿಚ್ಚಿನೋಡುವುದಕ್ಕೂ ಯಾರಿಂದಲೂ ಸಾಧ್ಯವಾಗಲಿಲ್ಲ. ಆ ಸುರುಳಿಯನ್ನು ಬಿಚ್ಚಲೂ ನೋಡಲೂ ಯೋಗ್ಯನು ಒಬ್ಬನು ಇಲ್ಲವಲ್ಲ ಎಂದು ನಾನು ಬಹುವಾಗಿ ದುಃಖಿಸಿದೆ. ಆಗ ಸಭಾಪ್ರಮುಖರಲ್ಲಿ ಒಬ್ಬರು ನನಗೆ, “ದುಃಖಿಸಬೇಡ, ಇಗೋ, ಯೂದಕುಲದ ಸಿಂಹವೂ ದಾವೀದನ ವಂಶಜರೂ ಆದ ಒಬ್ಬರು ಜಯಗಳಿಸಿದ್ದಾರೆ. ಅವರು ಆ ಏಳು ಮುದ್ರೆಗಳನ್ನು ಒಡೆದು ಈ ಸುರುಳಿಯನ್ನು ಬಿಚ್ಚಬಲ್ಲರು", ಎಂದು ಹೇಳಿದರು. ಸಿಂಹಾಸನವೂ ನಾಲ್ಕು ಜೀವಿಗಳೂ ಇದ್ದ ಸ್ಥಳಕ್ಕೂ ಮತ್ತು ಸಭಾಪ್ರಮುಖರಿದ್ದ ಸ್ಥಳಕ್ಕೂ ನಡುವೆ ಒಂದು ಕುರಿಮರಿ ನಿಂತಿರುವುದನ್ನು ಕಂಡೆ. ಅದು ಈಗಾಗಲೇ ಬಲಿಗೋಸ್ಕರ ವಧೆಯಾಗಿದ್ದಂತೆ ಕಾಣುತ್ತಿತ್ತು. ಆ ಕುರಿಮರಿಗೆ ಏಳು ಕೊಂಬುಗಳೂ ಏಳು ಕಣ್ಣುಗಳೂ ಇದ್ದವು. ಇಡೀ ಜಗತ್ತಿಗೆ ಕಳುಹಿಸಲಾದ ದೇವರ ಸಪ್ತ ಆತ್ಮಗಳೇ ಅವು. ಆ ಯಜ್ಞದ ಕುರಿಮರಿಯಾದವರು ಮುಂದೆ ಬಂದು ಸಿಂಹಾಸನದಲ್ಲಿ ಆಸೀನರಾಗಿದ್ದವರ ಬಲಗೈಯಲ್ಲಿದ್ದ ಸುರುಳಿಯನ್ನು ತೆಗೆದುಕೊಂಡರು. ಸುರುಳಿಯನ್ನು ತೆಗೆದುಕೊಂಡಾಗ, ನಾಲ್ಕು ಜೀವಿಗಳೂ ಇಪ್ಪತ್ನಾಲ್ಕು ಮಂದಿ ಸಭಾಪ್ರಮುಖರೂ ಆ ಯಜ್ಞದ ಕುರಿಮರಿಯ ಪಾದಗಳಿಗೆ ಸಾಷ್ಟಾಂಗ ನಮಸ್ಕಾರ ಮಾಡಿದರು. ಸಭಾಪ್ರಮುಖರ ಕೈಗಳಲ್ಲಿ ಕಿನ್ನರಿಯೂ ಚಿನ್ನದ ಧೂಪಾರತಿಗಳೂ ಇದ್ದವು. ಆ ಧೂಪಾರತಿಗಳಲ್ಲಿ ದೇವಜನರ ಪ್ರಾರ್ಥನೆಯೆಂಬ ಧೂಪವು ತುಂಬಿತ್ತು. ಅವರು ಈ ಹೊಸ ಗೀತೆಯನ್ನು ಹಾಡುತ್ತಿದ್ದರು: ಸುರುಳಿಯನ್ನು ಸ್ವೀಕರಿಸಲು ನೀ ಯೋಗ್ಯನು ಅದರ ಮುದ್ರೆಗಳನ್ನು ಮುರಿಯಲು ನೀ ಶಕ್ತನು. ಸಮರ್ಪಿಸಿಕೊಂಡಿರುವೆ ನಿನ್ನನೇ ನೀ ಬಲಿಯರ್ಪಣೆಯಾಗಿ ಸಕಲ ದೇಶ, ಭಾಷೆ, ಕುಲಗೋತ್ರಗಳಿಂದ ಕೊಂಡುಕೊಂಡಿರುವೆ ಮಾನವರನು ನಿನ್ನ ರಕ್ತದಿಂದ. ಏರ್ಪಡಿಸಿದೆ ನೀ ಅವರನು ನಮ್ಮ ದೇವರಿಗೋಸ್ಕರ ರಾಜವಂಶವಾಗಿ, ಯಾಜಕವರ್ಗವಾಗಿ. ಆಳುವರವರು ಸಮಸ್ತ ಭುವಿಯ ಮೇಲೆ.”
ಕೀರ್ತನೆ: 149:1-2, 3-4, 5-6, 9
ಶ್ಲೋಕ: ಏರ್ಪಡಿಸಿದೆ ನೀ ಅವರನು ನಮ್ಮ ದೇವರಿಗೋಸ್ಕರ ರಾಜವಂಶವಾಗಿ, ಯಾಜಕವರ್ಗವಾಗಿ.
ಶುಭಸಂದೇಶ: ಲೂಕ 9:41-44
ಯೇಸುಸ್ವಾಮಿ ಜೆರುಸಲೇಮ್ ಪಟ್ಟಣಕ್ಕೆ ಇನ್ನೂ ಹತ್ತಿರವಾಗಿ ಬಂದು ಅದನ್ನು ನೋಡಿ, “ಇಂದಾದರೂ ನೀನು ಶಾಂತಿಮಾರ್ಗವನ್ನು ಅರಿತುಕೊಂಡಿದ್ದರೆ ಎಷ್ಟೋ ಚೆನ್ನಾಗಿರುತ್ತಿತ್ತು. ಆದರೆ ಅದು ಈಗ ನಿನ್ನ ಕಣ್ಣಿಗೆ ಮರೆಯಾಗಿದೆ. ಕಾಲವು ಬರುವುದು. ಆಗ ಶತ್ರುಗಳು ನಿನ್ನ ಸುತ್ತಲೂ ಆಳ್ವೇಲಿಯೆಬ್ಬಿಸಿ, ಮುತ್ತಿಗೆ ಹಾಕಿ, ಎಲ್ಲೆಡೆಯೂ ನುಗ್ಗಿ, ನಿನ್ನನ್ನೂ ನಿನ್ನೊಳಗಿನ ಜನರನ್ನೂ ಧ್ವಂಸಮಾಡುವರು; ನಿನ್ನಲ್ಲಿ ಕಲ್ಲಿನ ಮೇಲೆ ಕಲ್ಲು ನಿಲ್ಲದಂತೆ ಮಾಡುವರು. ಏಕೆಂದರೆ, ದೇವರು ನಿನ್ನನ್ನು ಅರಸಿ ಬಂದ ಕಾಲವನ್ನು ನೀನು ಅರಿತುಕೊಳ್ಳದೆ ಹೋದೆ,” ಎಂದು ಅದರ ಸಲುವಾಗಿ ಕಣ್ಣೀರಿಟ್ಟರು.
20.11.24 - "ಉಳ್ಳ ಪ್ರತಿಯೊಬ್ಬನಿಗೆ ಇನ್ನೂ ಹೆಚ್ಚಾಗಿ ಕೊಡಲಾಗುತ್ತದೆ, ಇಲ್ಲದವನಿಂದ ಇರುವ ಕಿಂಚಿತ್ತನ್ನೂ ಕಸಿದುಕೊಳ್ಳಲಾಗುತ್ತದೆ"
ಮೊದಲನೇ ವಾಚನ: ಪ್ರಕಟಣಾ ಗ್ರಂಥ 4:1-11
28.08.2026 - ಜಾಗೃತರಾಗಿರಿ! ಏಕೆಂದರೆ ಆ ದಿನವಾಗಲಿ, ಆ ಗಳಿಗೆ ಆಗಲಿ ಯಾವಾಗ ಬರುತ್ತದೆಂದು ನಿಮಗೆ ತಿಳಿಯದು
ಮೊದಲನೇ ವಾಚನ: 1 ಕೊರಿಂಥಿಯರಿಗೆ 1:17-25 ಯೇಸುಕ್ರಿಸ್ತರು ನನ್ನನ್ನು ಕಳುಹಿಸಿರುವುದು ದೀಕ್ಷಾಸ್ನಾನವನ್ನು ಕೊಡುವುದಕ್ಕಲ್ಲ. ಶುಭಸಂದೇಶವನ್ನು ಸಾರುವುದಕ್ಕೆ ಅದೂ ವಾಕ...
-
ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 15:22-31 ಅನಂತರ ಪ್ರೇಷಿತರೂ ಸಭಾಪ್ರಮುಖರೂ ಇಡೀ ಧರ್ಮಸಭೆಯ ಸಮ್ಮತಿಪಡೆದು, ತಮ್ಮಲ್ಲಿ ಕೆಲವರನ್ನು ಆರಿಸಿ, ಪೌಲ ಮತ್ತು ಬಾರ್ಸಬ...
-
ಮೊದಲನೇ ವಾಚನ: 2 ತಿಮೊಥೇಯನಿಗೆ 4:1-8 ದೇವರ ಸಮಕ್ಷಮದಲ್ಲಿ, ಮತ್ತು ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರ್ಪನ್ನು ಕೊಡಲು ಬರುವ ಕ್ರಿಸ್ತಯೇಸುವಿನ ಸಮಕ್ಷಮದಲ್ಲಿ, ನಾನ...
-
ಮೊದಲನೇ ವಾಚನ: ಯೆಶಾಯ 52:13-53:12 ನನ್ನ ದಾಸನಿದೋ, ಕೃತಾರ್ಥ ಆಗುವವನಾತ ಮಹಿಮಾನ್ವಿತ ಏರುವನು ಉನ್ನತ ಪದವಿಗಾತ. ಆತನ ಮುಖ ನರಮಾನವರ ಮುಖಕ್ಕಿಂತ ಆತನ ರೂಪ ನರಪುತ್ರರ ...








